ಬೆಂಗಳೂರು, ಸೆಪ್ಟೆಂಬರ್ 13: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ (Nagamangala Communal Violence) ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.
ನಾಗಮಂಗಲದ ಕೋಮುಗಲಭೆ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು, 10 ಪ್ರಶ್ನೆಗಳನ್ನು ಕೇಳಿದ್ದಾರೆ. “ಹಿಂದುಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವ ನಿಯೋಜಿತವಾಗಿ ಈ ದುಷ್ಕೃತ್ಯ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದೊಂದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ತಿಪ್ಪೆ ಸಾರಿಸುವ ಮಾತಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನ ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ನಿರ್ಧಾರ ಮಾಡಿದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ, 10 ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಎಲ್ಲಿಂದ ಬಂದವು; ಕುಮಾರಸ್ವಾಮಿ ಪ್ರಶ್ನೆ
ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ.
ಹಿಂದುಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ…
— R. Ashoka (@RAshokaBJP) September 13, 2024
ಈ ರೀತಿ ತಪ್ಪು ಎಫ್ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು FIRನಲ್ಲಿ ಕೇವಲ ಹಿಂದೂಗಳನ್ನ ಟಾರ್ಗೆಟ್ ಮಾಡುವ ಈ ಹುನ್ನಾರ ಕೈಬಿಡದಿದ್ದರೆ ಬಿಜೆಪಿ ನಾಗಮಂಗಲದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:55 pm, Fri, 13 September 24