AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ

ಸರ್ಕಾರ ಒಳ್ಳೆ ಕೆಲಸ ಮಾಡಿದೆ ಎಂಬ ಒಳ್ಳೆ ಅಭಿಪ್ರಾಯ ಜನರಲ್ಲಿದೆ. ಸಿಎಂ ಯಡಿಯೂರಪ್ಪರ ವರ್ಚಸ್ಸು ಹಿಂದೆ 2008ರಲ್ಲಿ ಹೇಗಿತ್ತೋ ಈಗಲೂ ಹಾಗೇ ಇದೆ. ಇನ್ನಷ್ಟು ಜನಪರ ಯೋಜನೆ ಮಾಡಿ, ಸ್ಕೀಂ ಕೊಡಬೇಕು ಅಂತ ಸಿಎಂ ಯಡಿಯೂರಪ್ಪರಿಗೆ ವಿನಂತಿ ಮಾಡಿದ್ದೇವೆ. ನಿಮ್ಮ ಜೊತೆಗೆ ನಾವಿದ್ದೇವೆ ಅಂತ ಯಡಿಯೂರಪ್ಪರಿಗೆ ಹೇಳಿದ್ದೇವೆ ಎಂದು ಅವರು ತಿಳಿಸಿದರು.

ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ
ನಾನು ಯಡಿಯೂರಪ್ಪ ಕ್ಯಾಂಪ್ ಬದಲಾಯಿಸಿಲ್ಲ: ದೆಹಲಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ
Follow us
guruganesh bhat
|

Updated on: May 30, 2021 | 3:26 PM

ಬೆಂಗಳೂರು: ಕೊರೊನಾ ಸಮಯದಲ್ಲಿ ಪ್ರತಿನಿತ್ಯ 18 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೇವೆ. ನಾವು ಮಾಲೀಕರಲ್ಲ, ಜನ ಸೇವಕರು. ನಮ್ಮ ಕ್ಷೇತ್ರದಲ್ಲಿ ನಾವು ಮಾಡಿರುವ ಕೆಲಸವನ್ನು ಸಿಎಂ ಯಡಿಯೂರಪ್ಪರಿಗೆ ತಿಳಿಸಿದ್ದೇವೆ. ನಿಮ್ಮ ಜೊತೆಗೆ ನಾವಿದ್ದೇವೆಂದು ಭರವಸೆ ತುಂಬಿದ್ದೇವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ನಾವು 18 ಶಾಸಕರು ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ನಮ್ಮ ಕ್ಷೇತ್ರಗಳ ಕೊವಿಡ್ ನಿರ್ವಹಣೆಯನ್ನು ಸಮರ್ಥವಾಗಿ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದೇವೆ. ಕೊವಿಡ್ ಸೋಂಕಿತರು ಇರುವ ವಾರ್ಡ್ ಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಅಂತಹ ಸಂದರ್ಭದಲ್ಲಿ ನಾವು ಯಾರೂ ಬೆಂಗಳೂರಿಗೆ ಬಂದಿರಲಿಲ್ಲ. ನಮ್ಮ ಕ್ಷೇತ್ರದಲ್ಲಿ ಆಕ್ಸಿಜನ್ ಘಟಕ ವ್ಯವಸ್ಥೇ ಮಾಡಿದ್ದೇವೆ. ಆಕ್ಸಿಜನ್ ಸಾಂದ್ರಕ ತರಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪರ ಮಾರ್ಗದರ್ಶನದಲ್ಲಿ ಕೊವಿಡ್ ಎರಡೂ ಅಲೆಯನ್ನು ಎದುರಿಸಿದ್ದೇವೆ. ಹೀಗಾಗಿ ನಾವು ಮಾಲೀಕರಲ್ಲ, ಜನರ ಸೇವಕರು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ವ್ಯಾಖ್ಯಾನಿಸಿದರು.

ಸರ್ಕಾರ ಒಳ್ಳೆ ಕೆಲಸ ಮಾಡಿದೆ ಎಂಬ ಒಳ್ಳೆ ಅಭಿಪ್ರಾಯ ಜನರಲ್ಲಿದೆ. ಸಿಎಂ ಯಡಿಯೂರಪ್ಪರ ವರ್ಚಸ್ಸು ಹಿಂದೆ 2008ರಲ್ಲಿ ಹೇಗಿತ್ತೋ ಈಗಲೂ ಹಾಗೇ ಇದೆ. ಇನ್ನಷ್ಟು ಜನಪರ ಯೋಜನೆ ಮಾಡಿ, ಸ್ಕೀಂ ಕೊಡಬೇಕು ಅಂತ ಸಿಎಂ ಯಡಿಯೂರಪ್ಪರಿಗೆ ವಿನಂತಿ ಮಾಡಿದ್ದೇವೆ. ನಿಮ್ಮ ಜೊತೆಗೆ ನಾವಿದ್ದೇವೆ ಅಂತ ಯಡಿಯೂರಪ್ಪರಿಗೆ ಹೇಳಿದ್ದೇವೆ ಎಂದು ಅವರು ತಿಳಿಸಿದರು.

ನಮಗೆ ಸಿಕ್ಸರ್, ಬೌಂಡರಿ ಬಾರಿಸೋದು ಗೊತ್ತು. ಕ್ಯಾಚ್ ಹಿಡಿಯುವುದು ಕೂಡ ನಮಗೆ ಗೊತ್ತಿದೆ. ಕೊರೊನಾ ಮುಗಿಯಲಿ ಎಲ್ಲಾ ಶಾಸಕರ ಬಗ್ಗೆ ತಿಳಿಯಲಿದೆ. ಇಲ್ಲಿ ಯಾರೂ ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್​ ಮಾಡುತ್ತಿಲ್ಲ. ಚನ್ನಪಟ್ಟಣದಲ್ಲಿ‌ ಸೋತಿರುವ ವ್ಯಕ್ತಿಗೆ ನಾಚಿಕೆ ಆಗಬೇಕು. ತಾಕತ್ತಿದ್ದರೆ ನನ್ನ ವಿರುದ್ಧ ತೊಡೆ ತಟ್ಟಿ ಬರಲಿ. ಅರಣ್ಯ ಸಚಿವರಾಗಿ ಲೂಟಿ ಹೊಡೆದಿರುವುದುನ್ನು ಕೊರೊನಾ ಮುಗಿದ ಬಳಿಕ ಎಲ್ಲ ಬಹಿರಂಗ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದರು.

ಇದನ್ನೂ ಓದಿ: ಕೊರೊನಾ ಗೆದ್ದ ಬಳ್ಳಾರಿಯ ಶತಾಯುಷಿ ದಂಪತಿ; ಹದಿನೈದು ದಿನಗಳಲ್ಲಿ ಕೊವಿಡ್​ನಿಂದ ಗುಣಮುಖ

ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್: ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯ ತಪ್ಪಿಸಲು ವಯೋಮಿತಿಯನ್ನು 25ಕ್ಕೆ ಇಳಿಸಲು ಮನವಿ

(MLA Renukacharya supports BS Yediyurappa as CM Karnataka BJP govt leader)

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ