AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಖಾನ್​ಗೆ ಬೆಂಬಲಿಸಲು ದೇವೇಗೌಡರಿಗೆ ಪತ್ರ; ಪತ್ರದಲ್ಲಿ ಇಲ್ಲ ಹೆಸರು

ಜೆಡಿಎಸ್ ನಾಯಕರ ನಡವಳಿಕೆ ಗಮನಿಸಿದರೆ ಜೆಡಿಎಸ್ ಈ ಬಾರಿ ಕಾಂಗ್ರೆಸ್​ನ ಬೆಂಬಲಿಸುವುದು ದೂರದ ಮಾತು. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಖಾನ್ನ ಬೆಂಬಲಿಸುವಂತೆ ಮುಸ್ಲಿಂ ಮುಖಂಡರು ಹೆಚ್​ಡಿ ದೇವೇಗೌಡರಿಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಖಾನ್​ಗೆ ಬೆಂಬಲಿಸಲು ದೇವೇಗೌಡರಿಗೆ ಪತ್ರ; ಪತ್ರದಲ್ಲಿ ಇಲ್ಲ ಹೆಸರು
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರಿಗೆ ಪತ್ರ ಬರೆದಿದ್ದಾರೆ
TV9 Web
| Edited By: |

Updated on:Jun 09, 2022 | 11:55 AM

Share

ಬೆಂಗಳೂರು: ರಾಜ್ಯಸಭೆಯ 4 ಸ್ಥಾನಗಳಿಗೆ ನಾಳೆ (ಜೂನ್ 10) ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಜೆಡಿಎಸ್ (JDS) ದಳಪತಿಗಳು ಅಡ್ಡ ಮತದಾನದ ಆತಂಕದಲ್ಲಿದ್ದಾರೆ. ಕಾಂಗ್ರೆಸ್ (Congress) ನಾಯಕರು ಜೆಡಿಎಸ್ ನಮಗೆ ಬೆಂಬಲ ನೀಡಲಿ ಎಂದು ಹೇಳಿಕೆ ನೀಡುತ್ತಿದ್ದರೆ, ಜೆಡಿಎಸ್ನವರು ಹಲವು ಬಾರಿ ನಾವು ಬೆಂಬಲ ನಿಡಿದ್ದೇವೆ. ಈ ಬಾರಿ ಕಾಂಗ್ರೆಸ್ ಬೆಂಬಲ ಕೊಡಲಿ ಅಂತ ಹೇಳುತ್ತಿದ್ದಾರೆ. ಆದರೆ ಯಾರು ಯಾರಿಗೆ ಬೆಂಬಲ ಕೊಡುತ್ತಾರೆ ಅಂತ ಇನ್ನು ಸ್ಪಷ್ಟತೆ ಸಿಕ್ಕಿಲ್ಲ. ನಿನ್ನೆ ಮಾಧ್ಯಮದೊಂದಿಗೆ ಮಾತನಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿಯನ್ನು ವಾಪಸ್ ತೆಗೆಯುವ ಪ್ರಶ್ನೆಯೇ ಇಲ್ಲ ಅಂತ ಕಡ್ಡಿ ಮುರಿದ ಹಾಗೆ ಹೇಳಿದ್ದಾರೆ.

ಜೆಡಿಎಸ್ ನಾಯಕರ ನಡವಳಿಕೆ ಗಮನಿಸಿದರೆ ಜೆಡಿಎಸ್ ಈ ಬಾರಿ ಕಾಂಗ್ರೆಸ್​ನ ಬೆಂಬಲಿಸುವುದು ದೂರದ ಮಾತು. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಖಾನ್ನ ಬೆಂಬಲಿಸುವಂತೆ ಮುಸ್ಲಿಂ ಮುಖಂಡರು ಹೆಚ್​ಡಿ ದೇವೇಗೌಡರಿಗೆ ಪತ್ರ ಬರೆದಿದ್ದಾರೆ. ಆದರೆ ಪತ್ರ ಬರೆದವರು ಯಾರು ಎನ್ನುವ ಬಗ್ಗೆ ಪತ್ರದಲ್ಲಿ ಹೆಸರು ಉಲ್ಲೇಖವಾಗಿಲ್ಲ.

ಕುಮಾರಸ್ವಾಮಿ ಕಾಂಗ್ರೆಸ್​ಗೆ ಬೆಂಬಲಿಸುವ ಬಗ್ಗೆ ಎಲ್ಲೂ ಮಾತನಾಡುತ್ತಿಲ್ಲ. ಕಾಂಗ್ರೆಸ್​ ನಮಗೆ ಬೆಂಬಲ ಕೊಡಲಿ ಅಂತ ಹೇಳುತ್ತಿದ್ದಾರೆ. ಹೀಗಿದ್ದರೂ ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ನೀಡುವಂತೆ ಪತ್ರ ಬರೆದಿದ್ದಾರೆ. ಪತ್ರ ಬರೆದವರು ಯಾರು? ಪತ್ರ ಬರೆದು ಹೆಸರು ಉಲ್ಲೇಖಿಸದೇ ಇರಲು ಕಾರಣವೇನು? ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ನಿಮ್ ಜೊತಿ ಮಾತಾಡದೇ ಬ್ಯಾಡ, ನಾ ಹೇಳಾದೊಂದು ನೀವ್ ಬರ್ಯಾದು ಮತ್ತೊಂದು ಅಂದರು ಯತ್ನಾಳ್
Image
IND vs SA: ಮೊದಲ ಟಿ20 ಫೈಟ್​ಗೆ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಫೋಟೋ
Image
ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಸುಖಾಂತ್ಯ: ಹಿಜಾಬ್ ತೆಗೆದಿಟ್ಟು ತರಗತಿಗೆ ಹಾಜರಾದ 46 ವಿದ್ಯಾರ್ಥಿನಿಯರು
Image
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧಾರ; ಟಿವಿ9ಗೆ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಆದಿ ಮಾಹಿತಿ

ಇದನ್ನೂ ಓದಿ: ನಿಮ್ ಜೊತಿ ಮಾತಾಡದೇ ಬ್ಯಾಡ, ನಾ ಹೇಳಾದೊಂದು ನೀವ್ ಬರ್ಯಾದು ಮತ್ತೊಂದು ಅಂದರು ಯತ್ನಾಳ್

ಜೆಡಿಎಸ್​ನಿಂದ ಮಹತ್ವದ ನಿರ್ಧಾರ ಸಾಧ್ಯತೆ: ನಾಳೆ ಚುನಾವಣೆ ನಡೆಯುತ್ತಿರುವುದರಿಂದ ಜೆಡಿಎಸ್ ಶಾಸಕರು ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಹೋಟೆಲ್​ಗೆ ಶಿಫ್ಟ್ ಆಗುತ್ತಿದ್ದಾರೆ. ಶಾಸಕರ ಜೊತೆ ನಿನ್ನೆ ರಾತ್ರಿಯಿಂದ ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದಾರೆ. ಹೆಚ್​ಡಿಕೆ ಜೊತೆ ಹೋಟೆಲ್​ನಲ್ಲಿ 10ಕ್ಕೂ ಹೆಚ್ಚು ಶಾಸಕರು ವಾಸ್ತವ್ಯ ಹೀಡಿದ್ದಾರೆ. ಉಳಿದ ಶಾಸಕರು ಇಂದು ಮಧ್ಯಾಹ್ನದ ಒಳಗೆ ಬರುವಂತೆ ಸೂಚನೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಇಂದು ಸಂಜೆ ಹೋಟೆಲ್​ನಲ್ಲಿ ಜೆಡಿಎಸ್ ಶಾಸಕಾಂಗ ಸಭೆ ನಡೆಯುತ್ತದೆ. ಶಾಸಕಾಂಗ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಜೆಡಿಎಸ್ ಆಫರ್ ತಿರಸ್ಕರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಜೆಡಿಎಸ್ ಬೆಂಬಲಿಸಲಿ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಾತ್ಯತೀತ ತತ್ವದ ಮೇಲೆ ನಂಬಿಕೆ ಇದ್ದರೆ ನಮಗೆ ಬೆಂಬಲಿಸಲಿ. ಜೆಡಿಎಸ್​​ ಅಭ್ಯರ್ಥಿಯನ್ನು ಕಣದಿಂದ ನಿವೃತ್ತಿಗೊಳಿಸಬೇಕು. ಅಲ್ಪಸಂಖ್ಯಾತರ ಮೇಲೆ ಜೆಡಿಎಸ್​ಗೆ ಕಾಳಜಿ ಇದ್ದರೆ, ಕಾಂಗ್ರೆಸ್​ ಅಭ್ಯರ್ಥಿಗೆ ಜೆಡಿಎಸ್​​ ಬೆಂಬಲ ನೀಡಲಿ. ಈಗಲೂ ನನಗೆ ಜೆಡಿಎಸ್​​​ ಮೇಲೆ ನಂಬಿಕೆ ಇದೆ. ಕೊನೆ ಗಳಿಗೆಯಲ್ಲಿ ಜೆಡಿಎಸ್​ ಅಭ್ಯರ್ಥಿಯನ್ನು ವಾಪಸ್ ಪಡೀತಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:39 am, Thu, 9 June 22

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?