ಬಿಜೆಪಿ ಜತೆ ಮೈತ್ರಿ ಎಫೆಕ್ಟ್: ದೇವೇಗೌಡ್ರು ಭರವಸೆ ಕೊಟ್ಟರೂ ಜೆಡಿಎಸ್​ನಲ್ಲಿ ಮುಂದುವರೆದ ರಾಜೀನಾಮೆ ಪರ್ವ

| Updated By: ರಮೇಶ್ ಬಿ. ಜವಳಗೇರಾ

Updated on: Sep 28, 2023 | 7:35 AM

ಬಿಜೆಪಿ-ಜೆಡಿಎಸ್ ಮೈತ್ರಿ ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್ ಶಾಸಕರಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಜೆಡಿಎಸ್​ ವರಿಷ್ಠರ ನಿರ್ಧಾರಕ್ಕೆ ಪಕ್ಷದ ಮುಸ್ಲಿಂ ನಾಯಕರು ಸಿಡಿದೆದ್ದಿದ್ದು, ಒಬ್ಬೊಬ್ಬರೇ ಜೆಡಿಎಸ್​ಗೆ ಗುಡ್​ಬೈ ಹೇಳುತ್ತಿದ್ದಾರೆ. ಮೈತ್ರಿಯಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಧಕ್ಕೆ ಆಗಲ್ಲ ಎಂದು ದೇವೇಗೌಡ್ರು ಹೇಳಿದ್ದರು ಸಹ ರಾಜೀನಾಮೆ ಪರ್ವ ಮುಂದುವರೆದಿದೆ.

ಬಿಜೆಪಿ ಜತೆ ಮೈತ್ರಿ ಎಫೆಕ್ಟ್: ದೇವೇಗೌಡ್ರು ಭರವಸೆ ಕೊಟ್ಟರೂ ಜೆಡಿಎಸ್​ನಲ್ಲಿ ಮುಂದುವರೆದ ರಾಜೀನಾಮೆ ಪರ್ವ
ಬಿಜೆಪಿ-ಜೆಡಿಎಸ್
Follow us on

ಮೈಸೂರು, (ಸೆಪ್ಟೆಂಬರ್.28): ಬಿಜೆಪಿ ಜೊತೆ ಮೈತ್ರಿ(JDS bjp alliance) ಮಾಡಿಕೊಂಡಿದ್ದರಿಂದ ಜೆಡಿಎಸ್​​ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಮುಸ್ಲಿಂ(Muslim) ಸೇರಿದಂತೆ ಇತರೆ ನಾಯಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್(Congress) ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Devegowda) ನಿನ್ನೆ(ಸೆ.27) ಸುದ್ದಿಗೋಷ್ಠಿ ನಡೆಸಿ ಬಿಜೆಪಿಯೊಂದಿಗಿನ ಮೈತ್ರಿಯಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಧಕ್ಕೆ ಆಗಲು ಬಿಡುವುದಿಲ್ಲ ಎಂದು ಪಕ್ಷದ ಮುಸ್ಲಿಂ ನಾಯಕರಿಗೆ ಸಂದೇಶ ನೀಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಮುಸ್ಲಿಂ ನಾಯಕರು ಜೆಡಿಎಸ್​ಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಮೈಸೂರು ನಗರದ ಎನ್​ಆರ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಶಾಹಿದ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡು ಸಾಮೂಹಿಕವಾಗಿ ಜೆಡಿಎಸ್​ಗೆ ಗುಡ್​ಬೈ ಹೇಳಿದ್ದು, ರಾಜೀನಾಮೆ ಪತ್ರವನ್ನು ಅಂಚೆ ಮೂಲಕ ರಾಜ್ಯಾಧ್ಯಕ್ಷರಿಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್​​-ಬಿಜೆಪಿ ಮೈತ್ರಿ: ವರಿಷ್ಠರ ನಿರ್ಧಾರಕ್ಕೆ ಬೇಸರ, ಅಭಿಪ್ರಾಯ ತಿಳಿಸಲು ಮುಂದಾದ ಶಾಸಕರು

ಜಾತ್ಯಾತಿತ ಪಕ್ಷ ಎಂದು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದೆವು. ಆದರೆ ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿರುವುದು ಸರಿಯಲ್ಲ. ಹಿಂದೆ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡುವ ಕೆಲಸಗಳಾಗಿವೆ. ಕುಮಾರಸ್ವಾಮಿ ಹಾಗೂ ನಿಖಿಲ್‌ರವರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ಅವರನ್ನು ಪಕ್ಷದಿಂದ ಉಚ್ಟಾಟನೆ ಮಾಡಿ ಎಂದು ಸಿಎಂ ಇಬ್ರಾಹಿಂ ಅವರಿಗೆ ಮನವಿ ಮಾಡಿದ್ದೆವು. ಅದರೆ ಅವರು ನಮಗೆ ಸ್ಪಂದಿಸಿಲ್ಲ. ಆದ್ದರಿಂದ ಸಾಮೂಹಿಕ ರಾಜೀನಾಮೆ ನೀಡಿದ್ದೇವೆ ಎಂದು ಮುಖಂಡರು ತಿಳಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಶಾಹಿದ್ ಆ್ಯಂಡ ಟೀಮ್, ತನ್ವೀರ್ ಸೇಠ್ ವರ್ಸರ್ಸ್​ ಸಿದ್ದರಾಮಯ್ಯ ವಿವಾದದಲ್ಲಿ ಕಾಂಗ್ರೆಸ್​​ನಿಂದ ಉಚ್ಛಾಟನೆಗೊಂಡಿದ್ದರು. ಬಳಿಕ ಜೆಡಿಎಸ್​ ಸೇರಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ