ಮೈಸೂರು ಭಾಗದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್! ಕಮಲ ತೊರೆದು ಕೈ ಹಿಡಿಯಲಿರುವ ಯುವ ಮೋರ್ಚಾ ಘಟಕದ ಉಪಾಧ್ಯಕ್ಷ
Lok Sabha Election 2024: ಮೈಸೂರು ಭಾಗದಲ್ಲಿ ಕಾಂಗ್ರೆಸ್ ಗಾಳಕ್ಕೆ ಬಿಎಸ್ ಯಡಿಯೂರಪ್ಪ ಆಪ್ತ, ಕೆ.ಆರ್.ಕ್ಷೇತ್ರದ ಬಿಜೆಪಿ ಮುಖಂಡ ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಮತ್ತು ಕೆ.ಆರ್.ಕ್ಷೇತ್ರದ ಜೆಡಿಎಸ್ ಮುಖಂಡ, ಪರಾಜಿತ ಅಭ್ಯರ್ಥಿ ಕೆ.ವಿ.ಮಲ್ಲೇಶ್, ಮಾಜಿ ಮೇಯರ್ ಭೈರಪ್ಪ ಬಿದಿದ್ದು, ಈಗಾಗಲೆ ಕಾಂಗ್ರೆಸ್ ಸೇರಿದ್ದಾರೆ. ಇದೀಗ ಕಾಂಗ್ರೆಸ್ ಮತ್ತೊಬ್ಬ ಬಿಜೆಪಿ ಯುವ ಮುಖಂಡನಿಗೆ ಬಲೆ ಬೀಸಿದೆ.
ಮೈಸೂರು, ಮಾರ್ಚ್ 29: ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ತವರು ಜಿಲ್ಲೆ. ತವರು ಜಿಲ್ಲೆಯಲ್ಲೆಯೇ ಮುಖ್ಯಮಂತ್ರಿಗಳಿಗೆ ಸವಾಲು ಎದುರಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು (Mysore-Kodagu) ಕ್ಷೇತ್ರದಿಂದ ಬಿಜೆಪಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರನ್ನು ಕಣಕ್ಕಿಳಿಸಿದ್ದು, ಸಿದ್ದರಾಮಯ್ಯ ಅವರಿಗೆ ಬಿಸಿ ತುಪ್ಪವಾಗಿದೆ. ಮೈಸೂರು ಪ್ರಾಂತ್ಯದಲ್ಲಿ ಒಡೆಯರ್ ಅವರ ಪರವಾದ ಅಲೆಯಿದ್ದು, ಜನರು ಈ ಬಾರಿ ರಾಜ ವಂಶಸ್ಥರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಇದರಿಂದ ಸಿದ್ದರಾಮಯ್ಯ ಅವರಿಗೆ ತಮ್ಮ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿಯನ್ನು ಗೆಲ್ಲಿಸುವುದು ಸಾವಾಲಾಗಿದೆ. ಹೀಗಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿನ ಬಿಜೆಪಿ (BJP) ಮತ್ತು ಜೆಡಿಎಸ್ ಪ್ರಬಲ ಮುಖಂಡರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ.
ಈ ಕಾಂಗ್ರೆಸ್ ಗಾಳಕ್ಕೆ ಬಿಎಸ್ ಯಡಿಯೂರಪ್ಪ ಆಪ್ತ, ಕೆ.ಆರ್.ಕ್ಷೇತ್ರದ ಬಿಜೆಪಿ ಮುಖಂಡ ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಮತ್ತು ಕೆ.ಆರ್.ಕ್ಷೇತ್ರದ ಜೆಡಿಎಸ್ ಮುಖಂಡ, ಪರಾಜಿತ ಅಭ್ಯರ್ಥಿ ಕೆ.ವಿ.ಮಲ್ಲೇಶ್, ಮಾಜಿ ಮೇಯರ್ ಭೈರಪ್ಪ ಬಿದಿದ್ದು, ಈಗಾಗಲೆ ಕಾಂಗ್ರೆಸ್ ಸೇರಿದ್ದಾರೆ. ಇದೀಗ ಕಾಂಗ್ರೆಸ್ ಮತ್ತೊಬ್ಬ ಬಿಜೆಪಿ ಯುವ ಮುಖಂಡನಿಗೆ ಬಲೆ ಬೀಸಿದೆ.
ಇದನ್ನೂ ಓದಿ: ರಾಜಕೀಯ ವೈರತ್ವ ಮರೆತು ಬಿಜೆಪಿ ಎಂಪಿ ಶ್ರೀನಿವಾಸ್ ಪ್ರಸಾದ್ ಮನೆಗೆ ಸಚಿವ ಮಹದೇವಪ್ಪ ಭೇಟಿ
ಹೌದು, ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್, ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಮೂರ್ತಿ ನಿನ್ನೆ (ಮಾ.28) ರಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಮೂಡಿತ್ತು.
ಇದೀಗ ಈ ಭೇಟಿ ಹಿಂದಿನ ಕಾರಣ ಬಹಿರಂಗವಾಗಿದ್ದು, ಶ್ರೀನಿವಾಸ್ ಪ್ರಸಾದ್ ಅಳಿಯ, ರಾಜ್ಯ ಬಿಜೆಪಿ ಯುವ ಮೋರ್ಚಾ ಘಟಕದ ಉಪಾಧ್ಯಕ್ಷ ಧೀರಜ್ ಪ್ರಸಾದ್ಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದಾರೆ. ವಾರದೊಳಗೆ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಮುನಿಸು ಮರೆತು ಒಂದಾದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ
ಸಿದ್ದರಾಮಯ್ಯನವರ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ತೊರೆದು ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರಿರುವುದು ಇತಿಹಾಸ. ಇದರಿಂದ ಸಿದ್ದರಾಮಯ್ಯ ಆದಿಯಾಗಿ, ಕಾಂಗ್ರೆಸ್ ಬಹುತೇಕ ನಾಯಕರು ಶ್ರೀನಿವಾಸ್ ಪ್ರಸಾದ್ ಅವರ ಮೇಲೆ ಮುನಿಸಿಕೊಂಡಿದ್ದರು. ಶ್ರೀನಿವಾಸ್ ಪ್ರಸಾದ್ ಹಾಗೂ ಸಿಎಂ ಸಿದ್ದರಾಮಯ್ಯ ಏಳು ವರ್ಷಗಳಿಂದ ಮಾತುಬಿಟ್ಟಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಶ್ರೀನಿವಾಸ್ ಪ್ರಸಾದ್ ಜೊತೆ ಮಾತನಾಡಿದ್ದಾರೆ.
ಇದೀಗ ಶ್ರೀನಿವಾಸ್ ಪ್ರಸಾದ್ ಮತ್ತು ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿದ್ದಾರೆ. “ಕುಟುಂಬದವರೆಲ್ಲ ಕಾಂಗ್ರೆಸ್ ಸೇರ್ಪಡೆಯಾಗಿ, ಕುಟುಂಬದವರು ಪಕ್ಷಕ್ಕೆ ಸೇರ್ಪಡೆಯಾದರೆ ಸ್ಥಾನಮಾನ ನೀಡುತ್ತೇವೆ. ಯಾವುದೆ ಅಳುಕಿಲ್ಲದೆ ಪಕ್ಷ ಸೇರ್ಪಡೆಯಾಗಿ ನಿಮ್ಮ ಜೊತೆ ನಾವಿದ್ದೇವೆ. ನಿಮ್ಮ ರಾಜಕೀಯ ಬದುಕು ಸುಖವಾಗಿರಲಿ” ಎಂದು ಶ್ರೀನಿವಾಸ್ ಪ್ರಸಾದ್ಗೆ ದೂರವಾಣಿ ಮೂಲಕ ಸಿಎಂ ಹಾರೈಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:32 pm, Fri, 29 March 24