ಡಿಕೆಶಿಗೆ ಪ್ರಧಾನಿ ಮೋದಿ ವಿಶೇಷ ಅಭಿನಂದನೆ!: ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಕೈಜೋಡಿಸಲಿದೆ ಕೇಂದ್ರ ಸರ್ಕಾರ!

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಈ ಸೌಹಾರ್ದಯುತ ಸಂದೇಶವು ಕೇಂದ್ರ-ರಾಜ್ಯ ಸಂಬಂಧಗಳ ದಿಕ್ಸೂಚಿಯಾಗಿದೆ. ಮಾಜಿ ಪ್ರಧಾನಿ ದೇವೇಗೌಡ, ಬಿ.ಎಸ್. ಯಡಿಯೂರಪ್ಪ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರೂ ಡಿ.ಕೆ. ಶಿವಕುಮಾರ್‌ಗೆ ಶುಭ ಕೋರಿದ್ದಾರೆ.

ಡಿಕೆಶಿಗೆ ಪ್ರಧಾನಿ ಮೋದಿ ವಿಶೇಷ ಅಭಿನಂದನೆ!: ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಕೈಜೋಡಿಸಲಿದೆ ಕೇಂದ್ರ ಸರ್ಕಾರ!
ಡಿಕೆ ಶಿವಕುಮಾರ್​​​​​

Updated on: Jun 03, 2026 | 5:56 PM

ದೆಹಲಿ, ಜೂ.3: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಟ್ವಿಟರ್ ಮೂಲಕ ನೂತನ ಮುಖ್ಯಮಂತ್ರಿಗಳಿಗೆ ಶುಭ ಹಾರೈಸಿರುವ ಪ್ರಧಾನಿ ಮೋದಿ ಅವರು, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ” ಎಂದು ಬರೆದಿದ್ದಾರೆ.

ತಮ್ಮ ಶುಭಾಶಯ ಸಂದೇಶದಲ್ಲಿ ಒಕ್ಕೂಟ ವ್ಯವಸ್ಥೆಯ ಗೌರವವನ್ನು ಎತ್ತಿಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, “ಕರ್ನಾಟಕದ ಸಾರ್ವಜನಿಕರ ಏಳಿಗೆ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಮುಂಬರುವ ದಿನಗಳಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಅತ್ಯಂತ ನಿಕಟವಾಗಿ ಮತ್ತು ಜಂಟಿಯಾಗಿ ಕಾರ್ಯನಿರ್ವಹಿಸಲಿದೆ” ಎಂದು ಭರವಸೆ ನೀಡಿದ್ದಾರೆ. ಪ್ರಧಾನಿಯವರ ಈ ಸಕಾರಾತ್ಮಕ ಸಂದೇಶವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಆರೋಗ್ಯಕರ ರಾಜಕೀಯ ಬಾಂಧವ್ಯಕ್ಕೆ ದಿಕ್ಸೂಚಿಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜಕೀಯ ವೈರತ್ವ ಬದಿಗಿಟ್ಟು ಸಿಎಂ ಡಿಕೆಶಿಗೆ  ವಿಶ್ ಮಾಡಿದ ಹೆಚ್.ಡಿ. ದೇವೇಗೌಡ

ಡಿ.ಕೆ. ಶಿವಕುಮಾರ್ ಅವರಿಗೆ ದೇಶದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಟ್ವಿಟರ್ (X) ಮೂಲಕ ನೂತನ ಮುಖ್ಯಮಂತ್ರಿಗಳಿಗೆ ರಾಜಕೀಯ ಸೌಹಾರ್ದತೆಯ ಸಂದೇಶ ಕಳುಹಿಸಿರುವ ದೊಡ್ಡಗೌಡರು, “ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಶುಭಾಶಯಗಳು ಮತ್ತು ಅಭಿನಂದನೆಗಳು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್​​: ಅಷ್ಟಕ್ಕೂ ಯಾರು ಈ ಅಜ್ಜಯ್ಯ?

ಸಿಎಂ ಡಿ.ಕೆ. ಶಿವಕುಮಾರ್ ಗೆ ಬಿ.ಎಸ್. ಯಡಿಯೂರಪ್ಪ ಅಭಿನಂದನೆ

ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ. ಟ್ವಿಟರ್ (X) ಮೂಲಕ ನೂತನ ಮುಖ್ಯಮಂತ್ರಿಗಳಿಗೆ ರಾಜಕೀಯ ಸೌಹಾರ್ದತೆಯ ಸಂದೇಶ ಕಳುಹಿಸಿರುವ ಬಿಎಸ್‌ವೈ, “ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ತಿಳಿಸಿದ್ದಾರೆ.

ಸಿಕ್ಕ ಅವಕಾಶವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿ: ಡಿಕೆಶಿಗೆ ಹೆಚ್​​.ಡಿ.ಕುಮಾರಸ್ವಾಮಿ ಹಾರೈಕೆ

ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ನೂತನ ಮುಖ್ಯಮಂತ್ರಿಗಳಿಗೆ ರಾಜಕೀಯ ಸೌಹಾರ್ದತೆಯ ಸಂದೇಶ ಕಳುಹಿಸಿರುವ ಹೆಚ್‌ಡಿಕೆ, “ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us