ಬಿಎಸ್​ವೈ, ವಿಜಯೇಂದ್ರ ವಿರುದ್ಧ ಮಾತಾಡಿ ಯತ್ನಾಳ್ ದೊಡ್ಡ ನಾಯಕ ಆಗಬೇಕೆಂದುಕೊಂಡಿದ್ದಾರೆ: ರೇಣುಕಾಚಾರ್ಯ

ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಅವರು ಗುಡುಗಿದ್ದಾರೆ. ಈ ನಾಯಕರ ವಿರುದ್ಧ ಮಾತಾಡಿ ದೊಡ್ಡ ನಾಯಕ ಆಗಬೇಕು ಎಂದು ಅಂದೊಕೊಂಡಿದ್ದಾರೆ ಎಂದರು. ಅಲ್ಲದೆ, ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹು ಅವರು ಲೋಕಸಭೆ ಚುನಾವಣೆಗಾಗಿ 300 ಕೋಟಿ ರೂ. ಸಂಗ್ರಹಿಸಿದ್ದರು ಎಂದು ಆರೋಪಿಸಿದ್ದಾರೆ.

ಬಿಎಸ್​ವೈ, ವಿಜಯೇಂದ್ರ ವಿರುದ್ಧ ಮಾತಾಡಿ ಯತ್ನಾಳ್ ದೊಡ್ಡ ನಾಯಕ ಆಗಬೇಕೆಂದುಕೊಂಡಿದ್ದಾರೆ: ರೇಣುಕಾಚಾರ್ಯ
ಎಂಪಿ ರೇಣುಕಾಚಾರ್ಯ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi

Updated on:Dec 10, 2023 | 6:54 PM

ದಾವಣಗೆರೆ, ಡಿ.10: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ದೊಡ್ಡ ನಾಯಕ ಆಗಬೇಕೆಂದಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (MP Renukacharya) ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿಜಯಪುರದಲ್ಲಿ ಅಡ್ಜೆಸ್ಟ್​ಮೆಂಟ್ ರಾಜಕಾರಣ ಮಾಡಿದವರು ನೀವು (ಯತ್ನಾಳ್) ಎಂದರು. ಅಲ್ಲದೆ, ಜೆಡಿಎಸ್​ನಿಂದ ಯತ್ನಾಳ್ ಅವ​ರನ್ನು ವಾಪಸ್ ಬಿಜೆಪಿಗೆ ಕರೆತಂದಿದ್ದು ಯಡಿಯೂರಪ್ಪ. ನಿಮ್ಮನ್ನು ಪಕ್ಷಕ್ಕೆ ವಾಪಸ್ ಕರೆತರಲು ಎಲ್ಲರೂ ವಿರೋಧ ಮಾಡಿದ್ದರು. ಆದರೂ ಯಡಿಯೂರಪ್ಪ ಅವರು ಪಕ್ಷಕ್ಕೆ ಕರೆತಂದರು.

ಇದನ್ನೂ ಓದಿ: ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತ ತಾಣ: ಬಸನಗೌಡ ಪಾಟೀಲ್ ಯತ್ನಾಳ್

ಕೇಂದ್ರದಲ್ಲಿ ಯತ್ನಾಳ್​ ಅವರನ್ನು ಸಚಿವರನ್ನಾಗಿ ಮಾಡಿದ್ದು ಯಡಿಯೂರಪ್ಪ. ರಾಜ್ಯದಲ್ಲಿ ಬಿಜೆಪಿ ಕಟ್ಟಲು ಯಡಿಯೂರಪ್ಪನವರ ಕೊಡುಗೆ ಇದೆ. ಪಕ್ಷಕ್ಕಾಗಿ ಯಡಿಯೂರಪ್ಪನವರು ಜೈಲಿಗೆ ಹೋಗಿದ್ದರು. ಈಗ ಬಿ.ವೈ.ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಸುಖಾಸುಮ್ಮನೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ಮಾಡಿಲ್ಲ. ಯತ್ನಾಳ್ ವಿನಾಕಾರಣ ಟೀಕೆ ಮಾಡಿದರೆ ಅದು ಕಾಂಗ್ರೆಸ್​ಗೆ ಅಸ್ತ್ರವಾಗಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದರು.

ಲೋಕಸಭೆ ಚುನಾವಣೆಗಾಗಿ ಧೀರಜ್ ಸಾಹು ಮನೆಯಲ್ಲಿ ಹಣ ಸಂಗ್ರಹ

ಕಾಂಗ್ರೆಸ್ ಸಂಸದ ಧೀರಜ್ ಸಾಹು ಮನೆಯಲ್ಲಿ ಹಣ ಪತ್ತೆ ಪ್ರಕರಣ ಸಂಬಂಧ ಮಾತನಾಡಿದ ರೇಣುಕಾಚಾರ್ಯ, ಸಾಹು ಮನೆಯಲ್ಲಿ 300 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಮುಂಬರುವ ಲೊಕಸಭಾ ಚುನಾವಣೆಗೆ ಧೀರಜ್ ಹಣ ಸಂಗ್ರಹಿಸಿಟ್ಟಿದ್ದರು. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕೇಂದ್ರಕ್ಕೆ ರೇಣುಕಾಚಾರ್ಯ ಆಗ್ರಹಿಸಿದರು.

ಭ್ರಷ್ಟಾಚಾರ ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ. ಹಣ ಬಲ, ತೋಳ್ಬಲ ಜಾತಿ ಬಲದಿಂದ ರಾಜಕಾರಣ ಮಾಡಬೇಕೆಂದಿದ್ದಾರೆ. ಐಎನ್​ಡಿಐಎ ಒಕ್ಕೂಟದಲ್ಲಿ ಒಡಕು ಮೂಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್​ಗೆ ಇರಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Sun, 10 December 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ