AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಐ ಯುಯು ಲಲಿತ್ ಜತೆ ವೇದಿಕೆ ಹಂಚಿಕೊಂಡ ಏಕನಾಥ್ ಶಿಂಧೆ; ಎಂವಿಎ ಮಿತ್ರ ಪಕ್ಷಗಳಿಂದ ಟೀಕೆ

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಹಾರಾಷ್ಟ್ರ ಸಿಎಂ ಶಿಂಧೆ ಅವರು, ನಮ್ಮ ರಾಜ್ಯದ ‘ಮಗ’ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿರುವುದು ರಾಜ್ಯಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದರು.

ಸಿಜೆಐ ಯುಯು ಲಲಿತ್ ಜತೆ ವೇದಿಕೆ ಹಂಚಿಕೊಂಡ ಏಕನಾಥ್ ಶಿಂಧೆ; ಎಂವಿಎ ಮಿತ್ರ ಪಕ್ಷಗಳಿಂದ ಟೀಕೆ
ಸಿಜೆಐ ಜತೆ ವೇದಿಕೆ ಹಂಚಿಕೊಂಡ ಶಿಂಧೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 11, 2022 | 6:13 PM

Share

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ನಡುವಿನ ಜಟಾಪಟಿ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ (Supreme Court) ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ಇದರ ನಡುವೆಯೇ ಶಿಂಧೆ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ (CJI UU Lalit) ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದನ್ನು ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳು ಟೀಕಿಸಿವೆ. ಶಿವಸೇನಾ ಮತ್ತು ಕಾಂಗ್ರೆಸ್ ಜೊತೆಗೆ ಎಂವಿಎಯ ಮಿತ್ರ ಪಕ್ಷವಾಗಿರುವ ಎನ್‌ಸಿಪಿಯ ರಾಜ್ಯ ಅಧ್ಯಕ್ಷ ಜಯಂತ್ ಪಾಟೀಲ್ ಅವರುಏಕನಾಥ್ ಶಿಂಧೆ ಸರ್ಕಾರದ ನ್ಯಾಯಸಮ್ಮತತೆಯನ್ನು ಪ್ರಶ್ನಿಸುವ ಗಂಭೀರ ಪ್ರಕರಣವನ್ನು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಶಿಂಧೆ ಅವರು ಭಾರತದ ಮುಖ್ಯ ನ್ಯಾಯಾಧೀಶರೊಂದಿಗೆ ವೇದಿಕೆ ಹಂಚಿಕೊಳ್ಳುವುದು ಸರಿಯಲ್ಲ. ಇದು ಪ್ರೋಟೋಕಾಲ್ ಪ್ರಕಾರ ಅಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಮುಂಬೈನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಭಾಗವಹಿಸಿದ್ದು ಸಿಜೆಐ ಲಲಿತ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಹಾರಾಷ್ಟ್ರ ಸಿಎಂ ಶಿಂಧೆ ಅವರು, ನಮ್ಮ ರಾಜ್ಯದ ‘ಮಗ’ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿರುವುದು ರಾಜ್ಯಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದರು.

ಶನಿವಾರದ ಕಾರ್ಯಕ್ರಮದ ಚಿತ್ರಗಳನ್ನು ಪೋಸ್ಟ್ ಮಾಡಿದ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್, “ಶಿಂಧೆ-ಫಡ್ನವಿಸ್ ಸರ್ಕಾರದ ನ್ಯಾಯಸಮ್ಮತತೆ ಮತ್ತು ಕಾನೂನುಬದ್ಧತೆಯನ್ನು ಗೌರವಾನ್ವಿತ ಸುಪ್ರೀಂಕೋರ್ಟ್ ಸ್ವತಃ ಪರಿಶೀಲಿಸಿದಾಗ ಪ್ರಸ್ತುತ ರಾಜ್ಯ ಸರ್ಕಾರ ಮಾತ್ರವಲ್ಲದೆ ಅದರ ಮುಖ್ಯಸ್ಥರನ್ನು ಸಹ ಅನರ್ಹಗೊಳಿಸಬಹುದು. ವೇದಿಕೆ ಅಸಮಂಜಸವಾಗಿ ಕಾಣುತ್ತದೆ. ಶಿವಸೇನಾ ವಕ್ತಾರ ಅರವಿಂದ್ ಸಾವಂತ್ ಅವರು ಈ ದಿನಗಳಲ್ಲಿ ನಿಯಮಗಳು ಮತ್ತು ಕಾನೂನಿನ ಪ್ರಕಾರ ಏನೂ ಆಗುತ್ತಿಲ್ಲ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ನಾವು ಹೇಳಲು ಇದೇ ಕಾರಣ ಎಂದು ಅವರು ಹೇಳಿದರು.

ಶಿಂಧೆ ಅವರು ಈ ವರ್ಷದ ಜೂನ್‌ನಲ್ಲಿ ಶಿವಸೇನಾ ನಾಯಕತ್ವದ ವಿರುದ್ಧ ದಂಗೆಯ ನೇತೃತ್ವ ವಹಿಸಿದ್ದರು, ಇದರ ಪರಿಣಾಮವಾಗಿ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರ ಪತನವಾಯಿತು.

ನಂತರ, ಜೂನ್ 30 ರಂದು ಶಿಂಧೆ ಅವರು ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.ಪಕ್ಷಾಂತರ, ವಿಲೀನ ಮತ್ತು ಅನರ್ಹತೆಗೆ ಸಂಬಂಧಿಸಿದ ಹಲವಾರು ಸಾಂವಿಧಾನಿಕ ಪ್ರಶ್ನೆಗಳನ್ನು ಎತ್ತಿಕೊಂಡು ಶಿವಸೇನಾ ಮತ್ತು ಸಿಎಂ ಏಕನಾಥ್ ಶಿಂಧೆ ಬಣಗಳು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ಐವರು ನ್ಯಾಯಾಧೀಶರ ಪೀಠದ ಮುಂದಿಟ್ಟಿದೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ