ಧಾರವಾಡ ಜಿಲ್ಲೆಗೆ ಪ್ರವೇಶ ಕೋರಿ ಶಾಸಕ ವಿನಯ್ ಕುಲಕರ್ಣಿ ಅರ್ಜಿ: ಜನವರಿ 17 ಕ್ಕೆ ವಿಚಾರಣೆ ಮುಂದೂಡಿಕೆ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 11, 2023 | 5:24 PM

Vinay Kulkarni: ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬಳಿಕ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ಜನವರಿ 17 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ಧಾರವಾಡ ಜಿಲ್ಲೆಗೆ ಪ್ರವೇಶ ಕೋರಿ ಶಾಸಕ ವಿನಯ್ ಕುಲಕರ್ಣಿ ಅರ್ಜಿ: ಜನವರಿ 17 ಕ್ಕೆ ವಿಚಾರಣೆ ಮುಂದೂಡಿಕೆ
ಶಾಸಕ ವಿನಯ್ ಕುಲಕರ್ಣಿ
Follow us on

ಧಾರವಾಡ, ಡಿಸೆಂಬರ್​​ 11: ಧಾರವಾಡ ಜಿಲ್ಲೆ ಪ್ರವೇಶ ಕೋರಿ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬಳಿಕ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ಜನವರಿ 17 ಕ್ಕೆ ವಿಚಾರಣೆ ಮುಂದೂಡಲಾಗಿದೆ. ಜನಪ್ರತಿನಿಧಿಯಾಗಿರುವ ಹಿನ್ನಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿದ್ದರು. ಇದಕ್ಕೂ ಮೊದಲು ಚುನಾವಣೆ ಸ್ಪರ್ಧಿಸಿದ್ದಾಗ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು.

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊಳಿಸುವ ಸಾಧ್ಯತೆ ಹಿನ್ನೆಲೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಹಲವು ಬಾರಿ ಪ್ರವೇಶ ಕೋರಿ ಕೋರ್ಟ್​ಗೆ ಮನವಿ ಸಲ್ಲಿಸಿದರೂ ಕುಲಕರ್ಣಿಗೆ ಅನುಮತಿ ಸಿಗುತ್ತಿಲ್ಲ. ಇತ್ತೀಚೆಗೆ ನಡೆದ ವಿಚಾರಣೆಯಲ್ಲಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು.

ಇದನ್ನೂ ಓದಿ: ಧಾರವಾಡ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿತ್ತು. ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪ ಶಾಸಕ ವಿನಯ್ ಕುಲಕರ್ಣಿ ಮೇಲಿದೆ.

ಏನಿದು ಪ್ರಕರಣ?

ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಗೌಡರ್ ಅವರನ್ನು ಜೂನ್ 2016 ರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 2020 ರಲ್ಲಿ ವಿನಯ್ ಕಲಕರ್ಣಿ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಬೆದರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ: ಬಿ ರಿಪೋರ್ಟ್ ತಿರಸ್ಕರಿಸಿದ ಹೈಕೋರ್ಟ್

ಅಲ್ಲದೆ, ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ಧಪಡಿಸುವುದಾಗಿ ಕೋರ್ಟ್ ಎಚ್ಚರಿಕೆ ಕೂಡ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.