Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಸುಮಲತಾ ಅಂಬರೀಶ್​ ಬಿಜೆಪಿಯಲ್ಲೇ ಇರುತ್ತಾರೆ: ಸಚಿವ ಪ್ರಹ್ಲಾದ ಜೋಶಿ

ಈ ಬಾರಿಯೂ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್​​ ಪಟ್ಟು ಹಿಡಿದಿದ್ದಾರೆ. ಅಲ್ಲದೆ ಸುಮಲತಾ ಅಂಬರೀಶ್​ ಇತ್ತೀಚಿಗೆ ಬಿಜೆಪಿ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಿ ಬಂದಿದ್ದರು. ಒಂದು ವೇಳೆ ಮಂಡ್ಯ ಕ್ಷೇತ್ರದಿಂದ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್​ ಸೇರಿಯೋ ಅಥವಾ ಪಕ್ಷೇತರವಾಗಿ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಈ ಮಾತುಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ತೆರೆ ಎಳೆದಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್​ ಬಿಜೆಪಿಯಲ್ಲೇ ಇರುತ್ತಾರೆ: ಸಚಿವ ಪ್ರಹ್ಲಾದ ಜೋಶಿ
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Feb 23, 2024 | 2:04 PM

ಹುಬ್ಬಳ್ಳಿ, ಫೆಬ್ರವರಿ 23: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಿಜೆಪಿಯಲ್ಲೇ ಇರುತ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Pralhad Joshi) ತಿಳಿಸಿದ್ದಾರೆ. ಇಂದು (ಫೆ.23) ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಸುಮಲತಾ ಬಿಜೆಪಿಯಲ್ಲಿ ಇರುತ್ತಾರೆ ಎಂದಷ್ಟೇ ಪ್ರತಿಕ್ರಿಯಿಸಿದರು. ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ. ಬಿಜೆಪಿ ರಾಜ್ಯ ಘಟಕ ಮತ್ತು ಜೆಡಿಎಸ್ ರಾಜ್ಯ ಘಟಕದೊಂದಿಗೆ ಇಷ್ಟರಲ್ಲೇ ಹೈಕಮಾಂಡ್ ಮಾತುಕತೆ ನಡೆಸಲಿದೆ. ಬಳಿಕವೇ ಟಿಕೆಟ್ ಹಂಚಿಕೆಯಾಗಲಿದೆ ಎಂದು ಹೇಳಿದರು.

ಸೀಟು ಹಂಚಿಕೆ ಸರಿಯಾಗೇ ಆಗುತ್ತದೆ

ಹೆಚ್​ಡಿ ಕುಮಾರಸ್ವಾಮಿ ಅವರು ಯಾವುದಕ್ಕೆ ನಮ್ಮ ವರಿಷ್ಠರನ್ನು ಭೇಟಿ ಮಾಡಿದ್ದಾರೆ ಗೊತ್ತಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಸರಿಯಾಗಿಯೇ ಆಗುತ್ತದೆ. ನಮಗೆ ಆ ವಿಶ್ವಾಸವಿದೆ ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಅಯೋಧ್ಯೆ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು: ಪ್ರಲ್ಹಾದ್ ಜೋಶಿ ಕಿಡಿ

ಇಂಡಿಯಾ ಒಕ್ಕೂಟವನ್ನ ನಾವು ಒಡೆಯುತ್ತಿದ್ದೇವೆ ಅನ್ನೋದು ತಪ್ಪು. ಅವರವರೇ ಜಗಳ ಮಾಡಿಕೊಂಡು ಹೊರಗೆ ಬರುತ್ತಿದ್ದಾರೆ. ಮಮತಾ ಬ್ಯಾನರ್ಜಿಯ ಅನ್ಯಾಯ, ಅತ್ಯಾಚಾರಕ್ಕೆ ತುತ್ತಾಗಿರುವುದು ಬಿಜೆಪಿ. ಮಮತಾ ನಮ್ಮ ಮಾತು ಕೇಳುತ್ತಾರಾ? ನಿಮ್ಮ ರಾಹುಲ್ ಗಾಂಧಿಗೆ ಅಪಕ್ವತೆ ಇರುವುದರಿಂದ ನಿಮ್ಮ ಪಕ್ಷ ನಂಬಿ ಬರಲು ಯಾರೂ ತಯಾರಿಲ್ಲ. ಇದೊಂದು ಅವಕಾಶವಾದಿಗಳ ಕೂಟ ಅಂತ ಆರಂಭದಲ್ಲಿ ನಾವು ಹೇಳಿದ್ದೇವು. ಇದೊಂದು ಫೋಟೋಶೂಟ್ ಆಗುತ್ತೆ, ಮುಂದೇನು ಆಗಲ್ಲಾ ಅಂದಿದ್ದೆ ಎಂದು ಕಾಂಗ್ರೆಸ್​ ಮಿತ್ರ ಕೂಟಗಳ ವಿರುದ್ಧ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ