ಸಿಎಂ ಕಚೇರಿಯಿಂದ ಒಂದೇ ಹುದ್ದೆಗೆ ನಾಲ್ವರಿಗೆ ಶಿಫಾರಸು: ಕಾಂಗ್ರೆಸ್ ವಿರುದ್ಧ ನಳಿನ್ ಕುಮಾರ್ ಕಟೀಲು​ ವಾಗ್ದಾಳಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 28, 2023 | 3:27 PM

ಸಿಎಂ ಕಚೇರಿಯಿಂದ ಒಂದೇ ಹುದ್ದೆಗೆ ನಾಲ್ವರಿಗೆ ಶಿಫಾರಸು ವಿಚಾರವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ವಾಗ್ದಾಳಿ ಮಾಡಿದ್ದು, ಕಾಂಗ್ರೆಸ್​ನವರು ನಮ್ಮ ಮೇಲೆ 40% ಕಮಿಷನ್ ಆರೋಪ ಮಾಡಿದ್ದರು. ಈಗ ಕಾಂಗ್ರೆಸ್​​ನವರದ್ದು 60% ಕಮಿಷನ್ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಸಿಎಂ ಕಚೇರಿಯಿಂದ ಒಂದೇ ಹುದ್ದೆಗೆ ನಾಲ್ವರಿಗೆ ಶಿಫಾರಸು: ಕಾಂಗ್ರೆಸ್ ವಿರುದ್ಧ ನಳಿನ್ ಕುಮಾರ್ ಕಟೀಲು​ ವಾಗ್ದಾಳಿ
ನಳಿನ್ ಕುಮಾರ್ ಕಟೀಲು
Follow us on

ಬೆಂಗಳೂರು: ಈಗಾಗಲೇ ಕಾಂಗ್ರೆಸ್​ ಸರ್ಕಾರದ ಅಂಗಡಿ ವ್ಯಾಪಾರ ಶುರುವಾಗಿದೆ. ಕಾಂಗ್ರೆಸ್​ನವರು ನಮ್ಮ ಮೇಲೆ 40% ಕಮಿಷನ್ ಆರೋಪ ಮಾಡಿದ್ದರು. ಈಗ ಕಾಂಗ್ರೆಸ್​​ನವರದ್ದು 60% ಕಮಿಷನ್ ಸರ್ಕಾರ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು (Nalin Kumar Kateel) ವಾಗ್ದಾಳಿ ಮಾಡಿದ್ದಾರೆ. ಸಿಎಂ ಕಚೇರಿಯಿಂದ ಒಂದೇ ಹುದ್ದೆಗೆ ನಾಲ್ವರಿಗೆ ಶಿಫಾರಸು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆ ಹಾಗೂ ವರ್ಗಾವಣೆ ವಿಚಾರದಲ್ಲಿ ಕಮಿಷನ್​ ಶುರುವಾಗಿದೆ. ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಭ್ರಷ್ಟಾಚಾರ ಆರೋಪಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ

ಎಸ್​ಐಟಿಯಿಂದ ಬಿಜೆಪಿ ಅವಧಿ ಹಗರಣಗಳ ತನಿಖೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್​ ನಮ್ಮ ಸರ್ಕಾರದ ಬಗ್ಗೆ ಭ್ರಷ್ಟಾಚಾರ ಆರೋಪ ಮಾಡಿದೆ. ಆ ಕುರಿತು ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ. ಒಂದು ಆರೋಪದ ಬಗ್ಗೆಯೂ ಲೋಕಾಯುಕ್ತಕ್ಕೆ ದೂರು ನೀಡಿಲ್ಲ. ನಮ್ಮ ಅವಧಿಯಲ್ಲಿ ಕಾಂಗ್ರೆಸ್​​​​ ವಿರುದ್ಧ ಲೋಕಾ ತನಿಖೆಗೆ ವಹಿಸಿದ್ದೆವು ಎಂದರು.

ಇದನ್ನೂ ಓದಿ: ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?

ನೈತಿಕ ಹೊಣೆಹೊತ್ತು ಕಟೀಲು ರಾಜೀನಾಮೆ ಕೊಡಲಿ: ಎಂ.ಪಿ.ರೇಣುಕಾಚಾರ್ಯ

ಕಟೀಲು ಅಧ್ಯಕ್ಷತೆಯಲ್ಲಿ ಬಿಜೆಪಿ ಹೀ‌ನಾಯವಾಗಿ ಸೋಲು ಕಂಡಿದೆ. ನೈತಿಕ ಹೊಣೆಹೊತ್ತು ಅಧ್ಯಕ್ಷ ಸ್ಥಾನಕ್ಕೆ ಕಟೀಲು ರಾಜೀನಾಮೆ ಕೊಡಲಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಪಕ್ಷ, ನಾಯಕರ ವಿರುದ್ಧ ಮಾತಾಡಿದವರ ವಿರುದ್ಧ ಕ್ರಮ ಎಂದಿದ್ದೀರಿ. ಆದರೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ನಮ್ಮವರೇ ವಾಗ್ದಾಳಿ ನಡೆಸಿದರು ಎಂದು ಹೇಳಿದರು.

ಯತ್ನಾಳ್​ ವಿರುದ್ಧ M.P.ರೇಣುಕಾಚಾರ್ಯ ವಾಗ್ದಾಳಿ

ಬಿಎಸ್​ ಯಡಿಯೂರಪ್ಪ ವಿರುದ್ಧ ಮಾತನಾಡಿದವರ ವಿರುದ್ಧ ಕ್ರಮ ಕೈಗೊಂಡಿದ್ದೀರಾ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಪರ ಮಾತನಾಡಿದರೆ ಪಕ್ಷ ವಿರೋಧಿ ಅಲ್ಲವಾ ಎಂದು ಪರೋಕ್ಷವಾಗಿ ಯತ್ನಾಳ್​ ವಿರುದ್ಧ M.P.ರೇಣುಕಾಚಾರ್ಯ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: Anna Bhagya Scheme; ಐದು ಕೆಜಿ ಅಕ್ಕಿ ಬದಲಿಗೆ ಹಣ; ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ

ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಆತ್ಮಾವಲೋಕನ ಅಗತ್ಯವಿದೆ. ಮೊದಲು ಕಟೀಲು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.