AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿ: ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ; ಸಂಕ್ರಾಂತಿಯೊಳಗೆ ನೇಮಕ- ಡಿಕೆ ಶಿವಕುಮಾರ್​

ನಿಗಮ ಮಂಡಳಿಗಳಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು. ನಾವು ನೀಡಿದ ಪಟ್ಟಿಯನ್ನು ವರಿಷ್ಠರು ಒಪ್ಪಿಕೊಂಡಿದ್ದಾರೆ. ಸಂಕ್ರಾಂತಿ ಒಳಗೆ ನೇಮಕ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ನಿಗಮ ಮಂಡಳಿ: ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ; ಸಂಕ್ರಾಂತಿಯೊಳಗೆ ನೇಮಕ- ಡಿಕೆ ಶಿವಕುಮಾರ್​
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Dec 30, 2023 | 3:05 PM

ಬೆಂಗಳೂರು, ಡಿಸೆಂಬರ್​ 30: ನಿಗಮ ಮಂಡಳಿಗಳಲ್ಲಿ (Board and Corporation) ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು. ನಾವು ನೀಡಿದ ಪಟ್ಟಿಯನ್ನು ವರಿಷ್ಠರು ಒಪ್ಪಿಕೊಂಡಿದ್ದಾರೆ. ಸಂಕ್ರಾಂತಿ ಒಳಗೆ ನೇಮಕ ಮಾಡಲಾಗುತ್ತದೆ. ಕಾರ್ಯಕರ್ತರ ಪಟ್ಟಿ ಬಂದಿದೆ, ಈ ಬಗ್ಗೆ ಚರ್ಚೆ ಮಾಡಲು 10ನೇ ತಾರೀಕು ಸಭೆ ಕರೆದಿದ್ದೇವೆ. ಬ್ಲಾಕ್ ಅಧ್ಯಕ್ಷರ ಜೊತೆಯೂ ಚರ್ಚೆ ಮಾಡಿ ಅಂತಿಮಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಟ್ಟಿಯನ್ನ ಪಕ್ಷದ ವರಿಷ್ಠರು ಒಪ್ಪಿಕೊಂಡಿದ್ದಾರೆ. ಸಂಕ್ರಾಂತಿಯೊಳಗೆ ಅಧ್ಯಕ್ಷರ ನೇಮಕ ಆಗುತ್ತದೆ. ಇನ್ನು ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ವಿಚಾರವಾಗಿ ಮಾತನಾಡಿದ ಅವರು ಜನವರಿ ನಾಲ್ಕರಂದು ನಾನು ಮತ್ತು ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತೇವೆ. ಪಕ್ಷದ ಸಭೆ ಇದೆ, ಚರ್ಚೆ ಮಾಡುವುದಿದೆ. ನಮ್ಮೆಲ್ಲಾ ಮಂತ್ರಿಗಳು ವರದಿ ನೀಡಿದ್ದಾರೆ. ಅಭ್ಯರ್ಥಿಗಳ ಬಗ್ಗೆ ಸರ್ವೆ ಮಾಡಬೇಕು, ಕ್ಷೇತ್ರಗಳಿಗೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಅಲ್ಪಸಂಖ್ಯಾತರ ಕಾಲೋನಿ ಅಬೀವೃದ್ಧಿಗೆ ಸಾವಿರ ಕೋಟಿ ಅನುದಾನ ಘೋಷಣೆ ವಿಚಾರವಾಗಿ ಮಾತನಾಡಿದ ಅವರು ರಾಮನಗರಕ್ಕೆ ಬಂದು ನೋಡಿ, ಕರೆದುಕೊಂಡು ಹೋಗುತ್ತೇನೆ. ಬೇರೆಯವರಿಗೂ, ನಮಗೂ ವ್ಯತ್ಯಾಸವಿದೆ. ಆ ಜನರ (ಅಲ್ಪಸಂಖ್ಯಾತರ) ಬದುಕು ಬದಲಾವಣೆ ಮಾಡಬೇಕು. ಮುಖ್ಯಮಂತ್ರಿಗಳು ಒಳ್ಳೆಯ ನಿರ್ಧಾರ ಮಾಡಿದ್ದಾರೆ. ಬಿಜೆಪಿಯವರು ಇದನ್ನು ಮಾಡುತ್ತಿರಲಿಲ್ಲ, ನಾವು ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಮತ್ತಷ್ಟು ವಿಳಂಬ: ಶಾಸಕರಿಗಷ್ಟೇ ಪಟ್ಟ ಕಟ್ಟೋದು ಬೇಡ ಎಂದ ಕಾಂಗ್ರೆಸ್ ಹೈಕಮಾಂಡ್

ಜನಸ್ಪಂದನ ಕಾರ್ಯಕ್ರಮ ವಿಚಾರವಾಗಿ ಮಾತನಾಡಿದ ಅವರು ಜನರ ಒತ್ತಡ ಕಡಿಮೆ ಮಾಡಬೇಕು. ಜನರು ನಮ್ಮ ಮನೆ ಬಾಗಿಲು, ಮುಖ್ಯಮಂತ್ರಿಗಳ ಮನೆ ಬಾಗಿಲು ತಿರುಗುವುದು ಬೇಡ. ನಾವೇ ಜನರ ಮನೆ ಬಾಗಿಲಿಗೆ ಹೋಗುತ್ತಿದ್ದೇವೆ. ಇಡೀ ತಿಂಗಳು ಪ್ರವಾಸ ಮಾಡಿ ಎಲ್ಲ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸಬೇಕು ಅಂತ ಯೋಜನೆ ರೂಪಿಸಿದ್ದೇವೆ ಎಂದು ಹೇಳಿದರು.

ಎಲ್ಲಾ ಅಧಿಕಾರಿಗಳು ಕೂಡ ಭಾಗವಹಿಸಬೇಕು. ನೀರಿನ ಸಮಸ್ಯೆ, ಖಾತೆ ಸಮಸ್ಯೆ, ಬೆಸ್ಕಾಂ ಸಮಸ್ಯೆ, ಗ್ಯಾರಂಟಿ ಸಮಸ್ಯೆ ಯಾವುದೇ ಸಮಸ್ಯೆ ಇದ್ದರೂ ಕೂಡ ಬಗೆಹರಿಸುವಂತ ಕೆಲಸ ಮಾಡುತ್ತೇವೆ. ಎಲ್ಲಾ ಶಾಸಕರು, ಸಂಸದರು ಕೂಡ ಈ ವೇಳೆ ಭಾಗವಸಲು ಹೇಳಿದ್ದೇನೆ. 28 ಕ್ಷೇತ್ರದಲ್ಲೂ ಪ್ರವಾಸ ಮಾಡುತ್ತೇವೆ ಜನರು ತಮ್ಮ ಅಹವಾಲನ್ನು ಕೊಡಬಹುದು. ಮೂರು ಕ್ಷೇತ್ರವನ್ನು ಒಗ್ಗೂಡಿಸಿ ಕಾರ್ಯಕ್ರಮ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:05 pm, Sat, 30 December 23

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್