
ಬೆಂಗಳೂರು: ಸಂಸದ (MP) ಸ್ಥಾನದಿಂದ ಎಐಸಿಸಿ (AICC) ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅನರ್ಹಗೊಂಡ ಬೆನ್ನಲ್ಲೇ, ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ವಿನೂತನ ಅಭಿಯಾನ ಆರಂಭಿಸಿದ್ದಾರೆ. “ನಮ್ಮ ಮನೆಯೇ ನಿಮ್ಮ ಮನೆ” ಅಭಿಯಾನ ಎಂದು ಕಾಂಗ್ರೆಸ್ ಶಾಸಕರು ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ರಾಮಲಿಂಗಾ ರೆಡ್ಡಿ, ಶಾಸಕ ಜಮೀರ್ ಅಹ್ಮದ್ ಇನ್ನು ಅನೇಕ ನಾಯಕರು ರಾಹುಲ್ ಗಾಂಧಿಗೆ ತಮ್ಮ ನಿವಾಸಕ್ಕೆ ಆಹ್ವಾನ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು ” ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ಬೆಂಬಲಿಸಿ “ನಮ್ಮ ಮನೆಯೂ ನಿಮ್ಮದೇ ಮನೆ” ಎಂಬ ಸಂದೇಶ ಇರುವ ಬಿತ್ತಿ ಪತ್ರವನ್ನು ಇಂದು ನನ್ನ ಮನೆಯಲ್ಲಿ ಅನಾವರಣಗೊಳಿಸಿದೆನು.” ಎಂದು ದಿನೇಶ್ ಗುಂಡುರಾವ್ ಪೋಸ್ಟ್ ಹಿಡಿದುಕೊಂಡು ಪೋಟೋ ಹಂಚಿಕೊಂಡಿದ್ದಾರೆ.
2019ರ ಲೋಕಸಭಾ ಚುನಾವಣೆ (Lok Sabha Election) ವೇಳೆ ಮೋದಿ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ (MP) ಸ್ಥಾನದಿಂದ ಎಐಸಿಸಿ (AICC) ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅನರ್ಹಗೊಂಡಿದ್ದರು. ಈ ಹಿನ್ನೆಲೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.
ಇದನ್ನೂ ಓದಿ: ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ: ಪೂರಕ ಸಾಕ್ಷ್ಯ ಕರ್ನಾಟಕದಿಂದ ಸೂರತ್ಗೆ ಹೋದ ಬಗೆ ಹೀಗಿದೆ ನೋಡಿ
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆ.ಹೆಚ್.ಮುನಿಯಪ್ಪ ಪರ ಕೋಲಾರದಲ್ಲಿ ನಡೆದ ಪ್ರಚಾರದಲ್ಲಿ ರಾಹುಲ್ ಗಾಂಧಿ ಅಂದಿನ ಎಐಸಿಸಿ ಅಧ್ಯಕ್ಷರಾಗಿದ್ದರು. ಅವರು ತಮ್ಮ ಭಾಷಣದ ವೇಳೆಯಲ್ಲಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ ನೇಮ್ ಒಂದೇ ಆಗಿದ್ದು, ಈ ಹೆಸರಿನವರು ಎಲ್ಲರೂ ಕಳ್ಳರು. ಈ ಎಲ್ಲಾ ಕಳ್ಳರು ಸೇರಿ ದೇಶವನ್ನು ಲೂಟಿ ಮಾಡಿದ್ದಾರೆ ಎಂದು ಹೇಳಿದ್ದರು. ಕೋಲಾರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ, ಮುಳಬಾಗಿಲಿನ ರೋಡ್ ಶೋ ವೇಳೆಯಲ್ಲಿ ಹಾಗೂ ಕೆಜಿಎಫ್ನ ನಗರಸಭೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಬಹಿರಂಗ ಸಮಾವೇಶದ ವೇಳೆಯಲ್ಲೂ ರಾಹುಲ್ ಗಾಂಧಿ ಇದೇ ವಿಚಾರವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದರು.
ರಾಹುಲ್ ಗಾಂಧಿ ಹೇಳಿಕೆ ವಿರೋಧಿಸಿ ಗುಜರಾತ್ನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪೂರ್ಣೇಶ್ ಮೋದಿ ಸೂರತ್ನಲ್ಲಿ ದೂರು ನೀಡಿದ್ದರು. ಮೋದಿ ಉಪನಾಮದ ಕುರಿತು ರಾಹುಲ್ ಗಾಂಧಿ ಮಾಡಿದ ಟೀಕೆ ಇಡೀ ಮೋದಿ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದೆ ಎಂದು ನೀಡಿದ್ದರು. ಐಪಿಸಿ ಸೆಕ್ಷನ್ಗಳಾದ 499 ಮತ್ತು 500ರ ಅಡಿ (ಮಾನಹಾನಿ) ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗಾಗಿ ರಾಹುಲ್ ಗಾಂಧಿಯವರು ಮೂರು ಬಾರಿ ಸೂರತ್ ಕೋರ್ಟ್ಗೆ ಹಾಜರಾಗಿದ್ದರು. ಈಗ ಕೋರ್ಟ್ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:29 pm, Fri, 31 March 23