ಸಿಎಂ ಬದಲಾವಣೆ ಚರ್ಚೆ ಗರಿಗೆದರಿದ ಬೆನ್ನಲ್ಲೇ ದೆಹಲಿಗೆ ಹಾರಿದ ರೇಣುಕಾಚಾರ್ಯ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 21, 2021 | 5:22 PM

ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಆರಂಭವಾದ ನಂತರ ಯಡಿಯೂರಪ್ಪ ವಿರೋಧಿ ಬಣಕ್ಕೆ ಟಾರ್ಗೆಟ್ ಆಗುವ ಭೀತಿ ರೇಣುಕಾಚಾರ್ಯ ಅವರಿಗೆ ಕಾಣಿಸಿಕೊಂಡಂತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಬದಲಾವಣೆ ಚರ್ಚೆ ಗರಿಗೆದರಿದ ಬೆನ್ನಲ್ಲೇ ದೆಹಲಿಗೆ ಹಾರಿದ ರೇಣುಕಾಚಾರ್ಯ
ಶಾಸಕ ರೇಣುಕಾಚಾರ್ಯ
Follow us on

ದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸ್ಥಾನಚ್ಯುತಿ ವಿಚಾರ ಗಂಭೀರವಾಗಿ ಚರ್ಚೆ ಆಗುತ್ತಿದ್ದಂತೆಯೇ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿಚಲಿತರಾದಂತೆ ಕಂಡುಬರುತ್ತಿದೆ. ಇಷ್ಟುದಿನ ಬಿ.ಎಸ್.ಯಡಿಯೂರಪ್ಪ ಬೆಂಬಲಕ್ಕೆ ಯಡಿಯೂರಪ್ಪ ದೃಢವಾಗಿ ನಿಂತಿದ್ದರು. ಇದೀಗ ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಆರಂಭವಾದ ನಂತರ ಯಡಿಯೂರಪ್ಪ ವಿರೋಧಿ ಬಣಕ್ಕೆ ಟಾರ್ಗೆಟ್ ಆಗುವ ಭೀತಿ ರೇಣುಕಾಚಾರ್ಯ ಅವರಿಗೆ ಕಾಣಿಸಿಕೊಂಡಂತೆ ಇದೆ.

ಮುಂದಿನ ದಿನಗಳಲ್ಲಿ ಆಗಬಹುದಾದ ತೊಂದರೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ರೇಣುಕಾಚಾರ್ಯ ಪ್ಯಾಚಪ್ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯಲ್ಲಿ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರನ್ನು ರೇಣುಕಾಚಾರ್ಯ ಭೇಟಿಯಾಗುತ್ತಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ ಮತ್ತು ಭಗವಂತ ಖೂಬಾ ಅವರನ್ನು ರೇಣುಕಾಚಾರ್ಯ ಭೇಟಿ ಮಾಡಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾದ ರೇಣುಕಾಚಾರ್ಯ, ಹೊನ್ನಾಳಿ ಕ್ಷೇತ್ರದ ಅಭಿವೃದ್ದಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಹೊನ್ನಾಳಿ-ನ್ಯಾಮತಿ ತಾಲ್ಲೂಕಿನಲ್ಲಿ ಅನುಷ್ಠಾನಗೊಳ್ಳಬೇಕಿರುವ ₹ 400 ಕೋಟಿ ವೆಚ್ಚದ ಹನಿ ನೀರಾವರಿ ಯೋಜನೆ, ₹ 500 ಕೋಟಿ ವೆಚ್ಚದ ರಸ್ತೆ, ರಾಂಪುರ-ಗೋವಿನಕೋವಿ ಸೇತುವೆ ಸೇರಿ ವಿವಿಧ ಯೋಜನೆಗಳ ಬಗ್ಗೆ ರೇಣುಕಾಚಾರ್ಯ ನಡೆಸಿದೆ ಎಂದು ಸಚಿವರ ಭೇಟಿಯ ನಂತರ ರೇಣುಕಾಚಾರ್ಯ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

(MP Renukacharya in Delhi to Discuss about Karnataka Politics)

ಇದನ್ನೂ ಓದಿ: ಮುಖ್ಯಮಂತ್ರಿ ಬದಲಿಸಿದರೆ ಬಿಜೆಪಿ ಇತಿಹಾಸ ಮುಗೀತು: ಬಿಎಸ್​ವೈ ಪರ ನಿಂತ ಶಾಮನೂರು ಶಿವಶಂಕರಪ್ಪ, ರೇಣುಕಾಚಾರ್ಯ, ಎಂ ಬಿ ಪಾಟೀಲ್

ಇದನ್ನೂ ಓದಿ: ಬಿಜೆಪಿ ಮುಸ್ಲಿಂ ವಿರೋಧಿ ಎಂಬ ತಪ್ಪು ಕಲ್ಪನೆಯನ್ನು ಶಾಸಕ ರೇಣುಕಾಚಾರ್ಯ ಹೋಗಲಾಡಿಸಿದ್ದಾರೆ: ಮುಸ್ಲಿಂ ಮುಖಂಡ

Published On - 5:21 pm, Wed, 21 July 21