Mukyamanthri Chandru: ಎಎಪಿ ಪಕ್ಷದ ನೂತನ ರಾಜ್ಯಾಧಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ
ಆಮ್ ಆದ್ಮಿ ಪಕ್ಷದ ಕರ್ನಾಟಕ ಘಟಕದ ನೂತನ ಅಧ್ಯಕ್ಷರನ್ನಾಗಿ ಚಲನಚಿತ್ರ ಕಲಾವಿದ ಮತ್ತು ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅವರನ್ನು ಗುರುವಾರ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಅವರು ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ.
ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ಘಟಕದ ನೂತನ ಅಧ್ಯಕ್ಷರನ್ನಾಗಿ ಚಲನಚಿತ್ರ ಕಲಾವಿದ ಮತ್ತು ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು (Mukhyamantri Chandru) ಅವರನ್ನು ಗುರುವಾರ ನೇಮಕ ಮಾಡಿದ್ದಾರೆ. ಈ ಕುರಿತಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಅವರು ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಚಂದ್ರು ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವುದಕ್ಕೂ ಮುಂಚೆ ಪೃಥ್ವಿ ರೆಡ್ಡಿಯವರು ಅಧ್ಯಕ್ಷರಾಗಿದ್ದರು.
ಸದ್ಯ ಪೃಥ್ವಿ ರೆಡ್ಡಿ ಅವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದು, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಟಿ ನಾಗಣ್ಣ ಹಾಗೂ ಅಜುರ್ನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಆಮ್ ಆದ್ಮಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಕಾಂಗ್ರೆಸ್ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು; ಡಿಕೆ ಶಿವಕುಮಾರ್ಗೆ ರಾಜೀನಾಮೆ ಸಲ್ಲಿಸಿದ ಹಿರಿಯ ನಟ
ಮುಖ್ಯಮಂತ್ರಿ ಚಂದ್ರು ಅವರು ಕರ್ನಾಟಕದ ಖ್ಯಾತ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ, ಮಾಜಿ ಶಾಸಕ ಮತ್ತು ಹಿರಿಯ ರಾಜಕಾರಣಿಯಾಗಿ ಸಾಕಷ್ಟು ಅನುಭವ ಹೊಂದಿದ್ದಾರೆ. ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿ ಅವರು ಮೇ 2022ರಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.