ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್

Nalin Kumar Kateel: ಮೈಸೂರಿನಲ್ಲಿ ದೇಗುಲ ತೆರವು ವಿಚಾರವಾಗಿ ಸಿದ್ದರಮಯ್ಯ ಟೀಕೆ ವ್ಯಕ್ತಪಡಿಸಿದ್ದರು. ಇದೀಗ ಕಾಂಗ್ರೆಸ್ ಹಿರಿಯ ನಾಯಕನ ವಿರುದ್ಧ ನಳಿನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)
Follow us
| Updated By: ganapathi bhat

Updated on:Sep 18, 2021 | 2:43 PM

ದಾವಣಗೆರೆ: ಸಿದ್ದರಾಮಯ್ಯರಿಂದ ಹಿಂದೂ ಧರ್ಮದ ಪಾಠ ಕಲಿಯಬೇಕಿಲ್ಲ. ಅವರು ಹಿಂದೂ ದೇಗುಲ ಒಡೆದ ಟಿಪ್ಪು ಸುಲ್ತಾನನ ಜಯಂತಿ ಆಚರಿಸಿದ್ದರು. ಟಿಪ್ಪು ಜಯಂತಿ ಮಾಡಿ ಸಿದ್ದರಾಮಯ್ಯ ಸಂತೋಷಪಟ್ಟಿದ್ದರು. ಜತೆಗೆ ಲಿಂಗಾಯತ ಸಮುದಾಯ ಒಡೆಯಲು ಹೊರಟಿದ್ದರು. ಅಂಥ ನಾಸ್ತಿಕರಿಂದ ನಾವು ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ದೇಗುಲ ತೆರವು ವಿಚಾರವಾಗಿ ಸಿದ್ದರಮಯ್ಯ ಟೀಕೆ ವ್ಯಕ್ತಪಡಿಸಿದ್ದರು. ಇದೀಗ ಕಾಂಗ್ರೆಸ್ ಹಿರಿಯ ನಾಯಕನ ವಿರುದ್ಧ ನಳಿನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ದೇಗುಲ ತೆರವು ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚಿಸ್ತೇವೆ. ಪುರಾತನ ದೇಗುಲ ತೆರವು ಆದ ಜಾಗದಲ್ಲಿ ಪುನರ್ ನಿರ್ಮಾಣ ಮಾಡುತ್ತೇವೆ. ಕಾನೂನು ವ್ಯಾಪ್ತಿಯಲ್ಲಿ ದೇಗುಲ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿರ್ಧಾರ ಮಾಡುತ್ತಾರೆ. ರೈತರ ಬೆಳೆಗೆ ಸೂಕ್ತ ಬೆಲೆ ಸಿಗುವ ಬಗ್ಗೆಯೂ ತೀರ್ಮಾನಿಸ್ತಾರೆ. ಬೆಲೆ ಏರಿಕೆ ಈಗ ಮಾತ್ರ ಇಲ್ಲ, ಹಿಂದೆಯೂ ಇತ್ತು ಎಂದು ಕಟೀಲ್ ಸಮಜಾಯಿಷಿ ನೀಡಿದ್ದಾರೆ.

ಈ ಮೊದಲು, ರಾಜ್ಯದಲ್ಲಿ ದೇವಾಲಯ ತೆರವು ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಪ್ರೀತಿ, ಕಾಳಜಿ ಇದ್ದಿದ್ದರೆ ವಿಗ್ರಹ ಕಳ್ಳ ಟಿಪ್ಪು ಸುಲ್ತಾನ್ ಜಯಂತಿ ಮಾಡುತ್ತಿರಲಿಲ್ಲ. ಲಿಂಗಾಯತರನ್ನು ಒಡೆಯುವ ಕೆಲಸ ಮಾಡುತ್ತಿರಲಿಲ್ಲ. ಇದರಲ್ಲಿ ಬ್ಯುಸಿ ಆಗಿದ್ದರಿಂದ ನಿಮಗೆ ಅರ್ಥ ಆಗಿಲ್ಲ. ಈಗ ಸುಮ್ಮನೆ ಪ್ರೀತಿ ವಿಶ್ವಾಸವಿದೆ ಎಂದು ಬಿಂಬಿಸಿಕೊಳ್ಳಬೇಡಿ ಎಂದು ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಇಂದು ಅದೇ ಧಾಟಿಯಲ್ಲಿ ನಳಿನ್ ಕುಮಾರ್ ಸಿದ್ದರಾಮಯ್ಯರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ; ಕಲಾಪದಲ್ಲಿ ಕಲಹ ಕೋಲಾಹಲ

ಇದನ್ನೂ ಓದಿ: ಪೆಟ್ರೋಲ್ ಡೀಸೆಲ್​ಗಳನ್ನು ಜಿಎಸ್​ಟಿ ಅಡಿ ತರಬಾರದು: ಸಿದ್ದರಾಮಯ್ಯ ಆಗ್ರಹ

Published On - 2:33 pm, Sat, 18 September 21

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್