AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ: ಬೆಳಗಾವಿಯಿಂದಲೇ ಮತಬೇಟೆ ಶುರು

ಭಾರತ್​ ಜೋಡೋ ಯಾತ್ರೆ ನಂತರ, ಇದೇ ಮೊದಲ ಬಾರಿಗೆ ನಾಳೆ (ಮಾರ್ಚ್​ 20) ರಂದು ಕುಂದಾನಗರಿ ಬೆಳಗಾವಿಗೆ ಕಾಂಗ್ರೆಸ್​ ನಾಯಕ, ಸಂಸದ ರಾಹುಲ್​ ಗಾಂಧಿ ಆಗಮಿಸಲಿದ್ದಾರೆ.

ಈ ವರ್ಷ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ: ಬೆಳಗಾವಿಯಿಂದಲೇ ಮತಬೇಟೆ ಶುರು
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 19, 2023 | 3:30 PM

Share

ಬೆಳಗಾವಿ: ಕರ್ನಾಟಕ, ವಿಧಾನಸಭೆ ಚುನಾವಣೆ (Karnataka Assembly Election) ಎದುರು ನೋಡುತ್ತಿದ್ದು, ರಾಜ್ಯದ ಕೆಲವು ವಿಧಾನಸಭಾ ಕ್ಷೇತ್ರಗಳು (Assembly Constituency) ಸಾಕಷ್ಟು ಕುತೂಹಲ ಮೂಡಿಸುತ್ತಿವೆ. ಚುನಾವಣಾ ಪ್ರಚಾರ ಸಂಬಂಧ ಬಿಜೆಪಿ (BJP) ಕೇಂದ್ರ ನಾಯಕರು ರಾಜ್ಯ ಸುತ್ತುತ್ತಿದ್ದು, ಬೇಸಿಗೆಯಲ್ಲಿ ಚುನಾವಣಾ ಕಾವನ್ನು ಹೆಚ್ಚಿಸುತ್ತಿದ್ದಾರೆ. ಅದರಂತೆ ಈಗ ಕಾಂಗ್ರೆಸ್ (Congress)​ ಕೂಡ ಕೇಂದ್ರ ನಾಯಕರತ್ತ ಮುಖ ಮಾಡಿದೆ. ಭಾರತ್​ ಜೋಡೋ ಯಾತ್ರೆ (Bharat Jodo Yatra) ನಂತರ, ಇದೇ ಮೊದಲ ಬಾರಿಗೆ ಸಂಸದ ರಾಹುಲ್​ ಗಾಂಧಿ (Rahul Gandhi) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನಾಳೆ (ಮಾರ್ಚ್​ 20) ರಂದು ಕುಂದಾನಗರಿ ಬೆಳಗಾವಿಗೆ (Belagavi) ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಮಧ್ಯೆ ಹಣಾ-ಹಣಿ ಜೋರಾಗಿಯೇ ನಡೆಯುತ್ತಿದೆ. ಈ ಹಿಂದೆ ಬೆಳಗಾವಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮದೆಯಾದ ಅಲೆಯನ್ನು ಸೃಷ್ಟಿಸಿದ್ದರು.

ಇದೀಗ ಬಿಜೆಪಿಯ ಅಲೆಯನ್ನು ತಣ್ಣಗಾಗಿಸಿ, ಎಲ್ಲಡೆ ಕಾಂಗ್ರೆಸ್​ ಮೇನಿಯಾ ಸೃಷ್ಟಿಸಲು ಕೈ​ ನಾಯಕ ರಾಹುಲ್​ ಗಾಂಧಿ ಆಗಮಿಸುತ್ತಿದ್ದಾರೆ. ನಾಳೆ (ಮಾರ್ಚ್ 20) ರಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಗೆ ಆಗಮಿಸಲಿರುವ ರಾಹುಲ್ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಗರದ ಸಿಪಿಎಡ್ ಮೈದಾನದಲ್ಲಿ ಬೃಹತ್ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಜರುಗಲಿದ್ದು ಈ ಕಾರ್ಯಕ್ರಮದಲ್ಲಿ ಯುವಕರನ್ನುದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಬೇರೆ ಅಭ್ಯರ್ಥಿ ರೆಡಿ, ಬಾದಾಮಿಯಲ್ಲಿ ಮತ್ತೆ ಚಿಗುರೊಡೆದ ಸಿದ್ದು ಅಭಿಮಾನಿಗಳ ಆಸೆ

ಇನ್ನು ನಿರುದ್ಯೋಗ, ಯುವಕರಿಗೆ ಸರ್ಕಾರಿ ನೌಕರಿಯಲ್ಲಿ ವಂಚನೆ ಸೇರಿದಂತೆ ಹಲವು ವಿಷಯಗಳ ಮೇಲೆ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಯಿಂದಲೂ ಕಾರ್ಯಕರ್ತರು, ಯುವಕರು ಆಗಮಿಸುತ್ತಿದ್ದು ಈ ಕಾರ್ಯಕ್ರಮಕ್ಕೆ ಸುಮಾರು 3-4 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಬೆಳಗಾವಿ ಭೇಟಿ ಬೆನ್ನಲ್ಲೇ ರಾಹುಲ್ ಗಾಂಧಿ ಕೂಡ ಬೆಳಗಾವಿಯಿಂದಲೇ ಪ್ರಚಾರ ಆರಂಭಿಸುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸುವಂತೆ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಳಗಾವಿಗೆ ಆಗಮಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಸಾಥ್ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Sun, 19 March 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!