ವೋಟ್​ಗಾಗಿ ಯಡಿಯೂರಪ್ಪ, ಮೋದಿ ಮುಖ ತೋರಿಸುತ್ತೀರಿ, ರಾಜ್ಯಕ್ಕೆ ನಿಮ್ಮ ಕೊಡುಗೆ ಏನು; ಬಿಜೆಪಿ ನಾಯಕರಿಗೆ ರೇಣುಕಾಚಾರ್ಯ ಪ್ರಶ್ನೆ

ಬೆಂಗಳೂರಿನ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರೇಣುಕಾಚಾರ್ಯ, ನಿಮಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲವೆಂದು ಬಿಎಸ್​ವೈಗೆ ಹೇಳಿದೆ ಎಂದರು.

ವೋಟ್​ಗಾಗಿ ಯಡಿಯೂರಪ್ಪ, ಮೋದಿ ಮುಖ ತೋರಿಸುತ್ತೀರಿ, ರಾಜ್ಯಕ್ಕೆ ನಿಮ್ಮ ಕೊಡುಗೆ ಏನು; ಬಿಜೆಪಿ ನಾಯಕರಿಗೆ ರೇಣುಕಾಚಾರ್ಯ ಪ್ರಶ್ನೆ
ರೇಣುಕಾಚಾರ್ಯ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Jul 01, 2023 | 1:29 PM

ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಸಮನ್ಸ್​​ ಪಡೆದಿದ್ದ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukacharya) ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಮತ ಪಡೆಯುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮುಖ ತೋರಿಸುತ್ತೀರಿ. ಹಾಗಿದ್ದರೆ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ನನ್ನ ಹೋರಾಟ ಹಾಗೂ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರೇಣುಕಾಚಾರ್ಯ, ನಿಮಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲವೆಂದು ಬಿಎಸ್​ವೈಗೆ ಹೇಳಿದೆ. ಅವರಿಗೆ ವಯಸ್ಸಾಯಿತು ಎಂದು ಅಧಿಕಾರದಿಂದ ಕೆಳಗಿಳಿಸಿದರು. ಹಾಗಿದ್ದರೆ ರಾಜ್ಯ ಪ್ರವಾಸ ಮಾಡಲು ಯಡಿಯೂರಪ್ಪ ಬೇಕಾ? ವೋಟ್​ ಕೇಳಲು ಯಡಿಯೂರಪ್ಪ, ಮೋದಿ ಮುಖ ತೋರಿಸುವುದು ಏಕೆ? ಹಾಗಾದರೆ ರಾಜ್ಯಕ್ಕೆ, ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ; ರೇಣುಕಾಚಾರ್ಯ

ಯಡಿಯೂರಪ್ಪ ಮಾತಿಗೆ ಗೌರವ ಕೊಡ್ತೇನೆ. ಇನ್ನು ಮುಂದೆ ನಾನು ಎಲ್ಲವನ್ನೂ ಬಹಿರಂಗವಾಗಿ ಮಾತಾಡುವುದಿಲ್ಲ. ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ. ನನಗೆ ಯಡಿಯೂರಪ್ಪ, ನರೇಂದ್ರ ಮೋದಿ ಅವರ ಹಾಗೂ ಪಕ್ಷದ ಆಶೀರ್ವಾದವಿದೆ. ಯಾರಿಗೂ ಹೆದರುವುದಿಲ್ಲ, ನನ್ನನ್ನು ತುಳಿಯಲು ಯಾರಿಂದಲೂ ಆಗಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್