ಮೋದಿ ಸರ್ಕಾರ ಸಿಎಎ ಜಾರಿ ಮಾಡಲಿದೆ, ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್ ಶಾ

|

Updated on: Nov 29, 2023 | 4:21 PM

ಕೊಲ್ಕತ್ತಾದಲ್ಲಿ ರ‍್ಯಾಲಿಯನ್ನುದ್ದೇಶಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಮತದಾರರು ಮತ್ತು ಆಧಾರ್ ಕಾರ್ಡ್‌ಗಳನ್ನು ನುಸುಳುಕೋರರಿಗೆ ಬಹಿರಂಗವಾಗಿ ಮತ್ತು ಅಕ್ರಮವಾಗಿ ವಿತರಿಸಲಾಗುತ್ತಿದೆ.ಇಷ್ಟು ಒಳನುಸುಳುವಿಕೆ ಸಂಭವಿಸುವ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತದೆಯೇ?. ಅದಕ್ಕಾಗಿಯೇ ಮಮತಾ ಬ್ಯಾನರ್ಜಿ CAA ಅನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮೋದಿ ಸರ್ಕಾರ ಸಿಎಎ ಜಾರಿ ಮಾಡಲಿದೆ, ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್ ಶಾ
ಅಮಿತ್ ಶಾ
Follow us on

ಕೊಲ್ಕತ್ತಾ ನವೆಂಬರ್ 29: ನರೇಂದ್ರ ಮೋದಿ (Narendra Modi) ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೊಳಿಸಲಿದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬುಧವಾರ ಹೇಳಿದ್ದಾರೆ. ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲು ಕೋಲ್ಕತ್ತಾದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ (Mamata Banerjee) ರಾಜ್ಯದಲ್ಲಿ ಒಳನುಸುಳುವಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಮತದಾರರು ಮತ್ತು ಆಧಾರ್ ಕಾರ್ಡ್‌ಗಳನ್ನು ನುಸುಳುಕೋರರಿಗೆ ಬಹಿರಂಗವಾಗಿ ಮತ್ತು ಅಕ್ರಮವಾಗಿ ವಿತರಿಸಲಾಗುತ್ತಿದೆ. “ಇಷ್ಟು ಒಳನುಸುಳುವಿಕೆ ಸಂಭವಿಸುವ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತದೆಯೇ?. ಅದಕ್ಕಾಗಿಯೇ ಮಮತಾ ಬ್ಯಾನರ್ಜಿ CAA ಅನ್ನು ವಿರೋಧಿಸುತ್ತಿದ್ದಾರೆ. ಆದರೆ ಸಿಎಎ ದೇಶದ ಕಾನೂನು ಎಂದು ನಾನು ಹೇಳುತ್ತೇನೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾವು ಅದನ್ನು ಕಾರ್ಯಗತಗೊಳಿಸುತ್ತೇವೆ ಎಂದು ಹೇಳಿದ್ದಾರೆ.


2020 ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಸಿಎಎ, 2015 ರ ಮೊದಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ನೀಡುತ್ತದೆ. ಸಿಎಎ ಮುಸ್ಲಿಮರನ್ನು ಹೊರಗಿಡುತ್ತದೆ, ಇದು ಅಸಂವಿಧಾನಿಕ ಹೇಳಿಕೆ ಎಂದು ತೃಣಮೂಲ ಕಾಂಗ್ರೆಸ್ (TMC) ಸಿಎಎಯನ್ನು ವಿರೋಧಿಸುತ್ತದೆ.

ಸಿಎಎಗೆ ಕಾನೂನು ರೂಪಿಸುವ ಪ್ರಕ್ರಿಯೆಯಲ್ಲಿದೆ ಎಂದು ಕೇಂದ್ರವು ಈ ಹಿಂದೆ ಹೇಳಿತ್ತು. ಭಾನುವಾರ, ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರು ಸಿಎಎಗೆ ನಿಯಮಗಳನ್ನು ಮಾರ್ಚ್ 30, 2024 ರೊಳಗೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಬುಧವಾರ ತಮ್ಮ ಭಾಷಣದಲ್ಲಿ ಅಮಿತ್ ಶಾ ಅವರು ಮಮತಾ ಬ್ಯಾನರ್ಜಿಯವರ ಸರ್ಕಾರವು ಕಮ್ಯುನಿಸ್ಟರೊಂದಿಗೆ ಬಂಗಾಳ ರಾಜ್ಯವನ್ನು “ಹಾಳುಮಾಡಿದೆ” ಎಂದು ಆರೋಪಿಸಿದರು. ಚುನಾವಣಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳು ರಾಷ್ಟ್ರೀಯ ಮಟ್ಟದಲ್ಲಿ ಬಂಗಾಳದಲ್ಲಿ ಅತಿ ಹೆಚ್ಚು ಎಂದ ಶಾ, 2026ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಬಂಗಾಳದಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ:  ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ನಾಳೆ ಮೋದಿ ಸಂವಾದ

ಆದರೆ ಅದಕ್ಕೂ ಮೊದಲು, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಭರ್ಜರಿಯಾಗಿ ಗೆಲ್ಲುವುದನ್ನು ನೀವೆಲ್ಲರೂ ಖಚಿತಪಡಿಸಿಕೊಳ್ಳಬೇಕು. ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂದು ನಾನು ನಿಮ್ಮೆಲ್ಲರನ್ನೂ ಪ್ರಾಮಾಣಿಕವಾಗಿ ವಿನಂತಿಸುತ್ತೇನೆ. ಅವರಿಗೆ (ಮೋದಿ) ಇಷ್ಟು ಸಂಖ್ಯೆಯ ಮತಗಳನ್ನು ನೀಡಿ ಆಶೀರ್ವದಿಸಿ, ಅವರು ಬಂಗಾಳದ ಕಾರಣದಿಂದ ಪ್ರಧಾನಿಯಾದರು ಎಂದು ಹೇಳಿದ್ದಾರೆ.

2019 ರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 42 ಸ್ಥಾನಗಳಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇದುವರೆಗಿನ ಅತ್ಯಧಿಕ ಸ್ಥಾನವಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ