ಕರ್ನಾಟಕದಲ್ಲಿ ಕಾವೇರಿ ಕಿಚ್ಚಿನ ಮಧ್ಯೆ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ರೇಣುಕಾಚಾರ್ಯ

ಕರ್ನಾಟಕ ಬಿಜೆಪಿಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ವಿರೋಧಿ ಬಣಕ್ಕೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ. ಈ ಮೂಲಕ ಒಂದೆಡೆ ಕರ್ನಾಟಕದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದರೆ, ಮತ್ತೊಂದೆಡೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ್ದಾರೆ.

ಕರ್ನಾಟಕದಲ್ಲಿ ಕಾವೇರಿ ಕಿಚ್ಚಿನ ಮಧ್ಯೆ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ರೇಣುಕಾಚಾರ್ಯ
ಎಂಪಿ ರೇಣುಕಾಚಾರ್ಯ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Sep 29, 2023 | 2:20 PM

ದಾವಣಗೆರೆ, (ಸೆಪ್ಟೆಂಬರ್ 29): ಒಂದೆಡೆ ಕರ್ನಾಟಕದಲ್ಲಿ ಕಾವೇರಿ (Cauvery Water Dispute) ಕಿಚ್ಚು ಜೋರಾಗಿದ್ದರೆ, ಮತ್ತೊಂದೆಡೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ  (MP Renukacharya) ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ್ದಾರೆ. ಹೌದು…ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಶಾಸಕ ಬಿವೈ ವಿಜಯೇಂದ್ರ (BY Vijayendra) ಅವರನ್ನು ಮಾಡುವಂತೆ ಬಹಿರಂಗವಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಇಂದು(ಸೆ.29) ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಶಾಸಕ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದ್ರೆ ಪಕ್ಷಕ್ಕೆ ಲೋಕ‌ಸಭೆ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ‌ ಎಂದು ಹೇಳಿದರು.

ದಾವಣೆಗೆರೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಪ್ರಧಾನಿ ನರೇಂದ್ರ ಮೋದಿ ಮಾಸ್ ಲೀಡರ್. ದೇಶಕ್ಕೆ ನಾಯಕ. ಆದ್ರೆ ರಾಜ್ಯದಲ್ಲಿ ಮೋದಿ ಪೋಟೋ ತೋರಿಸಿದ್ರೆ ಸಾಲದು. ಅದು ಚುನಾವಣೆಯಲ್ಲಿ ಮತವಾಗಿ ಪರಿವರ್ತನೆ ಆಗಬೇಕು. ಬಿವೈ ವಿಜಯೇಂದ್ರಗೆ ಮತವಾಗಿ ಪವರಿವರ್ತಿಸುವ ಶಕ್ತಿ ಇದೆ. ಬರೀ ಪ್ರಧಾನಿಯವರ ಪೋಟೋ ಇಟ್ಟುಕೊಂಡ್ರೆ ಆಗದು. ರಾಜ್ಯದಲ್ಲಿ‌ ಬಿಜೆಪಿ ಮತ ತರುವ ಶಕ್ತಿ ಇರುವುದು ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರಗೆ ಮಾತ್ರ ಎಂದರು. ಈ ಮೂಲಕ ಬಿಜೆಪಿಯಲ್ಲಿನ ಯಡಿಯೂರಪ್ಪ ವಿರೋಧಿ ಬಣಕ್ಕೆ ಟಾಂಗ್ ಕೊಟ್ಟರು.

ಇದನ್ನೂ ಓದಿ: ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ, ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ: ಯತ್ನಾಳ್ ಹೇಳಿಕೆಯ ಮರ್ಮ ಇಲ್ಲಿದೆ

ಈಗ ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಬಿಜೆಪಿಯಲ್ಲಿ ಕೆಲವರಿಗೆ ಬೇಸರ ಇದೆ. ಮೈತ್ರಿ ಅಂತ ಬಿಜೆಪಿಯನ್ನು ಕುಮಾರಸ್ವಾಮಿಗೆ ಅಡಾ ಇಡಲಾಗದು. ಬಿಜೆಪಿಯಲ್ಲಿ ಸಮರ್ಥ ನಾಯಕರಿದ್ದಾರೆ. ಪಕ್ಷಕ್ಕೆ ಒಳ್ಳೆಯದಾಗುವುದಾದ್ರೆ ಮೈತ್ರಿ‌ಮಾಡಿಕೊಳ್ಳಲಿ. ಈಗಾಗಲೇ ಮೈತ್ರಿ ಮಾಡಿಕೊಂಡಿದ್ದಾರೆ. ವಿಜಯೇಂದ್ರ ನಂತಹ ಯುವಕನಿಗೆ ಪಕ್ಷ ನೇತೃತ್ವ ಕೊಟ್ಟರೇ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Fri, 29 September 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್