ನ್ಯಾಷನಲ್ ಹೆರಾಲ್ಡ್ ಪ್ರಕರಣ: ವಿಚಾರಣೆಯನ್ನು ಮುಂದೂಡುವಂತೆ ಸೋನಿಯಾ ಗಾಂಧಿ ಮನವಿ ಸ್ವೀಕರಿಸಿದ ಇಡಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಸೋನಿಯಾ ಅವರಿಗೆ ಹೊಸ ದಿನಾಂಕವನ್ನು ನೀಡಲಾಗುವುದು..
ಆರೋಗ್ಯ ಸಮಸ್ಯೆಯಿಂದಾಗಿ ವಿಚಾರಣೆಯನ್ನು ಮುಂದೂಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Rahul Gandhi) ಅವರ ಮನವಿಯನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಸ್ವೀಕರಿಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald case) ಸಂಬಂಧಿಸಿದಂತೆ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಸೋನಿಯಾ ಅವರಿಗೆ ಹೊಸ ದಿನಾಂಕವನ್ನು ನೀಡಲಾಗುವುದು. ಸೋನಿಯಾ ಗಾಂಧಿ ಅವರು ನಾಳೆ (ಗುರುವಾರ) ಇಡಿ ಮುಂದೆ ಹಾಜರಾಗಬೇಕಿತ್ತು ಆದರೆ ಅವರು ಕೊವಿಡ್ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಚೇತರಿಸಿಕೊಂಡಿದ್ದಾರೆ. ಕಳೆದ ಒಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಎರಡು ದಿನಗಳ ಹಿಂದೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಕೊವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾದ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯಲು ಕಟ್ಟುನಿಟ್ಟಾಗಿ ಸಲಹೆ ನೀಡಲಾಗಿರುವುದರಿಂದ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಅಲ್ಲಿ ಹಾಜರಾಗುವುದನ್ನು ಕೆಲವು ವಾರಗಳವರೆಗೆ ಮುಂದೂಡುವಂತೆ ಇಡಿಗೆ ಪತ್ರ ಬರೆದಿದ್ದಾರೆ ಎಂದು ಬುಧವಾರ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದರು.
कांग्रेस अध्यक्ष श्रीमती सोनिया गांधी को कोरोना और फेफड़ों के संक्रमण के कारण अस्पताल में भर्ती होने के बाद डॉक्टरों द्वारा घर पर आराम करने की सख्त सलाह के दृष्टिगत
ಇದನ್ನೂ ಓದಿ1/2
— Jairam Ramesh (@Jairam_Ramesh) June 22, 2022
ಸೋನಿಯಾ ಗಾಂಧಿ ಕೊವಿಡ್ ಪಾಸಿಟಿವ್ ಆಗಿದ್ದು ಸಂಬಂಧಿತ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಸೋನಿಯಾ ಗಾಂಧಿ ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಆಗಿದ್ದರು. ಜೂನ್ 2 ರಂದು ಸೋನಿಯಾ ಗಾಂಧಿಗೆ ಕೊವಿಡ್ ದೃಢಪಟ್ಟಿದ್ದು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ (ED) ಹೆಚ್ಚಿನ ಸಮಯವನ್ನು ಕೋರಿದ್ದರು. ಅವರು ಜೂನ್ 8 ರಂದು ಏಜೆನ್ಸಿಯ ಮುಂದೆ ಹಾಜರಾಗಬೇಕಿತ್ತು. ಹೆಚ್ಚಿನ ಸಮಯಾವಕಾಶಕ್ಕಾಗಿ ಅವರ ಕೋರಿಕೆಗೆ ಸಂಸ್ಥೆ ಸಮ್ಮತಿಸಿತ್ತು.
ಜೂನ್ 12 ರಂದು ಉಸಿರಾಟದ ತೊಂದರೆಯಿಂದ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 20ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪುತ್ರ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಇಡಿ ಐದು ದಿನಗಳ ಕಾಲ 50 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕೇಂದ್ರವು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು ಇದು ರಾಜಕೀಯ ಸೇಡು ಎಂದು ಬಣ್ಣಿಸಿದೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 4:19 pm, Wed, 22 June 22