AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನದ್ದು ಚೈನಾ ಬಜಾರ್ ಗ್ಯಾರಂಟಿ; ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಕ್ಕೆ ಇಲ್ಲಿದೆ ಕಾರಣ

ಕಾಂಗ್ರೆಸ್​ನವರದ್ದು ಚೈನಾ ಬಜಾರ್ ಗ್ಯಾರಂಟಿ ಎಂದು ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್​ನದ್ದು ಚೈನಾ ಬಜಾರ್ ಗ್ಯಾರಂಟಿ; ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಕ್ಕೆ ಇಲ್ಲಿದೆ ಕಾರಣ
ಛಲವಾದಿ ನಾರಾಯಣಸ್ವಾಮಿ
Ganapathi Sharma
|

Updated on:May 16, 2023 | 4:13 PM

Share

ಬೆಂಗಳೂರು: ಕಾಂಗ್ರೆಸ್​ನವರದ್ದು ಚೈನಾ ಬಜಾರ್ ಗ್ಯಾರಂಟಿ ಎಂದು ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಹಾಗೂ ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ರಚನೆಗೂ ಮುನ್ನವೇ ಗ್ಯಾರಂಟಿ ಬಗ್ಗೆ ಅಪಸ್ವರ ಶುರುವಾಗಿದೆ. ಹಲವೆಡೆ ಜನರು 200 ಯುನಿಟ್ ವಿದ್ಯುತ್ ಬಿಲ್ ಕಟ್ಟಲ್ಲ ಅಂತಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರ ರಚನೆಗೂ ಮುನ್ನವೇ ಗ್ಯಾರಂಟಿಗಳ ಬಗ್ಗೆ ಬಿಜೆಪಿ ನಾಯಕರು ಟೀಕಾ ಪ್ರಹಾರ ಆರಂಭಿಸಿದ್ದಾರೆ. ಮಾಜಿ ಸಚಿವ ಅಶ್ವತ್ಥನಾರಾಯಣ ಕೂಡ ಗ್ಯಾರಂಟಿಗಳಿಗೆ ಈಗ ಷರತ್ತು ವಿಧಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ತೆರಿಗೆ ಕಟ್ಟುವವರಿಗೆ ಗ್ಯಾರಂಟಿ ಅನ್ವಯ ಆಗಲ್ಲ ಅಂತ ಈಗ ಹೇಳ್ತಿದ್ದಾರೆ. ಡಾ.ಜಿ. ಪರಮೇಶ್ವರ್ ಹಾಗೂ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಅವರ ಮಾಲ್ ಹಾಗೆಯೇ, ಅವುಗಳು ಯಾವುದೇ ಉಪಯೋಗಕ್ಕೆ ಬರಲ್ಲ. ಕಾಂಗ್ರೆಸ್​ನದ್ದು ಸುಳ್ಳು ಭರವಸೆ ಅಂತ ಸ್ಪಷ್ಟವಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿತ್ತು. ಇದಕ್ಕೂ ಮುನ್ನವೇ, ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ. ನೀಡುವುದಾಗಿ ಕಾಂಗ್ರೆಸ್ ಘೋಷಿಸಿತ್ತು.

ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ! ಅಶ್ವತ್ಥನಾರಾಯಣ ಹೇಳಿದ್ದೇನು?

ಕಾಂಗ್ರೆಸ್ ಬಹುಮತ ಪಡೆದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಹಳ್ಳಿಯಲ್ಲಿ ಜನರು ವಿದ್ಯುತ್ ಬಿಲ್ಲು ಕಟ್ಟಲು ನಿರಾಕರಿಸಿದ ಬಗ್ಗೆ ಸೋಮವಾರ ವರದಿಯಾಗಿತ್ತು.

ಭಾವನೆಗೆ ಧಕ್ಕೆ ತರುವ ಕೆಲಸ ಮಾಡಬಾರದು; ಕೋಟ ಶ್ರೀನಿವಾಸ ಪೂಜಾರಿ

ರಾಜ್ಯದ ಜನರಿಗೆ ಗ್ಯಾರಂಟಿ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ ಮತದಾರರ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಬೆಂಗಳೂರಿನಲ್ಲಿ ಎಂಎಲ್​ಸಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಚಿತ ವಿದ್ಯುತ್ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಕರೆಂಟ್ ಬಿಲ್ ಕಟ್ಟುವುದೇ ಬೇಡ ಎಂದು ಡಿಕೆಶಿ ಹೇಳಿದ್ದರು. ಈಗ ಅದೆಲ್ಲಾ ಗ್ಯಾರಂಟಿಗಳಿಗೆ ಷರತ್ತು ಹಾಕಲು ಹೊರಟಿದ್ದಾರೆ. ಇದರಿಂದ ಕಟ್ಟಕಡೆಯ ವ್ಯಕ್ತಿಗೆ ಮೋಸ ಮಾಡಿದಂತಾಗಲಿದೆ. ಯಾವುದೇ ಒಬ್ಬ ವ್ಯಕ್ತಿಗೆ ಅನ್ಯಾಯ ಆಗದಂತೆ ಎಚ್ಚರ ವಹಿಸಲಿ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Tue, 16 May 23

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ