ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿಯಿಂದ ಮಹತ್ವದ ನಿರ್ಧಾರ: ಸೈಲೆಂಟ್ ಸುನೀಲನ ರಾಜಕೀಯ ಕನಸಿಗೆ ಆರಂಭದಲ್ಲೇ ವಿಘ್ನ…!

ಸೈಲೆಂಟ್ ಸುನೀಲ ಬಿಜೆಪಿ ಸೇರ್ಪಡೆ ವಿಚಾರವಾಗಿ ನಳೀನ್ ಕುಮಾರ್ ಕಟೀಲ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಎಚ್ಚರಿಕೆ ಹೆಜ್ಜೆ ಇಟ್ಟಿದ್ದಾರೆ. ಈ ಮೂಲಕ ಬಿಜೆಪಿ ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡಿದೆ.

ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿಯಿಂದ ಮಹತ್ವದ ನಿರ್ಧಾರ: ಸೈಲೆಂಟ್ ಸುನೀಲನ ರಾಜಕೀಯ ಕನಸಿಗೆ ಆರಂಭದಲ್ಲೇ ವಿಘ್ನ...!
silent sunila
Follow us
| Updated By: ರಮೇಶ್ ಬಿ. ಜವಳಗೇರಾ

Updated on: Nov 29, 2022 | 8:36 PM

ಬೆಂಗಳೂರು: ಬಿಜೆಪಿ ನಾಯಕರ ಜೊತೆ ಕುಳಿತು ಫೋಸ್ ಕೊಟ್ಟಿದ್ದೇ ತಡ, ಸೈಲೆಂಟ್ ಸುನೀಲ್​ನ ರಾಜಕೀಯ ಪ್ರವೇಶ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ​ಕದನದ ಕಿಚ್ಚಿಗೆ ಸೈಲೆಂಡ್ ಸುನೀಲನ (Silent Sunila) ವಿಷಯಗಳು ತುಪ್ಪದಂತೆ ಬೀಳ್ತಿದ್ದು, ನಾಯಕರ ಬೀದಿ ಕಾಳಗ ತಾರಕಕ್ಕೇರುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿ (BJP) ಎಚ್ಚೆತ್ತುಕೊಂಡಿದ್ದು, ಸೈಲೆಂಡ್ ಸುನೀಲ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ.

ಹೌದು…ರೌಡಿ ಶೀಟರ್ ಸೈಲೆಂಡ್ ಸುನೀಲ ಬಿಜೆಪಿ ಸೇರ್ಪಡೆಗೆ ಸಿದ್ಧವಾಗ್ತಿದ್ದರಿಂತೆಯೇ ಕಾಂಗ್ರೆಸ್​ಗೆ ಪ್ರಬಲ ಅಸ್ತ್ರವಾಗಿ ಸಿಕ್ಕಿದೆ. ಚುನಾವಣೆ ಸಂದರ್ಭದಲ್ಲಿ ಇದೇ ಸಿಕ್ಕಿದ್ದೇ ಅವಕಾಶ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಮುಗಿಬಿದ್ದಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಸೈಲೆಂಟ್ ಸುನೀಲನನ್ನು ಪಕ್ಷ ಸೇರ್ಪಡೆಗೆ ಬ್ರೇಕ್ ಹಾಕಿದೆ. ಈ ಬಗ್ಗೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸೈಲೆಂಟ್​ ಆಗಿ ಬಿಜೆಪಿ ಸೇರಲು ಮುಂದಾಗಿದ್ದ ಸೈಲೆಂಟ್ ಸುನೀಲನ ರಾಜಕೀಯ ವಿಘ್ನ ಎದುರಾಗಿದೆ.

ಇದನ್ನೂ ಓಡಿ: ಅಸ್ತ್ರವಾದ ಸೈಲೆಂಟ್ ಸುನೀಲ: ಬಿಜೆಪಿಯಲ್ಲಿ ‘ರೌಡಿ ಮೋರ್ಚಾ’ ಘಟಕ ತೆರೆಯುವ ಲಕ್ಷಣವಿದೆ ಎಂದ ಕಾಂಗ್ರೆಸ್

ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ

ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ನಳೀನ್ ಕುಮಾರ್ ಕಟೀಲ್, ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ. ಸೈಲೆಂಟ್ ಸುನೀಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನೀಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ತಿಳಿಸಿದರು.

ಇದನ್ನೂ ಓದಿ:  ರಾಜಕೀಯ ಪ್ರವೇಶಕ್ಕೆ ಸಜ್ಜಾದ ಕುಖ್ಯಾತ ರೌಡಿ ಸೈಲೆಂಟ್ ಸುನೀಲ: ಪಾತಕ ಲೋಕದಲ್ಲಿ ಹೀಗಿದೆ ಇವನ ಹೆಜ್ಜೆಗುರುತು

ಸಿಎಂ ಬೊಮ್ಮಾಯಿ ಹೇಳಿದ್ದೇನು?

ಇನ್ನೂ ದೆಹಲಿ ಪ್ರವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಲೆಂಡ್ ಸುನೀಲ ವಿಚಾರದ ಬಗ್ಗೆ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್ ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ