ನನ್ನ ಕುಟುಂಬದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಲ್ಲ; ಜೆಡಿಎಸ್ ಆಫರ್ ನಿರಾಕರಿಸಿದ ಶಾಸಕ ಜಿಟಿ ದೇವೇಗೌಡ
ನನ್ನ ಗಮನಕ್ಕೆ ತಾರದೆ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಂದು ಹೋಗಿದ್ದಾರೆ. ರಾಜಕೀಯ ಮಾಡುವ ಸಂದರ್ಭ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಅಂತ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.
ಮೈಸೂರು: ಶಾಸಕ ಜಿಟಿದೇವೇಗೌಡರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಜೆಡಿಎಸ್ ರಣತಂತ್ರ ರೂಪಿಸಿದ್ದು, ಜಿಟಿಡಿ ಪತ್ನಿ ಲಲಿತಾ ದೇವೇಗೌಡ ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಆದರೆ ಜಿಟಿ ದೇವೇಗೌಡರು ಜೆಡಿಎಸ್ ಆಫರ್ನ ನಿರಾಕರಿಸಿದ್ದಾರೆ. ನನ್ನ ಕುಟುಂಬದಿಂದ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಅಂತ ಸ್ಪಷ್ಟಪಡಿಸಿದ ಅವರು, ಜೆಡಿಎಸ್ನವರು ನನ್ನನ್ನು ಬಿಟ್ಟು ತುಂಬಾ ವರ್ಷಗಳಾಗಿದೆ. ನನ್ನನ್ನು ಬಿಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಧ್ಯಕ್ಷರ ನೇಮಕ ಮಾಡಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ ಎಂದು ಜಿಟಿಡಿ ತಿಳಿಸಿದರು.
ನನ್ನ ಗಮನಕ್ಕೆ ತಾರದೆ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಂದು ಹೋಗಿದ್ದಾರೆ. ರಾಜಕೀಯ ಮಾಡುವ ಸಂದರ್ಭ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಅಂತ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.
ಎಂಎಲ್ಸಿ ಚುನಾವಣೆಯನ್ನು ಜಿಟಿಡಿ ನೇತೃತ್ವದಲ್ಲೇ ನಡೆಸುತ್ತೇವೆ. ಅವರ ಕುಟುಂಬದಿಂದಲೇ ಅಭ್ಯರ್ಥಿಯಾಗಬೇಕು ಅನ್ನೋದು ನಮ್ಮ ಬಯಕೆ. ಅವರು ನಮ್ಮ ಪಕ್ಷದ ನಾಯಕರು. ಇಡೀ ಕುಟುಂಬ ಸಾರ್ವಜನಿಕರ ಸೇವೆ ಮಾಡುತ್ತಿದೆ. ಅಂತಹ ಕುಟುಂಬದಿಂದ ಅಭ್ಯರ್ಥಿಯಾದರೆ ತಪ್ಪೇನಿಲ್ಲ. ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಂಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರು ಇನ್ನೂ ನಮ್ಮ ಪಕ್ಷದಲ್ಲೇ ಇದ್ದಾರೆ ಅಂತ ಶಾಸಕ ಸಾ.ರಾ.ಮಹೇಶ್ ಇಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಜಿಟಿ ದೇವೇಗೌಡ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ತಿಳಿಸಿದ್ದಾರೆ.
ಇದನ್ನೂ ಓದಿ
ಅಪ್ಪು ಫೋಟೋ ಮುಂದೆ ಶಾಂಪೇನ್ ವಿವಾದ: ‘ಇದು ಇಷ್ಟು ದೊಡ್ಡದು ಆಗುತ್ತೆ ಅಂತ ಗೊತ್ತಿರಲಿಲ್ಲ’: ಪ್ರೇಮ್ ಪ್ರತಿಕ್ರಿಯೆ
ಹಳೆ ಛಾಪಾಕಾಗದ ಮಾರಾಟ ಮಾಡ್ತಿದ್ದವರ ಮನೆ ಮೇಲೆ ಪೊಲೀಸರ ದಾಳಿ; ಸಾಕಷ್ಟು ಅಪರಾಧ ಕೃತ್ಯ ಬೆಳಕಿಗೆ
Published On - 2:50 pm, Sat, 13 November 21