ಕೊಪ್ಪಳ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಿಎಂ ಸಿದ್ದರಾಮಯ್ಯ ಸಂಪುಟ (Siddaramaiah Cabinet)ದ ವಿಸ್ತರಣೆ ಶನಿವಾರ ಆಗಿದೆ. 24 ಶಾಸಕರು ಮೇ 27ರಂದು ಸಚಿವರಾಗಿ ಪದಗ್ರಹಣ ಮಾಡಿದ್ದಾರೆ. ಕೆಲ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದೆ. ಆ ಪೈಕಿ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಕೂಡ ಒಬ್ಬರು. ಸಚಿವ ಸ್ಥಾನ ತಪ್ಪಿದರಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಘವೇಂದ್ರ ಹಿಟ್ನಾಳ್, ರಾಜ್ಯದಲ್ಲಿ 135 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಎಲ್ಲ ಜಾತಿಯ ಶಾಸಕರನ್ನು ಸಂಪುಟದಲ್ಲಿ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.
ಸಹೋದರ ಸುರೇಶ್ ಭೈರತಿಗೆ ಸಚಿವ ಸ್ಥಾನ ನೀಡಲಾಗಿದೆ. ಜನರಲ್ಲಿ ಉತ್ತರ ಕರ್ನಾಟಕ, ಬಾಂಬೆ ಕರ್ನಾಟಕದ ಕುರುಬ ಶಾಸಕರಿಗೆ ಕೊಡಬೇಕು ಎನ್ನುವ ಒತ್ತಾಯ ಇತ್ತು. ನಾಲ್ಕೈದು ಬಾರಿ ಶಾಸಕರಾದವರು ಇನ್ನೂ ಉಳಿದಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಹೇಳಿದರು.
ಇದನ್ನೂ ಓದಿ: Mysuru Incharge Minister: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು ಉಸ್ತುವಾರಿ ಯಾರಿಗೆ?
ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಎಂ.ಬಿ ಪಾಟೀಲ್ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಇದರ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸದ್ಯ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಇದ್ದಾರೆ. ಇದರ ಬಗ್ಗೆ ಗೊಂದಲ ಸೃಷ್ಟಿ ಇಲ್ಲ. ಇದರ ಬಗ್ಗೆ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದು ಆಗುತ್ತದೆ ಎಂದರು.
ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಬಿಜೆಪಿ ನಾಯಕರ ಅಪಸ್ವರ ವಿಚಾರವಾಗಿ ಮಾತನಾಡಿ, ಬಿಜೆಪಿಯವರು ಹತಾಶರಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಮೂರು ಸಿಲಿಂಡರ್ ಕೊಡುವುದಾಗಿ ಹೇಳಿದ್ದರು. ನಾಲ್ಕು ವರ್ಷ ರಾಜ್ಯದಲ್ಲಿ ಬಿಜೆಪಿ ಆಡಳಿತ ಇತ್ತು. ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರದಲ್ಲಿದೆ. ಒಂದೂ ಸಿಲೆಂಡರ್ ಕೊಡಲಾರದವರು, ಚನಾವಣೆ ಸಂದರ್ಭದಲ್ಲಿ ಮೂರು ಸಿಲೆಂಡರ್ ಕೊಡುವ ಘೋಷಣೆ ಮಾಡಿದರು ಇದು ಯಾರ ಸುಳ್ಳು ಭರವಸೆ ಹೇಳಿ ಎಂದರು.
ಇದನ್ನೂ ಓದಿ: Belagavi News: ಇವತ್ತಲ್ಲ ನಾಳೆ ಸತೀಶ್ ಜಾರಕಿಹೊಳಿ ಸಿಎಂ ಆಗಿಯೇ ಆಗ್ತಾರೆ: ಲಕ್ಷ್ಮೀ ಹೆಬ್ಬಾಳ್ಕರ್
2013 ರಿಂದ 2018 ರವರಗೆ ಸಿದ್ದರಾಮಯ್ಯ ಅವರು ಜನಪರ ಕಾರ್ಯಕ್ರಮ ಕೊಟ್ಟಿದ್ದಾರೆ. ಜೂನ್ 1 ರಿಂದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ. ನಿನ್ನೆ ಸಂಪೂರ್ಣ ಸಚಿವ ಸಂಪುಟದ ಮೊದಲನೇ ಸಭೆ ಆಗಿದೆ. ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ಅವರು ವಿರೋಧ ಪಕ್ಷದಲ್ಲಿದ್ದಾರೆ. ಅವರಿಬ್ಬರೂ ಹತಾಶರಾಗಿದ್ದಾರೆ ಎಂದು ಹಿಟ್ನಾಳ್ ವಾಗ್ದಾಳಿ ಮಾಡಿದರು.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:55 pm, Sun, 28 May 23