AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಫಾರೂಕ್ ಅಬ್ದುಲ್ಲಾಗೆ ವಿಶೇಷ ಪಿಎಂಎಲ್ಎ ಕೋರ್ಟ್​​​ ನೋಟಿಸ್

Farooq Abdullah ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ ನಿಧಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಆಗಸ್ಟ್ 27 ರಂದು ಆರಂಭವಾಗಲಿದ್ದು ಅದಕ್ಕಿಂತ ಮುಂಚೆ ನ್ಯಾಯಾಲಯದ  ಮುಂದೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಫಾರೂಕ್ ಅಬ್ದುಲ್ಲಾಗೆ ವಿಶೇಷ ಪಿಎಂಎಲ್ಎ ಕೋರ್ಟ್​​​ ನೋಟಿಸ್
ಫಾರೂಕ್ ಅಬ್ದುಲ್ಲಾ
TV9 Web
| Edited By: |

Updated on:Jul 26, 2022 | 5:22 PM

Share

ದೆಹಲಿ: ಜಾರಿ ನಿರ್ದೇಶನಾಲಯ (ED) ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪಪಟ್ಟಿ  ಸಲ್ಲಿಸಿದೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯಲ್ಲಿ (JKCA) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಗರ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಶ್ರೀನಗರದ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು (special PMLA Court)ಮಂಗಳವಾರ ನ್ಯಾಷನಲ್ ಕಾನ್ಫರೆನ್ಸ್ (NC) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah )ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ ನಿಧಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಆಗಸ್ಟ್ 27 ರಂದು ಆರಂಭವಾಗಲಿದ್ದು ಅದಕ್ಕಿಂತ ಮುಂಚೆ ನ್ಯಾಯಾಲಯದ  ಮುಂದೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ. ಜಾರಿ ನಿರ್ದೇಶನಾಲಯವು ಜೂನ್ 4 ರಂದು ಜಮ್ಮು ಮತ್ತು ಕಾಶ್ಮೀದ ಮಾಜಿ  ಮುಖ್ಯಮಂತ್ರಿ ಅಬ್ದುಲ್ಲಾ ಮತ್ತು ಇತರರ ವಿರುದ್ಧ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಪೂರಕ ಆರೋಪಪಟ್ಟಿ ಸಲ್ಲಿಸಿತ್ತು.

ಅಸೋಸಿಯೇಷನ್‌ನ ಪದಾಧಿಕಾರಿಗಳು ಸೇರಿದಂತೆ ಸಂಬಂಧವಿಲ್ಲದ ವಿವಿಧ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡುವ ಮೂಲಕ JKCA ಹಣವನ್ನು ವರ್ಗಾವಣೆ ಮಾಡಿದ ಆರೋಪ ಅಬ್ದುಲ್ಲಾ ಅವರ ಮೇಲಿದೆ, 2020 ರಲ್ಲಿ ಈ ಪ್ರಕರಣದಲ್ಲಿ ಇಡಿ ಅಬ್ದುಲ್ಲಾ ಅವರ 11.86 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಅದರ ನಂತರ ಅವರನ್ನು ಹಲವಾರು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಅಬ್ದುಲ್ಲಾ ಅವರು ಈ ಹಿಂದೆ ಜೆಕೆಸಿಎ ಅಧ್ಯಕ್ಷರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಇಡಿ ಆರೋಪಿಸಿದೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಗೆ ಸೇರಿದ ಹಣವನ್ನು ಅಸೋಸಿಯೇಷನ್‌ನ ಪದಾಧಿಕಾರಿಗಳು ಸೇರಿದಂತೆ ವಿವಿಧ ಜನರ ವಿವಿಧ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಕ್ರಿಕೆಟ್ ಅಸೋಸಿಯೇಷನ್‌ನ ಪದಾಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ ಸಲ್ಲಿಸಿದ ಆರೋಪಪಟ್ಟಿಯ ಆಧಾರದ ಮೇಲೆ ಸಂಸ್ಥೆ ಹಣ ವರ್ಗಾವಣೆ ತನಿಖೆಯನ್ನು ಆರಂಭಿಸಿದೆ.

Published On - 4:22 pm, Tue, 26 July 22