ನಾವು ಮಾತಾನಾಡಿದರೆ ಪಕ್ಷವಿರೋಧಿ, ಅವರಾದರೆ ಪಕ್ಷ ಸಂಘಟನೆ: ಬಿಜೆಪಿ ನಾಯಕತ್ವದ ವಿರುದ್ಧ ಮತ್ತೆ ಸಿಡಿದೆದ್ದ ರೇಣುಕಾಚಾರ್ಯ

ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ರಾಜ್ಯದಲ್ಲಿ ಅವರಂಥ ಜಾತ್ಯತೀತ ಹಾಗೂ ಸಮರ್ಥ ನಾಯಕ ಬೇಕು. ವಿಜಯದಶಮಿ ದಿನ ಒಂದು ಮಾತು ಹೇಳ್ತಿದ್ದೇನೆ, ರಾಜ್ಯದಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ರೇಣುಕಾಚಾರ್ಯ ಪ್ರತಿಪಾದಿಸಿದರು.

ನಾವು ಮಾತಾನಾಡಿದರೆ ಪಕ್ಷವಿರೋಧಿ, ಅವರಾದರೆ ಪಕ್ಷ ಸಂಘಟನೆ: ಬಿಜೆಪಿ ನಾಯಕತ್ವದ ವಿರುದ್ಧ ಮತ್ತೆ ಸಿಡಿದೆದ್ದ ರೇಣುಕಾಚಾರ್ಯ
ಎಂಪಿ ರೇಣುಕಾಚಾರ್ಯ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Ganapathi Sharma

Updated on: Oct 24, 2023 | 2:30 PM

ದಾವಣಗೆರೆ, ಅಕ್ಟೋಬರ್ 24: ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ನಾವು ಮಾತನಾಡಿದರೆ ಪಕ್ಷವಿರೋಧಿ, ಅವರು ಮಾತನಾಡಿದ್ರೆ ಪಕ್ಷ ಸಂಘಟನೆ. ಎಂಎಲ್​ಸಿ ಹಾಗೂ ರಾಜ್ಯಸಭಾ ಸ್ಥಾನ ಅವರು ಹೇಳಿದವರಿಗೆ ನೀಡ್ತಾರೆ. ಅವರ ಒಳ ಹೊಡೆತಗಳು ಹೇಳತೀರದು ಎಂದು ಬಿಜೆಪಿ (BJP) ನಾಯಕ ಎಂಪಿ ರೇಣುಕಾಚಾರ್ಯ (MP Renukacharya) ಪರೋಕ್ಷವಾಗಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santhosh) ವಿರುದ್ಧ ವಾಗ್ದಾಳಿ‌ ನಡೆಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಓಡಾಟ ನನಗೆ ಹೊಸದಲ್ಲ, ರಾಜ್ಯಾದ್ಯಂತ ನಾನು ಪ್ರವಾಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಾದ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ. ಒಟ್ಟಾರೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ರಾಜ್ಯದಲ್ಲಿ ಅವರಂಥ ಜಾತ್ಯತೀತ ಹಾಗೂ ಸಮರ್ಥ ನಾಯಕ ಬೇಕು. ವಿಜಯದಶಮಿ ದಿನ ಒಂದು ಮಾತು ಹೇಳ್ತಿದ್ದೇನೆ, ರಾಜ್ಯದಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ. ಬಿಎಸ್​ವೈ ಹೊರಟರೆ ಲಕ್ಷಾಂತರ ಕಾರ್ಯಕರ್ತರು ಹಿಂದೆ ನಿಲ್ತಾರೆ ಎಂದು ರೇಣುಕಾಚಾರ್ಯ ಪ್ರತಿಪಾದಿಸಿದರು.

ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಭಾರತೀಯ ಜನತಾ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಹೋಗಬೇಕು. ಮೊನ್ನೆ ಚುನಾವಣೆ ವೇಳೆ ಹೊಸ ಮುಖಗಳಿಗೆ ಟಿಕೆಟ್ ನೀಡಲಾಯಿತು. ಹಳಬರ ಕಾಲು ಏನಾದರೂ ಬಿದ್ದು ಹೋಗಿದ್ದವಾ? ಚುನಾವಣೆ ವೇಳೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕಿತ್ತು. ಬಿಎಸ್​ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡೋದು ಬೇಡ ಅಂತ ಒತ್ತಡ ಹಾಕಿದ್ದೆವು. ಕೆಲ ನಾಯಕರು ಯಡಿಯೂರಪ್ಪರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೈತ್ರಿಗೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಸಾಮರಸ್ಯ ಏರ್ಪಡಬೇಕು, ಬಿಜೆಪಿ-ಜೆಡಿಎಸ್ ನಡುವೆ ಆಗಿರುವ ಮೈತ್ರಿ ಅಪೂರ್ಣ: ಎಂಪಿ ರೇಣುಕಾಚಾರ್ಯ

ಹಾದಿ ಬೀದಿಯಲ್ಲಿ ಹೋಗುವವರಿಗೆ ನಾನೇಕೆ ಉತ್ತರ ಕೊಡಲಿ ಎಂದು ಬಿಜೆಪಿ ಸಂಸದರ ವಿರುದ್ಧ ರೇಣುಕಾಚಾರ್ಯ ಮತ್ತೆ ವಾಗ್ದಾಳಿ ನಡೆಸಿದರು. ಅವರ ಬಗ್ಗೆ ನನಗೆ ಗೌರವವಿದೆ, ಅವರಿಗಿಂತ ಪಕ್ಷದಲ್ಲಿ ನಾನು ಸೀನಿಯರ್. ಅವರು ವಯಸ್ಸಿನಲ್ಲಿ ಸೀನಿಯರ್ ಆಗಿರಬಹುದು, ಪಕ್ಷದಲ್ಲಿ ನಾನು ಸೀನಿಯರ್. ಪಕ್ಷಕ್ಕಾಗಿ 2 ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ. ನನ್ನ ರಕ್ತದ ಪ್ರತಿ ಕಣದಲ್ಲೂ ಹಿಂದುತ್ವ ಇದೆ ಎಂದು ಎಂಪಿ ರೇಣುಕಾಚಾರ್ಯ ಹೇಳಿದರು.

ಈ ಹಿಂದೆ ಕೂಡ ರೇಣುಕಾಚಾರ್ಯ ಹಲವು ಬಾರಿ ಬಿಜೆಪಿ ನಾಯಕತ್ವದ ಹಾಗೂ ಬಿಎಲ್​ ಸಂತೋಷ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅದೇ ರೀತಿ, ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ. ಇದೀಗ ಮತ್ತೆ ಪಕ್ಷದ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ