AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರದ ಪ್ರಕಾರ ಸ್ವಲ್ಪ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ

Prathap simha Name Change: ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಅದರಂತೆ ಇದೀಗ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಸಹ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ.

ಸಂಖ್ಯಾಶಾಸ್ತ್ರದ ಪ್ರಕಾರ ಸ್ವಲ್ಪ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ
ಪ್ರತಾಪ ಸಿಂಹ
TV9 Web
| Edited By: |

Updated on: Nov 26, 2023 | 10:01 AM

Share

ಮೈಸೂರು, (ನವೆಂಬರ್ 26): ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಸಂಖ್ಯಾಶಾಸ್ತ್ರ ಪ್ರಕಾರ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಸಹ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yeddyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಾಯಿಸಿಕೊಂಡಿದ್ದರು.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಆರೋಪ; ಠಾಣೆಗೆ ನುಗ್ಗುವುದಾಗಿ ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಪ್ರತಾಪ್​ ಸಿಂಹ

ಹಾಗೇ ಎಂಎಲ್‌ಸಿ ಹೆಚ್​ ವಿಶ್ವನಾಥ್ ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಎಂದು ಸೇರಿಸಿಕೊಂಡಿದ್ದರು. ಅಲ್ಲದೇ ತಮಿಳುನಾಡು ಮಾಜಿ ಸಿಎಂ ಮುಖ್ಯಮಂತ್ರಿ ಜೆ. ಜಯಲಲಿತಾ ಸೇರಿದಂತೆ ಕೆಲವು ರಾಜಕಾರಣಿಗಳು ಸಂಖ್ಯಾಶಾಸ್ತ್ರ ಮತ್ತು ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬದಲಿಸಿಕೊಂಡ ಉದಾಹರಣೆ ಇದೆ.

ಇದೀಗ ಸಂಸದ ಪ್ರತಾಪ್ ಸಿಂಹ ಕೂಡ ಸಂಖ್ಯಾಶಾಸ್ತ್ರದ ಪ್ರಕಾರ ತಮ್ಮ ಇಂಗ್ಲೀಷ್ ಹೆಸರಿನಲ್ಲಿ ಕೊಂಚ​ ಬದಲಾವಣೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ