ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಯಾರೂ ಊಹೆ ಮಾಡದ ಅಚ್ಚರಿ ಅಭ್ಯರ್ಥಿ ನಿಲ್ತಾರೆ: ಶ್ರೀರಾಮುಲು ಸ್ಫೋಟಕ ಹೇಳಿಕೆ
ಸಿದ್ದರಾಮಯ್ಯನವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯನ್ನು ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಚಿಂತನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಯಾರೂ ಊಹೆ ಮಾಡದ ಅಚ್ಚರಿ ಅಭ್ಯರ್ಥಿ ನಿಲ್ತಾರೆ ಎಂದಿದ್ದಾರೆ.
ಕೊಪ್ಪಳ: 2023ರ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವ ಕ್ಷೇತ್ರ ಯಾವುದು ಎಂದು ತೀವ್ರ ಕುತೂಹಲ ಮೂಡಿಸಿದೆ. ಇದರ ಮಧ್ಯೆ ಸಿದ್ದರಾಮಯ್ಯನವರು ಇಂದು(ನ.13) ವಿಶೇಷ ಬಸ್ ನಲ್ಲಿ ಕೋಲಾರಕ್ಕೆ ತೆರಳಿದ್ದು, ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಸುಳಿವು ಸಹ ನೀಡಿದ್ದಾರೆ.
ಇನ್ನು ಇದಕ್ಕೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಶ್ರೀರಾಮುಲು, ಚುನಾವಣೆ ಗಿಮಿಕ್ ಗಾಗಿ ಕೋಲಾರ ಯಾತ್ರೆ ಮಾಡ್ತಾಯಿದ್ದಾರೆ. ರಾಜಕಿಯ ಪುನರ್ಜನ್ಮ ನೀಡಿದ ಬಾದಾಮಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಮೋಸ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರು ಕೊನೆದಾಗಿ ಸ್ಪರ್ಧೆ ಮಾಡೋದು ವರುಣಾದಲ್ಲೇ. ವರುಣಾದಿಂದ ಕೂಡಾ ಅವರನ್ನ ಸೋಲಿಸ್ಲಿಕ್ಕೆ ನಮ್ಮ ಕಾರ್ಯಕರ್ತರು ಕೆಲಸ ಮಾಡ್ತಾರೆ. ಬಿಜೆಪಿಯಿಂದ ಯಾರೂ ಊಹೆ ಮಾಡದ ಅಚ್ಚರಿ ಅಭ್ಯರ್ಥಿ ನಿಲ್ತಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published on: Nov 13, 2022 03:49 PM
Latest Videos