AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸ್ಟರ್ ಈ ಆಟ ನಡೆಯಲ್ಲ: ದೇವೇಗೌಡ ಕೊಟ್ಟ ಎಚ್ಚರಿಕೆಗೆ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಮಿಸ್ಟರ್ ಡಿ.ಕೆ.ಶಿವಕುಮಾರ್ ಈ ಆಟ ನಡೆಯಲ್ಲ ಅಂತಾ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ತಾವು ಎಷ್ಟೇ ವಾರ್ನಿಂಗ್ ಕೊಟ್ಟರೂ ಹೆದರಿಸಿದರೂ, ಬೆದರಿಸಿದರೂ ತಮ್ಮ ಸುಪುತ್ರನ ಕ್ಷೇತ್ರದ ಮುಖಂಡರು ಕಾಂಗ್ರೆಸ್ ಪಕ್ಷದ ಕಡೆ ಬಂದಿದ್ದಾರೆ ಎಂದು ಹೆಚ್​.ಡಿ.ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. 

ಮಿಸ್ಟರ್ ಈ ಆಟ ನಡೆಯಲ್ಲ: ದೇವೇಗೌಡ ಕೊಟ್ಟ ಎಚ್ಚರಿಕೆಗೆ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಡಿಸಿಎಂ ಡಿ.ಕೆ.ಶಿವಕುಮಾರ್, JDS ವರಿಷ್ಠ ಹೆಚ್​.ಡಿ.ದೇವೇಗೌಡ
ಪ್ರಸನ್ನ ಗಾಂವ್ಕರ್​
| Edited By: |

Updated on: Oct 02, 2023 | 1:27 PM

Share

ಬೆಂಗಳೂರು, ಅಕ್ಟೋಬರ್​ 02: ಮಿಸ್ಟರ್ ಡಿ.ಕೆ.ಶಿವಕುಮಾರ್ (DK Shivakumar) ಈ ಆಟ ನಡೆಯಲ್ಲ ಅಂತಾ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ JDS​​ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, JDS ವರಿಷ್ಠ ಹೆಚ್​.ಡಿ.ದೇವೇಗೌಡ ಮಾತು ನನಗೆ ಆಶೀರ್ವಾದ ಇದ್ದಂತೆ. ವಿಸರ್ಜನೆ ಮಾಡುತ್ತೇವೆ ಎಂದಾಗ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ರಾಜಕಾರಣ ಹಾವು ಏಣಿ ಆಟ, ಚೆಸ್​ ಗೇಮ್. ಹಿಂದೆ ನೀವೇನು ಮಾಡಿದಿರಿ, ಬಿಜೆಪಿಯವರು ಏನು ಮಾಡಿದರು ಗೊತ್ತಿದೆ. ನೀವು ಹೆದರಿಸಿದರೆ ಡಿಕೆ ಹೆದರಲ್ಲ ಎನ್ನೋದು ನಿಮಗೂ ಗೊತ್ತಿದೆ. ನೀವು ಯಾರನ್ನು ಬೇಕಾದರೂ ಸಹ ಕಟ್ಟಿಹಾಕಿಕೊಳ್ಳಿ, ಹಿಡಿದಿಟ್ಟುಕೊಳ್ಳಿ. ಆದರೆ ಮನೆಮನೆಗೆ ಹೋಗಿ ಕಾರ್ಯಕರ್ತರನ್ನು ಕರೆದುಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ.

ಹೆಚ್​.ಡಿ.ದೇವೇಗೌಡರ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್​ ವಾಗ್ದಾಳಿ

ನಾನು ನಮ್ರತೆಯಿಂದ ಕಾರ್ಯಕರ್ತರನ್ನು ಕರೆದುಕೊಂಡು ಬರುತ್ತೇನೆ. 88ರಲ್ಲೂ ರಾಜಕಾರಣ ಮಾಡಿದ್ದೇನೆ, 89ರಲ್ಲೂ ರಾಜಕಾರಣ ಮಾಡಿದ್ದೇನೆ. ಸಾತನೂರಿನಲ್ಲಿ ನಾನು ಏನು ಮಾಡಿದೆ, ತೇಜಸ್ವಿನಿ ಏನು ಮಾಡಿದ್ರು ಗೊತ್ತು.

ಇದನ್ನೂ ಓದಿ: ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ‘ಜಾತ್ಯಾತೀತ’ ಸಿದ್ದರಾಮಯ್ಯರಿಗಿದೆಯೇ? ಬಿಜೆಪಿ ಪ್ರಶ್ನೆ

ತಾವು ಎಷ್ಟೇ ವಾರ್ನಿಂಗ್ ಕೊಟ್ಟರೂ ಹೆದರಿಸಿದರೂ, ಬೆದರಿಸಿದರೂ ತಮ್ಮ ಸುಪುತ್ರನ ಕ್ಷೇತ್ರದ ಮುಖಂಡರು ಕಾಂಗ್ರೆಸ್ ಪಕ್ಷದ ಕಡೆ ಬಂದಿದ್ದಾರೆ ಎಂದು ಹೆಚ್​.ಡಿ.ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಿದ್ಧಾಂತ ನಂಬಿಕೊಂಡ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು

ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿರುವ ಡಿ.ಕೆ.ಶಿವಕುಮಾರ್, ತಾವು ಒಂದೊಂದು ದಿನ ಎಲ್ಲಿ ಬೇಕಾದ್ರೂ ಸಂಬಂಧ ಬೆಳೆಸಿಕೊಳ್ಳಬಹುದು. ದಂಡ ನಾಯಕರಾಗಿ ಎಷ್ಟು ಸಲ ಪಕ್ಷ ವಿಸರ್ಜನೆ ಮಾಡ್ತೀವಿ ಅಂತೀರಾ? ಹಾಗಾದರೆ ಸಿದ್ಧಾಂತ ನಂಬಿಕೊಂಡ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು.

ಇದನ್ನೂ ಓದಿ: ಜೆಡಿಎಸ್- ಬಿಜೆಪಿ ಮೈತ್ರಿ ಉದ್ದೇಶವನ್ನ ಕೊನೆಗೂ ಬಾಯ್ಬಿಟ್ಟ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಕಾಂಗ್ರೆಸ್ ಎಂಎಲ್​ಸಿ ಆಗಿದ್ದ ಇಬ್ರಾಹಿಂರನ್ನು ಕರೆದುಕೊಂಡು ಹೋದರು. ಆಗ ನಾನೂ ಕೂಡ ನಿಮ್ಮ ತರಹವೇ ಮಿಸ್ಟರ್ ಅಂತ ಹೇಳಬಹುದಿತ್ತಲ್ಲವೇ. ಆದರೆ ನಾನು ಇಂಗ್ಲಿಷ್​​ನಲ್ಲಿ ಮಿಸ್ಟರ್ ಅಂತಾ ನಿಮಗೆ ಹೇಳಲ್ಲ. ಸಾಗರೋಪಾದಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ನೋಡುತ್ತೀರಿ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು