ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ

| Updated By: ಸಾಧು ಶ್ರೀನಾಥ್​

Updated on: Sep 30, 2021 | 9:23 AM

ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್‌ ಯಡಿಯೂರಪ್ಪ ಅವರಿಗೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದರೊಂದಿಗೆ ಬಿಎಸ್‌ ಯಡಿಯೂರಪ್ಪ ಆಪ್ತರಿಗೆ ಸರ್ಕಾರದಲ್ಲಿ ಆಯಕಟ್ಟಿನ ಸ್ಥಾನಮಾನಗಳು ಮುಂದುವರಿಕೆ ಆದಂತಾಗಿದೆ.

ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ
ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ
Follow us on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಬ್ಬ ಮಾಜಿ ಶಾಸಕ ಮತ್ತು ಒಬ್ಬ ಹಾಲಿ ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿಕೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಶೃಂಗೇರಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್‌ ಯಡಿಯೂರಪ್ಪ ಅವರಿಗೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದರೊಂದಿಗೆ ಬಿಎಸ್‌ ಯಡಿಯೂರಪ್ಪ ಆಪ್ತರಿಗೆ ಸರ್ಕಾರದಲ್ಲಿ ಆಯಕಟ್ಟಿನ ಸ್ಥಾನಮಾನಗಳು ಮುಂದುವರಿಕೆ ಆದಂತಾಗಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ರೇಣುಕಾಚಾರ್ಯ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವುದು ಕುತೂಹಲಕಾರಿಯಾಗಿದೆ.

ಪ್ರಧಾನಿ ಮೋದಿ ಮಾದರಿಯಲ್ಲಿ ಶಾಸಕರು, ಸಂಸದರ ಭೇಟಿಗೆ ಸಿಎಂ ಬೊಮ್ಮಾಯಿ ಪ್ಲ್ಯಾನ್

ಪ್ರಧಾನಿ ನರೇಂದ್ರ ಮೋದಿ ಮಾದರಿಯಲ್ಲಿ ಶಾಸಕರು ಮತ್ತು ಸಂಸದರ ಭೇಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ಲ್ಯಾನ್ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ಭೇಟಿಗೆ ತೊಡಕಾಗುತ್ತಿದೆ ಎಂದು ಅನೇಕ ಶಾಸಕರು ಅಳಲುತೋಡಿಕೊಂಡಿದ್ದರು. ಹಾಗಾಗಿ ಇನ್ಮುಂದೆ ನಿಗದಿತ ಸಮಯದಲ್ಲಿ ಶಾಸಕರು ಮತ್ತು ಸಂಸದರ ಭೇಟಿಗೆ ಅನುವುಮಾಡಿಕೊಡಲು ಸಿಎಂ ಬೊಮ್ಮಾಯಿ ಈ ಪ್ಲ್ಯಾನ್ ಮಾಡಿದ್ದಾರೆ.

ಇದೇ ಶನಿವಾರ-ಭಾನುವಾರ ಸಿಎಂ ಬೊಮ್ಮಾಯಿ ವಿಜಯನಗರ-ಬಳ್ಳಾರಿ ಜಿಲ್ಲೆ ಪ್ರವಾಸ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಶನಿವಾರ ಮತ್ತು ಭಾನುವಾರ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಪ್ರವಾಸ ಮಾಡಲಿದ್ದಾರೆ. ವಿಶೇಷ ವಿಮಾನದಲ್ಲಿ ಶನಿವಾರ ಮಧ್ಯಾಹ್ನ ಬೆಂಗಳೂರಿನಿಂದ ಹೊಸಪೇಟೆಗೆ ತೆರಳಲಿರುವ ಸಿಎಂ ಬೊಮ್ಮಾಯಿ ವಿಜಯನಗರ ಜಿಲ್ಲೆ ಉದ್ಘಾಟನೆ ಮಾಡಲಿದ್ದಾರೆ. ಸಿಎಂ ಬೊಮ್ಮಾಯಿ ಶನಿವಾರ ರಾತ್ರಿ ಹೊಸಪೇಟೆಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಬೆಳಗ್ಗೆ ಹೊಸಪೇಟೆಯಿಂದ ಬಳ್ಳಾರಿಗೆ ಪ್ರಯಾಣ ಬೆಳೆಸಲಿದ್ದಾರೆ. ಬಳ್ಳಾರಿಯಲ್ಲಿ ಎಸ್ ಕೆ ಮೋದಿ ನ್ಯಾಷನಲ್ ಸ್ಕೂಲ್ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಭಾನುವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಸಿಎಂ ಬೊಮ್ಮಾಯಿ ಈ ಪ್ಲ್ಯಾನ್ ಅನುಸಾರ:

ಗುಜರಾತ್ ಮುಖ್ಯಮಂತ್ರಿ ಆಗಿದ್ದ ವೇಳೆ ನರೇಂದ್ರ ‌ಮೋದಿ ವಾರದಲ್ಲಿ ಒಂದು ದಿನ‌ ಶಾಸಕರು ಮತ್ತು ಸಂಸದರನ್ನು ಭೇಟಿ ಮಾಡುತ್ತಿದ್ದರು. ಅದರಂತೆ, ಗುರುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಶಾಸಕರು ಮತ್ತು ಸಂಸದರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಲಿದ್ದಾರೆ. ಮುಖ್ಯಮಂತ್ರಿ ಅಧಿಕೃತ ‌ನಿವಾಸ ರೇಸ್‌ ವ್ಯೂ ಕಾಟೇಜ್ ನಂ. 1ರಲ್ಲಿ ಭೇಟಿ ನಡೆಯಲಿದೆ. ಇನ್ನು‌ ಮುಂದೆ ವಾರದಲ್ಲಿ 1 ದಿನ ಶಾಸಕರು, ಸಂಸದರ ಭೇಟಿ ನಡೆಯಲಿದೆ.

CM ಕಾರ್ಯದರ್ಶಿಗಳಾಗಿ ಮತ್ತೆ ನೇಮಕವಾದ ಹಾಲಿ ಶಾಸಕ, ಮಾಜಿ ಶಾಸಕ| Tv9kannada

Also Read:
ಬಿಎಸ್​ವೈ ತಂದೆಯಂತೆ, ಬಸವರಾಜ ಬೊಮ್ಮಾಯಿ ಸಹೋದರನ ರೀತಿ, ಸಂಘಟನೆ ತಾಯಿ ಇದ್ದಂತೆ: ಎಂಪಿ ರೇಣುಕಾಚಾರ್ಯ

Also Read:
ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಜೀವರಾಜ್​ ನೇಮಕ

Published On - 8:28 am, Thu, 30 September 21