ಈ ಬಾರಿ ಮತ್ತೊಮ್ಮೆ ಬಾದಾಮಿಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಶ್ರೀರಾಮುಲು
ನಾನು ಕೂಡ ಬಾದಾಮಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ಈಗಾಗಲೇ ಬಾದಾಮಿ ಕ್ಷೇತ್ರಕ್ಕೆ ನಾಲ್ವರು ಆಕಾಂಕ್ಷಿಗಳು ಇದ್ದಾರೆ. ನಾಲ್ವರು ಆಕಾಂಕ್ಷಿಗಳ ಜತೆ ನಾನು ಕೂಡ ಟಿಕೆಟ್ ಆಕಾಂಕ್ಷಿ. ಐವರು ಪಂಚಪಾಂಡವರ ರೀತಿ ಅಣ್ಣತಮ್ಮಂದಿರಂತೆ ಇದ್ದೇವೆ, ನಾವೆಲ್ಲ ಸೇರಿ ಕೌರವ ಸೇನೆ ಕಾಂಗ್ರೆಸ್ ಪಕ್ಷವನ್ನು ಸದೆಬಡಿಯುತ್ತೇವೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಬಾಗಲಕೋಟೆ: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, (Karnataka Assembly Election) ಇನ್ನೇನು ಕೆಲವು ದಿನಗಳಲ್ಲಿ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ಮೂರು ಪ್ರಮುಖ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿವೆ. ಜೊತೆಗೆ ನಾಯಕರು ಕ್ಷೇತ್ರ ಆಯ್ಕೆಯಲ್ಲೂ ತೊಡಗಿಕೊಂಡಿದ್ದಾರೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಲ್ಲಿ (Badami) ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಸಾರಿಗೆ ಸಚಿವ ಬಿ. ಶ್ರೀರಾಮುಲು (B.Sriramulu) ಸ್ಪರ್ಧಿಸಿ ಅಲ್ಪ ಮತಗಳಿಂದ ಪರಾಭವಗೊಂಡಿದ್ದರು. ಈಗ ಮತ್ತೆ ಅದೇ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.
ಬಾದಾಮಿ ಪಟ್ಟಣದ ಎಸ್ಟಿ ಸಮಾವೇಶದಲ್ಲಿ ಮಾತನಾಡಿದ ಅವರು ನಾನು ಕೂಡ ಬಾದಾಮಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ಈಗಾಗಲೇ ಬಾದಾಮಿ ಕ್ಷೇತ್ರಕ್ಕೆ ನಾಲ್ವರು ಆಕಾಂಕ್ಷಿಗಳು ಇದ್ದಾರೆ. ನಾಲ್ವರು ಆಕಾಂಕ್ಷಿಗಳ ಜತೆ ನಾನು ಕೂಡ ಟಿಕೆಟ್ ಆಕಾಂಕ್ಷಿ. ಐವರು ಪಂಚಪಾಂಡವರ ರೀತಿ ಅಣ್ಣತಮ್ಮಂದಿರಂತೆ ಇದ್ದೇವೆ, ನಾವೆಲ್ಲ ಸೇರಿ ಕೌರವ ಸೇನೆ ಕಾಂಗ್ರೆಸ್ ಪಕ್ಷವನ್ನು ಸದೆಬಡಿಯುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ಯುವ ಮತದಾರರನ್ನು ಸೆಳೆಯಲು ಸರ್ಕಾರ ಭರ್ಜರಿ ಪ್ಲ್ಯಾನ್: ಪ್ರತಿ ಗ್ರಾಮ ಪಂಚಾಯಿತಿಗೆ ಯುವಕರ ಸಂಘ ರಚನೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಶ್ರೀರಾಮುಲು, ಮತ್ತೊಮ್ಮೆ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುವ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ.
ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟ ಶ್ರೀರಾಮುಲು
ಶನಿವಾರ (ಮಾ.10) ರಂದು ವಿಜಯಪುರದಲ್ಲಿ ಶ್ರೀರಾಮುಲು, ಉಪ ಮುಖ್ಯಮಂತ್ರಿ ಪಾಳಯ ಹೋಗಿದೆ, ಈಗ ಪ್ರಮೋಷನ್, ಈಗ ಮುಖ್ಯಮಂತ್ರಿ ಪಾಳಯ, ಪಾರ್ಟಿ ಅವಕಾಶ ಮಾಡಿಕೊಟ್ಟರೇ ಸಿಎಂ ಆಗುತ್ತೇನೆ ಎನ್ನುವ ಮೂಲಕ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:34 pm, Sun, 12 March 23