ಯಾವ ರಾಜ್ಯದಲ್ಲಿ ಸಿಎಂ ಆಗ್ತಾರೋ ಗೊತ್ತಿಲ್ಲ; ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಕಿಡಿ
ಕೆ.ಹೆಚ್.ಮುನಿಯಪ್ಪ, ಖರ್ಗೆರನ್ನ ಸೋಲಿಸಿದ್ದೇ ಸಿದ್ದರಾಮಯ್ಯ. ಇದು ದಲಿತ ಸಮಾಜಕ್ಕೆ ಸಿದ್ದರಾಮಯ್ಯನವರು ಕೊಟ್ಟ ಕೊಡುಗೆ. ಸಿದ್ದರಾಮಯ್ಯಗೆ ಮುಸ್ಲಿಮರ ಬಗ್ಗೆ ಮಾತ್ರ ವಿಶೇಷ ಕಾಳಜಿ ಇದೆ.
ಮೈಸೂರು: ಮತ್ತೊಮ್ಮೆ ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುವ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ (Prathap Simha) ಪ್ರತಿಕ್ರಿಯೆ ನೀಡಿದ್ದಾರೆ. ಯಾವ ರಾಜ್ಯದಲ್ಲಿ ಸಿಎಂ ಆಗ್ತಾರೆ ಎಂಬುದು ನನಗೆ ಗೊತ್ತಿಲ್ಲ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಿದ್ದಾರೆ. ಡಾ.ಜಿ.ಪರಮೇಶ್ವರ ಸಿಎಂ ಆಗುವುದನ್ನು ತಪ್ಪಿಸಿದ್ದೇ ಸಿದ್ದರಾಮಯ್ಯ. ಸಿಎಂ ಆಗುವುದನ್ನು ತಪ್ಪಿಸಿದ್ದೇ ಅವರು ದಲಿತರಿಗೆ ಕೊಟ್ಟ ಕೊಡುಗೆ. ಜಿ.ಪರಮೇಶ್ವರ ಅಂಗಲಾಚಿದ್ರೂ ಮಂತ್ರ ಸ್ಥಾನವನ್ನು ಕೊಡಲಿಲ್ಲ. ಕೆ.ಹೆಚ್.ಮುನಿಯಪ್ಪ, ಖರ್ಗೆರನ್ನ ಸೋಲಿಸಿದ್ದೇ ಸಿದ್ದರಾಮಯ್ಯ. ಇದು ದಲಿತ ಸಮಾಜಕ್ಕೆ ಸಿದ್ದರಾಮಯ್ಯನವರು ಕೊಟ್ಟ ಕೊಡುಗೆ. ಸಿದ್ದರಾಮಯ್ಯಗೆ ಮುಸ್ಲಿಮರ ಬಗ್ಗೆ ಮಾತ್ರ ವಿಶೇಷ ಕಾಳಜಿ ಇದೆ. ಮುಸ್ಲಿಮರ ಬಗ್ಗೆ ಕಾಳಜಿ ಇದೆ ಹೊರತು ದಲಿತ ಸಮಾಜದ ಮೇಲಲ್ಲ ಎಂದು ಹೇಳಿಕೆ ನೀಡಿದರು.
ಇನ್ನು ಇದೇ ವೇಳೆ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಮೈಸೂರು ಹುಲಿ ಕೈಬಿಟ್ಟ ವಿಚಾರದ ಬಗ್ಗೆ ಮಾತನಾಡಿದರು. ಹುಲಿ ಎಂದಿಗೂ ಬೋನಿನಲ್ಲಿ ಸಾಯುವುದಿಲ್ಲ. ಟಿಪ್ಪು ಸುಲ್ತಾನ್ ಯುದ್ಧ ಮಾಡದೆ ಸಂಧಾನಕ್ಕೆ ಕಳುಹಿಸಿದ್ದ. ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಹುಲಿ ಎಲ್ಲಿತ್ತು? ಯಾರೋ ನಾಲ್ಕು ಜನ ಟಿಪ್ಪು ಸುಲ್ತಾನ್ ಹುಲಿ ಅಂದರು. ಟಿಪ್ಪು ಸುಲ್ತಾನ್ ಮೈಸೂರು ಹುಲಿ ಅಲ್ಲ. ಎಂದಿಗೂ ಮೈಸೂರು ಹುಲಿ ನಾಲ್ವಡಿ ಕೃಷ್ಣರಾಜ ಒಡೆಯರ್. ನಾಲ್ವಡಿ ಕೃಷ್ಣರಾಜ ಒಡೆಯರ್ ಕೆಆರ್ಎಸ್ ಅಣೆಕಟ್ಟು ಕಟ್ಟಿದ್ದಾರೆ. ಅವರೇ ಎಂದಿಂಗೂ ನಮ್ಮ ಹುಲಿ. ಟಿಪ್ಪು ಸುಲ್ತಾನ್ ಶ್ರೀರಂಗಪಟ್ಟಣದ ಕೋಟೆಯೊಳಗೆ ಸತ್ತಿದ್ದಾನೆ. ಪೋಸ್ಟರ್‌ಗಳಲ್ಲಿ ಹುಲಿ ಚಿತ್ರ ಹಾಕಿಬಿಟ್ಟರೆ ಹುಲಿ ಆಗಿಬಿಡ್ತಾನಾ? ಎಂದು ಪ್ರಶ್ನೆ ಮಾಡಿದರು.
ಇದನ್ನೂ ಓದಿ: Monkeypox: ಯುರೋಪ್, ಅಮೆರಿಕದಲ್ಲೂ ಕಾಣಿಸಿಕೊಂಡ ಮಂಕಿಪಾಕ್ಸ್, ಭಾರತಕ್ಕೂ ಆತಂಕ?
ಪಠ್ಯ ಪುಸ್ತಕದಿಂದ ಭಗತ್ ಸಿಂಗ್, ನಾರಾಯಣ ಗುರು ಅವರ ಪಠ್ಯವನ್ನು ಕೈ ಬಿಟ್ಟಿಲ್ಲ. ಕಾಂಗ್ರೆಸ್ ವಿನಾಕಾರಣ ಈ ವಿಚಾರದಲ್ಲಿ ವಿವಾದ ಮಾಡುತ್ತಿದೆ. ಕಾಂಗ್ರೆಸ್‌ಗೆ ದಿಢೀರನ ಭಗತ್ ಸಿಂಗ್ ಮೇಲೆ ಏಕೆ ಇಷ್ಟೊಂದು ಪ್ರೀತಿ ಬಂತು ಅನ್ನೊದು ಗೊತ್ತಾಗುತ್ತಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಭಗತ್ ಸಿಂಗ್ ಪಠ್ಯ ಮುಂದುವರೆದಿದೆ. ನಾರಾಯಣಗುರು ಅವರ ಪಠ್ಯ ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ವರ್ಗಾವಣೆಯಾಗಿದೆ. ಆರ್ಎಸ್ಎಸ್ ಸಂಸ್ಥಾಪಕ ಕೆ ಬಿ ಹೆಡ್ಗೆವಾರ್ ಅವರ ಪಠ್ಯ ಯಾಕೆ ಇರಬಾರದು? ಅವರು ದೇಶ ಪ್ರೇಮದ ಬಗ್ಗೆ ಮಾಡಿದ ಭಾಷಣ ಮಕ್ಕಳಿಗೆ ಸ್ಪೂರ್ತಿಯಾಗಲು ಪಠ್ಯದಲ್ಲಿ ಅಳವಡಿಸಿದ್ದೇವೆ. ಅದರಲ್ಲಿ ತಪ್ಪೇನಿದೆ? ಇದರಲ್ಲೂ ಕಾಂಗ್ರೆಸ್‌ನವರು ತಪ್ಪು ಹುಡುಕಿದರೆ ಹೇಗೆ? ಎಂದು ಸಂಸದರು ಕೇಳಿದರು.
ಊಹಾಪೋಹ ಸುದ್ದಿಗಳಿಗೂ ನನಗೂ ಸಂಬಂಧವಿಲ್ಲ: ರಾಜ್ಯ ರಾಜಕಾರಣಕ್ಕೆ ಶೋಭಾ ಕರದ್ಲಾಂಜೆ ಮರಳುತ್ತಾರೆ ಎಂಬ ವಿಚಾರದ ಬಗ್ಗೆ ಪ್ರಶ್ನೆ ಕೇಳಿದಾಗ. ಇಂತಹ ಊಹಾಪೋಹ ಸುದ್ದಿಗಳಿಗೂ ನನಗೂ ಸಂಬಂಧವಿಲ್ಲ. ಈ ಬಗ್ಗೆ ನನಗೆ ಏನು ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿ ದೊಡ್ಡ ಅವಕಾಶವನ್ನು ನಮ್ಮ ಪಕ್ಷ ನೀಡಿದೆ. ನಾನು ನೋಡದ ರಾಜ್ಯವನ್ನು ಸಚಿವೆಯಾಗಿ ನೋಡಿದ್ದೇನೆ. ರಾಜ್ಯದಲ್ಲಿ ಹರಡುತ್ತಿರುವ ಸುದ್ದಿಗಳಿಗೂ ನನಗೂ ಸಂಬಂಧವಿಲ್ಲ ಎಂದರು.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:53 am, Thu, 19 May 22