Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: 15 ಸೈಟು ಡಿನೋಟಿಫೈ ಮಾಡಿ ಎಂದು ಅರ್ಜಿ ಕೊಟ್ಟಿದ್ದೇ ಸಿಎಂ ಭಾವಮೈದ, ಕುಮಾರಸ್ವಾಮಿ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನ ನೇರವಾಗಿ ಶಾಮೀಲಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಲೋಕಾಯುಕ್ತ ವರದಿಯನ್ನು ಉಲ್ಲೇಖಿಸಿ, ಸಿಎಂ ಅವರ ಭಾವಮೈದ ಹದಿನೈದು ನಿವೇಶನಗಳ ಡಿನೋಟಿಫಿಕೇಶನ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಸಹಿ ಪೋರ್ಜರಿ ಆಗಿತ್ತು ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮುಡಾ ಹಗರಣ: 15 ಸೈಟು ಡಿನೋಟಿಫೈ ಮಾಡಿ ಎಂದು ಅರ್ಜಿ ಕೊಟ್ಟಿದ್ದೇ ಸಿಎಂ ಭಾವಮೈದ, ಕುಮಾರಸ್ವಾಮಿ
ಹೆಚ್‌ಡಿ ಕುಮಾರಸ್ವಾಮಿ
Follow us
ವಿವೇಕ ಬಿರಾದಾರ
|

Updated on:Apr 05, 2025 | 8:37 PM

ಬೆಂಗಳೂರು, ಏಪ್ರಿಲ್​ 05: ಮುಡಾ (MUDA) ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇರ ಶಾಮೀಲಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಸಿಎಂ ಭಾವಮೈದ ಹದಿನೈದು ನಿವೇಶನಗಳ ಡಿನೋಟಿಫೈ ಮಾಡಲು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯಲ್ಲಿ ಸಹಿಯನ್ನು ಪೋರ್ಜರಿ ಮಾಡಲಾಗಿತ್ತು ಎಂದು ಆರೋಪ ಮಾಡಿದರು.

ನಾನು ಸತ್ಯವಂತ, ಸತ್ಯ ಹರಿಶ್ಚಂದ್ರ, ಸತ್ಯಮೆಯ ಜಯತೇ ಎಂದು ಹೇಳುವ ಆಸಾಮಿಯ ಚರಿತ್ರೆ ಲೋಕಾಯುಕ್ತ ವರದಿಯಲ್ಲಿ ಉಲ್ಲೇಖ ಆಗಿದೆ. ಆಸಕ್ತರು ಈ ಮಹಾನ್ ಗ್ರಂಥವನ್ನು ಓದಿ ಸತ್ಯವನ್ನು ತಿಳಿದುಕೊಳ್ಳಬಹುದು ಎಂದು ತಿರುಗೇಟು ಕೊಟ್ಟರು.

ಆಗ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಆಗಿದ್ದರು. ಬಚ್ಚೇಗೌಡರು ನಗರಾಭಿವೃದ್ಧಿ ಸಚಿವರಾಗಿದ್ದರು. ಹದಿನೈದು ನಿವೇಶನ ಡಿನೋಟಿಫೈ ಮಾಡಿ ಎಂದು ಅವರ ಭಾವಮೈದ ಬಚ್ಚೇಗೌಡರಿಗೆ ಅರ್ಜಿ ಸಲ್ಲಿಸಿದರು. ಆ ಭಾವಮೈದ ಎನ್ನುವ ಆಸಾಮಿ ಸಹಿಯನ್ನೇ ನಕಲಿ ಮಾಡಿದ್ದಾನೆ ಎಂದು ವರದಿಯಲ್ಲಿ ಇದೆ. ಅಲ್ಲದೆ ಅರ್ಜಿಯ ಮೇಲೆ ಇಂಗ್ಲಿಷ್ ನಲ್ಲಿ DCM ಎಂದು ಬರೆಯಲಾಗಿದೆ. ಆ ಬಗ್ಗೆ ಬಂದಿರುವ fsil ವರದಿಯನ್ನು ಲೋಕಾಯುಕ್ತ ವರದಿಯಲ್ಲಿ ಅಡಕವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ
Image
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
Image
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
Image
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
Image
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು

ಇದನ್ನೂ ಓದಿ: ಇಂದಿನಿಂದ ಯುದ್ಧ ಆರಂಭ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೊಡೆ ತಟ್ಟಿದ ಕುಮಾರಣ್ಣ

ನಾನು ಸಾಚಾ, ಸತ್ಯವಂತ ಹೇಳಿ ಜನರನ್ನು ದಾರಿ ತಪ್ಪಿಸುತ್ತಿರುವ ಸಿಎಂ ಅಸಲಿ ಮುಖ ಲೋಕಾಯುಕ್ತ ವರದಿಯಲ್ಲಿ ಇದೆ. ಈಗ ಅವರು ಹಗರಣದಿಂದ ಪಾರಾಗಲು ಯಾವ ಮಾರ್ಗ ಹಿಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ ಎಂದು ವಾಗ್ದಾಳಿ ಮಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Sat, 5 April 25

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ