AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿಗಳಿಗೆ ಶಾಸಕರು ಫೈನಲ್​​, ಚರ್ಚೆಯಲ್ಲಿದೆ ಕಾರ್ಯಕರ್ತರ ಹೆಸರು​​: ಸಿದ್ದರಾಮಯ್ಯ

ಸರ್ಕಾರ ರಚನೆಯಾಗಿ 6 ತಿಂಗಳ ಮೇಲೆ ಕಳೆದಿದ್ದರೂ ನಿಗಮ ಮಂಡಳಿಗಳಿಗೆ ಆಧ್ಯಕ್ಷರು ನೇಮಕವಾಗಿಲ್ಲ. ಇಂದು ಆಗುತ್ತೆ, ನಾಳೆ ಆಗುತ್ತೆ ಅಂತ ರಾಜ್ಯ ಕಾಂಗ್ರೆಸ್​ ನಾಯಕರು ಮುಂದೆ ಹಾಕುತ್ತಾ ಬಂದಿದ್ದಾರೆ. ಆದರೆ ಇನ್ನೂ ಪಟ್ಟಿ ಅಂತಿಮಗೊಂಡಿಲ್ಲ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಸುಳಿವು ನೀಡಿದ್ದಾರೆ.

ನಿಗಮ ಮಂಡಳಿಗಳಿಗೆ ಶಾಸಕರು ಫೈನಲ್​​, ಚರ್ಚೆಯಲ್ಲಿದೆ ಕಾರ್ಯಕರ್ತರ ಹೆಸರು​​: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Anil Kalkere
| Edited By: |

Updated on:Jan 23, 2024 | 2:58 PM

Share

ಬೆಂಗಳೂರು, ಜನವರಿ 23: ನಿಗಮ ಮಂಡಳಿಗಳಿಗೆ (Corporation Board) ಶಾಸಕರ (MLA) ನೇಮಕವೆಲ್ಲ ಕ್ಲಿಯರ್ ಆಗಿದೆ. ಪಕ್ಷದ ಕಾರ್ಯಕರ್ತರ ನೇಮಕದ ಬಗ್ಗೆ ಚರ್ಚೆಯಾಗುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಚರ್ಚೆ ನಡೆಸುತ್ತಿದ್ದೇವೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಪಟ್ಟಿಗೆ ಸಹಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಿಗಮ ಮಂಡಳಿ ನೇಮಕ ಬಗ್ಗೆ ಡಾ. ಜಿ ಪರಮೇಶ್ವರ್ ಹೇಳಿಕೆ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯ ಪಡೆಯಲು ಕಷ್ಟವಾಗುತ್ತೆ ಎಂದರು.

ಅಸ್ಸಾಂನ ಗುವಾಹಟಿಯಲ್ಲಿ ರಾಹುಲ್ ಗಾಂಧಿ ಯಾತ್ರೆಗೆ ತಡೆವೊಡ್ಡಿದ ವಿಚಾರವಾಗಿ ಮಾತನಾಡಿದ ಅವರು, ಪಾದಯಾತ್ರೆ ‌ಮಟ್ಟು ಹಾಕುವುದು ಸ್ವಾತಂತ್ರ್ಯವನ್ನು ಕಸಿದ ಹಾಗೆ. ದೇಶದ ಸಮಸ್ಯೆಗಳಿಗಾಗಿ ರಾಹುಲ್ ಗಾಂಧಿ ಪಾದಯಾತ್ರೆ ಮಾಡುತ್ತಿದ್ದಾರೆ. ಅದನ್ನು ತಡೆಯುವ ಕೆಲಸ ಬಿಜೆಪಿ, ಹಲವು ಪುಂಡರು ಮಾಡುತ್ತಿದ್ದಾರೆ. ಇದಕ್ಕಾಗಿ ಬಿಜೆಪಿಯ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಮಾಡುತ್ತಿದೆ ಎಂದು ಹೇಳಿದರು. ನೀಡಿದ್ದ ಸಂಬಳವನ್ನು ವಾಪಸ್​​ ನೀಡುವಂತೆ ಅರ್ಚಕರಿಗೆ ಸರ್ಕಾರ ನೋಟಿಸ್​ ನೀಡಿದ ​ವಿಚಾರದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನಿಡದೆ ತೆರಳಿದರು.

ಇದನ್ನೂ ಓದಿ: ನಿಗಮ ಮಂಡಳಿ ನೇಮಕ: ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕರ ನಡುವಣ ಬಿಕ್ಕಟ್ಟು ಮುಂದುವರಿಕೆ

ನಿಗಮ ಮಂಡಳಿ ನೇಮಕ: ಸ್ಥಳೀಯ ನಾಯಕರಿಗೆ ಬಿಟ್ಟುಬಿಡಬೇಕೆಂದ ಪರಮೇಶ್ವರ

ಇಂತಹ ವಿಚಾರಗಳನ್ನು ರಾಜ್ಯ ನಾಯಕರಿಗೆ ಬಿಟ್ಟು ಕೊಡಿ ಎಂದು ಗೃಹ ಸಚಿವ ಪರಮೇಶ್ವರ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್​​ಗೆ ಹೇಳಿದ್ದಾರೆ.

ಹೈಕಮಾಂಡ್ ನಮ್ಮನ್ನು ಸಂಪರ್ಕಿಸಿಲ್ಲ. ಅವರು ನಮ್ಮ ಶಿಫಾರಸುಗಳನ್ನು ಸ್ವೀಕರಿಸಿಲ್ಲ. ಜಿಲ್ಲಾ ಮಟ್ಟದಲ್ಲಿ ಯಾರು ಕೆಲಸ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿದೆಯೇ ಹೊರತು ಹೈಕಮಾಂಡ್​ಗೆ ಅಲ್ಲ. ಹೈಕಮಾಂಡ್ ಇಂತಹ ವಿಚಾರಗಳನ್ನು ಸಿಎಂ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಡಬೇಕು ಎಂದು ಪರಮೇಶ್ವರ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ರಾಜ್ಯ ನಾಯಕರೊಂದಿಗೆ ಸಮಾಲೋಚನೆ ನಡೆಸದೆ ನೇಮಕ ಮಾಡಿದ್ದಾರೆ ಎಂದು ಪರಮೇಶ್ವರ ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:52 pm, Tue, 23 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ