ಸಿಎಂ ವಿರುದ್ಧ ಎಂಎಲ್‌ಸಿ ಬಿಕೆ ಹರಿಪ್ರಸಾದ್‌ ಬಹಿರಂಗ ಟೀಕೆ; ಎಐಸಿಸಿಯಿಂದ ಶೋಕಾಸ್ ನೋಟಿಸ್

ಕಳೆದ ಶನಿವಾರ(ಸೆ.09) ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಟೀಕೆ ಮಾಡಿದ್ದರು. ಈ ಹಿನ್ನಲೆ ಎಐಸಿಸಿ ಶಿಸ್ತು ಸಮಿತಿಯಿಂದ ಬಿ.ಕೆ ಹರಿಪ್ರಸಾದ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಹತ್ತು ದಿನಗಳೊಳಗೆ ಶೋಕಾಸ್ ನೋಟಿಸ್‌ಗೆ ಉತ್ತರಿಸುವಂತೆ ಸೂಚಿಸಿದೆ.

ಸಿಎಂ ವಿರುದ್ಧ ಎಂಎಲ್‌ಸಿ ಬಿಕೆ ಹರಿಪ್ರಸಾದ್‌ ಬಹಿರಂಗ ಟೀಕೆ; ಎಐಸಿಸಿಯಿಂದ ಶೋಕಾಸ್ ನೋಟಿಸ್
ಬಿಕೆ ಹರಿಪ್ರಸಾದ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 12, 2023 | 8:46 PM

ಬೆಂಗಳೂರು, ಸೆ.12: ರಾಜ್ಯದಲ್ಲಿ 136 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್​ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರೆ, ಪಕ್ಷದಲ್ಲಿ ಭಿನ್ನಾಪ್ರಾಯ ಮಾತ್ರ ಕಡಿಮೆ ಆಗಿಲ್ಲ. ಅದರಂತೆ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಅನೇಕರು ಇದೀಗ ಸ್ವ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಅದರಂತೆ ಕಳೆದ ಶನಿವಾರ(ಸೆ.09) ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ (BK Hariprasad) ಅವರು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಬಹಿರಂಗವಾಗಿ ಟೀಕೆ ಮಾಡಿದ್ದರು. ಈ ಹಿನ್ನಲೆ ಎಐಸಿಸಿ ಶಿಸ್ತು ಸಮಿತಿಯಿಂದ ಬಿ.ಕೆ ಹರಿಪ್ರಸಾದ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಹತ್ತು ದಿನಗಳೊಳಗೆ ಶೋಕಾಸ್ ನೋಟಿಸ್‌ಗೆ ಉತ್ತರಿಸುವಂತೆ ಸೂಚಿಸಿದೆ.

ಪರೋಕ್ಷವಾಗಿ ಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದ ಬಿಕೆ ಹರಿಪ್ರಸಾದ್​

ಹೌದು, ಕಳೆದ ಕೆಲವು ದಿನಗಳ ಹಿಂದೆ ಬಿಕೆ ಹರಿಪ್ರಸಾದ್​ ಪರೋಕ್ಷವಾಗಿ ಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದರು. ‘ಹಿಂದಿನ ಯಾವ ಮುಖ್ಯಮಂತ್ರಿಗಳೂ ಕೂಡ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಇದೀಗ ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಎಂದು ಹೇಳಿದರೆ ಆಗುವುದಿಲ್ಲ. ನಾನು ಮೂರು ಬಾರಿ ಸೋತಿರಬಹುದು, ಆದರೆ, ಇನ್ನೂ ಸತ್ತಿಲ್ಲ. ಸೈಟು ಕಳ್ಳತನ ಮಾಡಿ ಮಾರುವವನು ನನ್ನ ಬಗ್ಗೆ ಮಾತನಾಡುತ್ತಾನೆ. ಆದರೆ, ನಾನು ಸ್ವಾಭಿಮಾನ ಬಿಟ್ಟು ಸಹನೆ ಕಳೆದುಕೊಂಡವನಲ್ಲ. ದೇವರಾಜ ಅರಸು ಕಾರಿನಲ್ಲಿ ಕುಳಿತರೆ, ದೇವರಾಜ ಅರಸು ಆಗಲ್ಲ. ದೇವರಾಜ ಅರಸು ಚಿಂತನೆ ಇರಬೇಕು ಎಂದಿದ್ದರು.

ಇದನ್ನೂ ಓದಿ:ಸಂಸತ್ ಕೆಲಸವನ್ನು ರಾಜಕೀಯಗೊಳಿಸಬೇಡಿ: ಸೋನಿಯಾ ಗಾಂಧಿ ಪತ್ರಕ್ಕೆ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

ಇನ್ನು ಇದೇ ವೇಳೆ ನಾನು ಮಂತ್ರಿ ಆಗಿದ್ದರೆ ಸಮುದಾಯದ ಜನರ ಜೊತೆಗೆ ಇರಲು ಸಾಧ್ಯವಾಗುತ್ತಿರಲ್ಲಿ. ನಾನು ಮುಖ್ಯಮಂತ್ರಿ ಅಥವಾ ಮಂತ್ರಿ ಆಗುತ್ತೇನೆ ಎಂದು ಸಮುದಾಯದ ಯಾರೂ ಭ್ರಮೆಯಲ್ಲಿ ಇರಬೇಡಿ. ಈಡಿಗ, ಬಿಲ್ಲವ, ನಾಮಧಾರಿ ಸಮುದಾಯದವರು ಕೇವಲ ರಾಜ್ಯದಲ್ಲಿ ಮಾತ್ರ ಅಲ್ಲ, ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ದೇವರಾಜ ಅರಸು ಅವರ ಬಗ್ಗೆ ಭಾಷಣದಲ್ಲಿ ಪುಂಕಾನು ಪುಂಕವಾಗಿ ಹಾಡಿ ಹೊಗಳುವ ನಾವು ಅವರ ಮೊಮ್ಮಗನಿಗೆ ಯಾವ ಅಧಿಕಾರವನ್ನೂ ಕೊಟ್ಟಿಲ್ಲವೆಂದು ಅವಮಾನ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us