AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಬಾರದು; ಬಿಜೆಪಿಯಲ್ಲಿ ಶಿಸ್ತು ಉಲ್ಲಂಘನೆ ಸಹಿಸಲ್ಲ: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ

ಬಹಿರಂಗವಾಗಿ ಮಾತನಾಡುವವರ ಜತೆ ಮಾತಾಡುತ್ತೇನೆ. ಶಿಸ್ತು ಸಮಿತಿ ಮೂಲಕ‌ ಕೇಂದ್ರಕ್ಕೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳುತ್ತೇವೆ. ಕೆಲವರಿಗೆ ಈಗಾಗಲೇ ಸ್ಪಷ್ಟೀಕರಣ ಕೇಳಿದ್ದು ಕೊಟ್ಟಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಬಾರದು; ಬಿಜೆಪಿಯಲ್ಲಿ ಶಿಸ್ತು ಉಲ್ಲಂಘನೆ ಸಹಿಸಲ್ಲ: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲು
TV9 Web
| Updated By: ganapathi bhat|

Updated on:Jan 25, 2022 | 2:01 PM

Share

ಬೆಂಗಳೂರು: ಸರ್ಕಾರ, ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಬಾರದು. ನಾವು ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆಯೇ ಇಲ್ಲ. ಹೈಕಮಾಂಡ್ ಸಂಪುಟ ಪುನಾರಚನೆ ಬಗ್ಗೆ ನಿರ್ಧರಿಸುತ್ತೆ. ಬಿಜೆಪಿಯಲ್ಲಿ ಎಲ್ಲರೂ ಶಿಸ್ತು ಅನುಸರಿಸಬೇಕು. ಸಿಎಂ, ಅಧ್ಯಕ್ಷರು, ಶಾಸಕರಿಗೆ ಬೇರೆ ಶಿಸ್ತು ಅಂತಾ ಇಲ್ಲ. ಬಿಜೆಪಿಯಲ್ಲಿ ಶಿಸ್ತು ಉಲ್ಲಂಘನೆ ಸಹಿಸಲ್ಲ ಎಂದು ಬಿಜೆಪಿ ಶಾಸಕರಿಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಸೂಚನೆ ನೀಡಿದ್ದಾರೆ.

ಯಾರೂ ಕೂಡ ಬಹಿರಂಗ ಹೇಳಿಕೆಯನ್ನು ನೀಡಬಾರದು. ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಬಹಿರಂಗವಾಗಿ ಮಾತನಾಡುವವರ ಜತೆ ಮಾತಾಡುತ್ತೇನೆ. ಶಿಸ್ತು ಸಮಿತಿ ಮೂಲಕ‌ ಕೇಂದ್ರಕ್ಕೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳುತ್ತೇವೆ. ಕೆಲವರಿಗೆ ಈಗಾಗಲೇ ಸ್ಪಷ್ಟೀಕರಣ ಕೇಳಿದ್ದು ಕೊಟ್ಟಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಹೇಳಿಕೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿದ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಜಿಲ್ಲೆಯಲ್ಲಿ ಅದೇ ಜಿಲ್ಲೆಯವರು ಇರುವುದಿಲ್ಲ. ಇದು ನಮ್ಮ ಪಕ್ಷದಲ್ಲಿ ಇರುವ ನಿಯಮ. ಅದನ್ನೇ ರಾಜ್ಯದಲ್ಲಿ ಕೂಡ ಅನುಷ್ಠಾನ ಮಾಡಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವಧಿ ಪೂರ್ಣ ಮಾಡ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಬೊಮ್ಮಾಯಿ‌ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ ಪಕ್ಷ, ಸರ್ಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಮೊದಲು ಬಿಜೆಪಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ, ಬಸನಗೌಡ ಪಾಟೀಲ ಯತ್ನಾಳ್, ತಿಪ್ಪಾರೆಡ್ಡಿ ಸಹಿತ ಕೆಲವರು ಸಚಿವ ಸ್ಥಾನದ ಆಕಾಂಕ್ಷೆಯ ಬಗ್ಗೆ ದನಿ ಎತ್ತಿದ್ದರು. ಸಚಿವ ಸಂಪುಟ ವಿಸ್ತರಣೆ ಆಗಬೇಕು, ಹೊಸ ಮುಖಗಳಿಗೆ ಮಣೆ ಹಾಕಬೇಕು ಎಂದು ಬಯಸಿದ್ದರು. ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಸರ್ಕಾರ ಸಂಪುಟ ರಚನೆ ಮಾಡಬೇಕು ಎಂದು ಹೇಳಿಕೆಗಳನ್ನು ಕೊಡುತ್ತಿದ್ದರು. ಇದರಿಂದ ಪಕ್ಷ ಮುಜುಗರ ಎದುರಿಸುವಂತೆ ಆಗಿತ್ತು. ಇದೀಗ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆಗೆ ಎಂ.ಪಿ ರೇಣುಕಾಚಾರ್ಯ ಪಟ್ಟು; ಅಗತ್ಯ ಬಿದ್ದರೆ ದೆಹಲಿಗೂ ಹೋಗ್ತೇವೆ ಎಂದ ಶಾಸಕ

ಇದನ್ನೂ ಓದಿ: ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? – ರೇಣುಕಾಚಾರ್ಯ ಗರಂ

Published On - 1:56 pm, Tue, 25 January 22

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು