AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ; ಜಮೀರ್​

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅನುಮತಿ ನೀಡಿದ್ದಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್​ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್​ ನಾಯಕರು ನಾಲಿಗೆ ಹರಿ ಬಿಟ್ಟಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ; ಜಮೀರ್​
ಸಚಿವ ಜಮೀರ್ ಅಹ್ಮದ್ ಖಾನ್
ಪ್ರಸನ್ನ ಗಾಂವ್ಕರ್​
| Edited By: |

Updated on:Aug 19, 2024 | 2:25 PM

Share

ಬೆಂಗಳೂರು, ಆಗಸ್ಟ್​ 19: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ಅದಕ್ಕೆ ರಾಜ್ಯಪಾಲರೇ ಹೊಣೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಅವರು ಅನುಮತಿ ನೀಡಿದ್ದನ್ನು ವಿರೋಧಿಸಿ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಮೀರ್​, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಬಿಜೆಪಿ, ಜೆಡಿಎಸ್​ ಏನೇ ಮಾಡಿದರೂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಆಗಲ್ಲ. ವರಿಷ್ಠರು, ರಾಜ್ಯದ ಏಳು ಕೋಟಿ ಜನ ಸಿಎಂ ಪರವಾಗಿ ಇದ್ದಾರೆ. ಏನಾದರೂ ಗಲಾಟೆ, ಹಲ್ಲೆಯಾದ್ರೆ ಅದಕ್ಕೆ ರಾಜ್ಯಪಾಲರೇ ಹೊಣೆ. ಕರ್ನಾಟಕದ ಜನ ಸುಮ್ಮನೆ ಕೂರಲ್ಲ ಎಂದರು.

ಹಿಂದುಳಿದ ವರ್ಗದ ನಾಯಕನಾಗಿರುವುದಕ್ಕೆ ಸಿಎಂ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಸಂವಿಧಾನ ವಿರುದ್ಧವಾಗಿ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರದಲ್ಲೇ ಕಾಲದಲ್ಲಿ 14 ನಿವೇಶನ ಕೊಟ್ಟಿದ್ದಾರೆ. ಸಿಎಂ ಪಾಪ್ಯುಲಾರಿಟಿ ಸಹಿಸಲಾಗದೆ ಸರ್ಕಾರ ತೆಗೆಯಲು ಯತ್ನಿಸಲಾಗುತ್ತಿದೆ. ಬಿಜೆಪಿಯವರಿಗೆ ಜನ ಯಾವತ್ತೂ ಬಹುಮತ ನೀಡಿಲ್ಲ ಎಂದು ಗುಡುಗಿದರು.

ಇದನ್ನೂ ಓದಿ: ಒಬ್ಬ ಅಯೋಗ್ಯ, ಬೇಜವಾಬ್ದಾರಿ ಗವರ್ನರ್; ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಲೀಂ ಅಹ್ಮದ್

ಮುಖ್ಯಮಂತ್ರಿಯಾಗಿದ್ದ ವೇಳೆ ಯಾರಾದರೂ ಜೈಲಿಗೆ ಹೋಗಿದ್ದರೆ ಅದು ಬಿಎಸ್ ಯಡಿಯೂರಪ್ಪ ಅವರು. ಯಾವ ದೂರಿನ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಕೇಳಿದ್ದರೂ ಯಾಕೆ ಅನುಮತಿ ಕೊಟ್ಟಿಲ್ಲ. ನಮಗೆ ನ್ಯಾಯಾಲಯದ ಮೇಲೆ ವಿಶ್ವಾಸವಿದೆ ಎಂದರು.

ರಾಜ್ಯಪಾಲ ರಾಜ್ಯ ಬಿಟ್ಟು ತೊಲಗಲು ಹೋರಾಟ ಮಾಡ್ತೆವೆ: ಗುಂಡೂರಾವ್

ನಾವು ಉಪ್ಪೂ ತಿಂದಿಲ್ಲ, ನೀರೂ ಕುಡಿಯಲ್ಲ. ಈ ರಾಜ್ಯಪಾಲ ಕರ್ನಾಟಕ ಬಿಟ್ಟು ತೊಲಗಬೇಕು ಅಂತ ಹೋರಾಟ ಕೂಡ ಮಾಡಬೇಕಾಗುತ್ತದೆ. ಥಾವರ್​ ಚಂದ್​ ಗೆಹ್ಲೋಟ್ ಘನತೆ ಇಲ್ಲದ ರಾಜ್ಯಪಾಲರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದರು. ಭ್ರಷ್ಟಾಚಾರದಲ್ಲಿ ಬಿಎಸ್​ವೈ ಪುತ್ರ ವಿಜಯೇಂದ್ರ ಪಿಹೆಚ್​ಡಿ ಮಾಡಿದ್ದಾರೆ. ದೇಶದಲ್ಲಿಯೇ ಅತಿ ದೊಡ್ಡ ಭ್ರಷ್ಟಾಚಾರಿ ಬಿ.ಎಸ್.ಯಡಿಯೂರಪ್ಪ. ಬ್ಲ್ಯಾಕ್​ಮೇಲ್​ ನೈಪುಣ್ಯತೆ ಇರುವ ಏಕೈಕ ವ್ಯಕ್ತಿ ಹೆಚ್​. ಡಿ.ಕುಮಾರಸ್ವಾಮಿ ಎಂದು ಆರೋಪ ಮಾಡಿದರು.

ಕಳ್ಳರ ಕೂಟ ಸೇರಿಕೊಂಡು ಕುಮಾರಸ್ವಾಮಿ ಷಡ್ಯಂತ್ರ ಮಾಡಿದ್ದಾರೆ. ಭ್ರಷ್ಟಾಚಾರ ಮತ್ತು ವಿಜಯೇಂದ್ರ ಬೇರೆ ಬೇರೆ ಅಲ್ಲ, ಎರಡೂ ಒಂದೇ. ಭ್ರಷ್ಟಾಚಾರದಲ್ಲಿಯೇ ಹುಟ್ಟಿದವರು, ಭ್ರಷ್ಟಾಚಾರದಲ್ಲಿಯೇ ಬೆಳೆದವರು ಎಂದು ಕಿಡಿ ಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:29 pm, Mon, 19 August 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ