ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟದ ನಡುವೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರದಿಂದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೇಳಲು ಆರಂಭವಾಗಿತ್ತು. ಇದೀಗ, ರಾಜ್ಯಾಧ್ಯಕ್ಷ ಸ್ಥಾನ ಬಿವೈ ವಿಜಯೇಂದ್ರಗೆ, ವಿಪಕ್ಷ ಸ್ಥಾನ ಆರ್.ಅಶೋಕಗೆ ಸಿಗುತ್ತಿದ್ದಂತೆ ಎದ್ದಿದ್ದ ಅಸಮಾಧಾನ ಸ್ಫೋಟಗೊಂಡಿದೆ. ಈ ನಡುವೆ ಪಕ್ಷದ ಮೇಲೆ ಮುನಿಸಿಕೊಂಡಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕುಮಾರಸ್ವಾಮಿ ಮಾಡಿದ ಆರೋಪಗಳನ್ನು ತಳ್ಳಿಹಾಕಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟದ ನಡುವೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್
ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್
Follow us
| Edited By: Rakesh Nayak Manchi

Updated on: Nov 18, 2023 | 2:06 PM

ಕಾರವಾರ, ನ.18: ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರದಿಂದ ಬಿಜೆಪಿಯಲ್ಲಿ ಭುಗಿಲೆದ್ದಿದ್ದ ಅಸಮಾಧಾನ ರಾಜ್ಯಾಧ್ಯಕ್ಷ ಸ್ಥಾನ ಬಿವೈ ವಿಜಯೇಂದ್ರಗೆ, ವಿಪಕ್ಷ ಸ್ಥಾನ ಆರ್.ಅಶೋಕ ಅವರ ಪಾಲಾಗುತ್ತಿದ್ದಂತೆ ಸ್ಫೋಟಗೊಂಡಿದೆ. ಈ ನಡುವೆ ಪಕ್ಷದ ಮೇಲೆ ಮುನಿಸಿಕೊಂಡಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಅವರು ಹೆಚ್​.ಡಿ. ಕುಮಾರಸ್ವಾಮಿ (H.D. Kumaraswamy) ಮಾಡಿದ ಆರೋಪಗಳನ್ನು ತಳ್ಳಿಹಾಕಿ ಸಿಎಂ ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್ ಬೀಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತನಾಡಿದ ಶಿವರಾಮ್ ಹೆಬ್ಬಾರ್, ಕುಮಾರಸ್ವಾಮಿ ಮಾತು ಕೇಳಿದರೆ ನಾವು ಚಿಕ್ಕವರಿದ್ದಾಗ ಗುಡು ಗುಡು ಹೇಳುತ್ತಿದ್ದವರ ಹಾಗೆ ಇದೆ. ಕುಮಾರಸ್ವಾಮಿ ಯಾವಾಗಲೂ ಹೀಗೆ. ಕಳೆದ ಎರಡು ಮೂರು ತಿಂಗಳ ಹಿಂದೆ ಪೆಂಡ್ರೈವ್ ಹಿಡಿದು ತೋರಿಸುತ್ತಿದ್ದರು ಎನ್ನುತ್ತಾ ಹಿಂಗೆ ನೋಡಿ ಅಂತಾ ಕೈ ಮಾಡಿ ವ್ಯಂಗ್ಯವಾಡಿದರು.

ಅಲ್ಲದೆ, ಆ ಪೆಂಡ್ರೈವ್​ನಲ್ಲಿ ಎನಿತ್ತೊ ಗೊತ್ತಿಲ್ಲ. ಆ ಪೆಂಡ್ರೈವ್ ಎಲ್ಲಿ ಹೋಗಿದೆಯೋ ಗೊತ್ತಿಲ್ಲ. ಕುಮಾರಸ್ವಾಮಿ ಪ್ರತಿ ದಿವಸ ಒಂದೊಂದು ಬಾಂಬ್ ಹಾಕುತ್ತಲೇ ಇರುತ್ತಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅವರ ಮಾತನ್ನ ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ಯತೀಂದ್ರ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ

ನನ್ನ ಅಸಮಾಧಾನ ಏನು ಎಂಬುವುದನ್ನ ಎಲ್ಲಿ ಹೇಳಬೇಕೋ ಅಲ್ಲಿ ಹೇಳಿದ್ದೇನೆ. ನಾನು ಅವತ್ತು ಒಂದು ಮಾತನ್ನು ಹೇಳಿದ್ದೇನೆ, ಇವತ್ತು ಹೇಳುತ್ತಿದ್ದೇನೆ. ನಾನು ಲಿಡರ್ ಬೆಸ್ ಪೊಲಿಟಿಸಿಯನ್ ಅಲ್ಲ, ನಾನು ಕೆಡರ್ ಬೆಸ್ ಪೊಲಿಟಿಸಿಯನ್. ನಾಯಕತ್ವ ಆಧಾರ ಮೇಲೆ ರಾಜಕೀಯ ಮಾಡುತ್ತಿಲ್ಲ. ಜನರ ಜೊತೆಗೆ ಜನರಿಂದ ರಾಜಕೀಯ ಮಾಡುತ್ತಿದ್ದೇನೆ ಎಂದರು.

ನನ್ನ ಭಾವನೆಗಳಿಗೆ ಧಕ್ಕೆ ಬಂದಾಗ ಸಹಿಸಿಕೊಳ್ಳುವುದಿಲ್ಲ, ಸ್ವಾಭಿಮಾನ ಜಿವಂತಿಕೆ ಇಟ್ಟುಕೊಂಡು ಹೊಗಲೇಬೆಕಿತ್ತು. ನನ್ನಂತಹ ರಾಜಕಾರಣಿಗೆ ಇಂತಹದ್ದು ಅವಶ್ಯಕ ಅದಕ್ಕೆ ಹೀಗೆ ಮಾಡಿದ್ದು. ಮುಂದಿನ ಸಭೆಗಳಲ್ಲಿ ಭಾಗವಹಿಸಬೇಕೊ ಬೇಡವೋ ಎಂಬುದನ್ನು ಕಾದು ನೋಡೋಣ. ಈಗಾಲೇ ಎಲ್ಲ ನಿರ್ಧಾರ ಮಾಡುವುದು ಬೇಡ ಮುಂದೆ ಕಾದು ನೋಡಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!