AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಎಐಸಿಸಿ ಅಧ್ಯಕ್ಷರಾಗಿದ್ದಕ್ಕೆ ಸೂಪರ್ ಸಿಎಂ ರೀತಿ ವರ್ತಿಸುತ್ತಿರುವ ಪ್ರಿಯಾಂಕ್ ಖರ್ಗೆ; ರೇಣುಕಾಚಾರ್ಯ ವಾಗ್ದಾಳಿ

ಸಚಿವ ಪ್ರಿಯಾಂಕ್ ಖರ್ಗೆ ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ. ಅವರು, ತಂದೆ ಎಐಸಿಸಿ ಅಧ್ಯಕ್ಷರಾಗಿದ್ದಾರೆಂದು ಈ ರೀತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ತಂದೆ ಎಐಸಿಸಿ ಅಧ್ಯಕ್ಷರಾಗಿದ್ದಕ್ಕೆ ಸೂಪರ್ ಸಿಎಂ ರೀತಿ ವರ್ತಿಸುತ್ತಿರುವ ಪ್ರಿಯಾಂಕ್ ಖರ್ಗೆ; ರೇಣುಕಾಚಾರ್ಯ ವಾಗ್ದಾಳಿ
ರೇಣುಕಾಚಾರ್ಯ
Ganapathi Sharma
|

Updated on: May 30, 2023 | 3:27 PM

Share

ದಾವಣಗೆರೆ: ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ. ಅವರು, ತಂದೆ ಎಐಸಿಸಿ ಅಧ್ಯಕ್ಷರಾಗಿದ್ದಾರೆಂದು ಈ ರೀತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukachary) ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸುವಂತೆ ಅಭಿಯಾನ ಆರಂಭಿಸಿದ್ದೇನೆ. ಜೂನ್ 1ರಿಂದ ಯಾರೂ 200 ಯೂನಿಟ್ ವರೆಗಿನ ವಿದ್ಯುತ್ ಬಿಲ್ ಕಟ್ಟಬೇಡಿ. ಒಂದು ವೇಳೆ ಏನಾದರೂ ಹಣ ಕೇಳಿದರೆ ನನಗೆ ಫೋನ್ ಮಾಡಿ ಎಂದು ಹೇಳಿದ್ದಾರೆ. ಜತೆಗೆ, ಮನೆ ಮನೆಗೆ ತೆರಳಿ ಗ್ಯಾರಂಟಿ ಅಭಿಯಾನ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅಪಾರವಾದ ಗೌರವ ಇದೆ. ಆದರೆ ಸಿಎಂ, ಡಿಸಿಎಂ ಗ್ಯಾರಂಟಿ ಕಾರ್ಡ್ ಮೇಲೆ ಸಹಿ‌ಮಾಡಿದ್ದಾರೆ. ಅದ್ದರಿಂದ ಯಾವುದೇ ಕಂಡೀಷನ್ ಇಲ್ಲದೆ ಯೋಜನೆ ಜಾರಿಗೊಳಿಸಬೇಕು. ಜೂನ್ 1ರೊಳಗೆ ಜಾರಿಗೊಳಿಸದಿದ್ದರೆ ಮತ್ತೆ ಅಭಿಯಾನ ಆರಂಭಿಸುತ್ತೇವೆ ಎಂದು ಅವರು ಆಗ್ರಹಿಸಿದ್ದಾರೆ.

ಜನ ಕಾಂಗ್ರೆಸ್ ನಾಯಕರ ಮುಖ ನೋಡಿ ಮತ ಹಾಕಿಲ್ಲ; ಪ್ರತಾಪ್ ಸಿಂಹ

ರಾಜ್ಯದ ಜನ ಕಾಂಗ್ರೆಸ್ ನಾಯಕರ ಮುಖ ನೋಡಿ ಮತ ಹಾಕಿಲ್ಲ. ಬದಲಿಗೆ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಕಾರ್ಡ್ ನೋಡಿ ಮತಹಾಕಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಜನರಿಗೆ ನೀಡಿದ ಗ್ಯಾರಂಟಿ ಭರವಸೆ ಈಡೇರಿಸಲಿ. ಗ್ಯಾರಂಟಿ ಘೋಷಿಸುವಾಗ ಯಾವುದೇ ಷರತ್ತು ವಿಧಿಸಿರಲಿಲ್ಲ. ಗ್ಯಾರಂಟಿ ಜಾರಿ ಸಂದರ್ಭದಲ್ಲೂ ಯಾವುದೇ ಷರತ್ತು ವಿಧಿಸಬಾರದು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ

ಗ್ಯಾರಂಟಿ ಜಾರಿಗೆ ಆಗ್ರಹ ಹೆಚ್ಚಾಗುತ್ತಿರುವ ಬೆನ್ನಲ್ಲೇ, ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಘೋಷಣೆ ಮಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್​ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ