ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪನವರ ಫೋಟೊ ಮಿಸ್ ಆಗಿರುವುದು ನನಗೂ ನೋವು ತಂದಿದೆ; ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟೀಕರಣ

ಆದರೆ ಈ ಜಾಹೀರಾತಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೊ ಇದ್ದಿರಲಿಲ್ಲ. ಈ ಕಾರಣದಿಂದ ಜಾಹಿರಾತು ಕರ್ನಾಟಕದ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು.

ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪನವರ ಫೋಟೊ ಮಿಸ್ ಆಗಿರುವುದು ನನಗೂ ನೋವು ತಂದಿದೆ; ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟೀಕರಣ
ಸಚಿವೆ ಶಶಿಕಲಾ ಜೊಲ್ಲೆ
Follow us
TV9 Web
| Updated By: guruganesh bhat

Updated on:Jul 20, 2021 | 8:13 PM

ರಾಷ್ಟ್ರೀಯ ಆಂಗ್ಲ ಮಾಧ್ಯಮಕ್ಕೆ ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಫೋಟೋ ಹಾಕದಿರುವುದು ಉದ್ದೇಶಪೂರ್ವಕ ಕೆಲಸ ಅಲ್ಲ. ಇದು ಜಾಹೀರಾತು ಏಜೆನ್ಸಿ ಕಡೆಯಿಂದ ಆಗಿರುವ ಪ್ರಮಾದ. ಇನ್ನು ಮುಂದೆ ಹೀಗೆ ಆಗದಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪರ ಫೋಟೋ ಮಿಸ್ ಆಗಿರುವುದಕ್ಕೆ ಗೊಂದಲ ಬೇಡ. ಜಾಹೀರಾತಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಚಿತ್ರ ಪ್ರಕಟಿಸದಿರುವುದು ನನಗೂ ಬೇಸರ ತರಿಸಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. 

ನಿನ್ನೆ ಸೋಮವಾರ ರಾಷ್ಟ್ರೀಯ ಆಂಗ್ಲ ದಿನಪತ್ರಿಕೆಯ ದೆಹಲಿ ಆವೃತ್ತಿಯಲ್ಲಿ ಸಿಎಂ ಯಡಿಯೂರಪ್ಪ ಸಂಪುಟದ ಸಚಿವೆ ಶಶಿಕಲಾ ಜೊಲ್ಲೆ ಅವರು With best wishes from Jolle Group of Companies  ಎಂಬ ಜಾಹೀರಾತು ನೀಡಿದ್ದಾರೆ. ಅದರಲ್ಲಿ ಸಹಕಾರ ಖಾತೆ ಸೃಷ್ಟಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ವಂದನೆಗಳನ್ನು ತಿಳಿಸುತ್ತಾ, ಸಹಕಾರ ಸಚಿವ ಸ್ಥಾನ ಪಡೆದ ಅಮಿತ್​ ಶಾ ಅವರನ್ನು ಅಭಿನಂದಿಸಿದ್ದಾರೆ. ಜೊತೆಗೆ ಕರ್ನಾಟಕಕ್ಕೆ 6 ಸಚಿವ ಸ್ಥಾನಗಳನ್ನುನೀಡಿ, ರಾಜ್ಯಕ್ಕೆ ಗರಿಷ್ಠ ಸ್ಥಾನಮಾನ ನೀಡಿದ್ದಕ್ಕೆ ಥ್ಯಾಂಕ್ಸ್​ ಅಂದಿದ್ದಾರೆ. ಇದರ ಜೊತೆಗೆ ಇಡೀ ಪುಟದಲ್ಲಿ ಹಲವು ಬಿಜೆಪಿ ನಾಯಕರ ಫೋಟೋಗಳು ರಾರಾಜಿಸಿವೆ. ಆದರೆ ಈ ಜಾಹೀರಾತಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೊ ಇದ್ದಿರಲಿಲ್ಲ. ಈ ಕಾರಣದಿಂದ ಜಾಹೀರಾತು ಕರ್ನಾಟಕದ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು.

ಇದನ್ನೂ ಓದಿ: 

ದೆಹಲಿ ಆಂಗ್ಲ ಪತ್ರಿಕೆಯಲ್ಲಿ ರಾಜ್ಯ ಬಿಜೆಪಿ ಸಚಿವೆಯಿಂದ ಮುಖಪುಟ ಜಾಹೀರಾತು! ಆದ್ರೆ ಯಡಿಯೂರಪ್ಪ ಫೋಟೋ ಮಾಯ! ಏನಿದರ ಮಾಯೆ?

ಸಿದ್ದರಾಮಯ್ಯ, ಕುಮಾರಸ್ವಾಮಿ ಆಪ್ತ ಸಹಾಯಕರು ಮತ್ತು ದೇವೇಗೌಡರ ಗನ್ ಮ್ಯಾನ್ ಫೋನ್ ಕದ್ದಾಲಿಕೆ ಮಾಡಲಾಗಿದೆ: ಕಾಂಗ್ರೆಸ್ ಗಂಭೀರ ಆರೋಪ

(Minister Shashikala Jolle clarifies about advertisement that missed CM Yediyurappa photo)

Published On - 8:11 pm, Tue, 20 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ