ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್​ಗೆ ಜೈಲು: ಸುಬ್ರಮಣಿಯನ್ ಸ್ವಾಮಿ

| Updated By: Rakesh Nayak Manchi

Updated on: Nov 26, 2022 | 6:10 PM

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಜೈಲಗೆ ಹೋಗುತ್ತಾರೆ ಎಂದು ಎಂದು ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್​ಗೆ ಜೈಲು: ಸುಬ್ರಮಣಿಯನ್ ಸ್ವಾಮಿ
ಯಂಗ್‌ ಇಂಡಿಯಾ ಪ್ರಕರಣದಲ್ಲಿ ಸೋನಿಯಾ, ರಾಹುಲ್​ಗೆ ಜೈಲು: ಸುಬ್ರಮಣಿಯನ್ ಸ್ವಾಮಿ
Follow us on

ಮಡಿಕೇರಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ (National Herald case)ದಲ್ಲಿ ಸೋನಿಯಾ ಗಾಂಧಿ (Sonia Gandhi) ಹಾಗೂ ರಾಹುಲ್ ಗಾಂಧಿ (Rahul Gandhi) ಅವರು ಜೈಲಗೆ ಹೋಗುತ್ತಾರೆ ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ (Subramanian Swamy) ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್​ ಪಕ್ಷದ ಭಾರತ್ ಜೋಡೋ ಯಾತ್ರೆ (Bharat Jodo Yatra) ಬಗ್ಗೆ ವ್ಯಂಗ್ಯವಾಡಿದರು. ಭಾರತವನ್ನು ಇಬ್ಭಾಗ ಮಾಡಿದವರೇ ಒಗ್ಗೂಡಿಸಲು ಹೊರಟಿದ್ದಾರೆ. ತಾವು ಮಾಡಿದ ಕೃತ್ಯಕ್ಕೆ ಪ್ರಾಯಶ್ಚಿತವಾದಂತಿದೆ. ರಾಹುಲ್ ಗಾಂಧಿಗೆ ಮಾತ್ರ ಭಾರತ ಒಡೆದಂತೆ ಕಾಣುತ್ತಿದೆ. ಆದರೆ ಭಾರತ ಒಗ್ಗಟ್ಟಿನ ಭಾರತವಾಗಿಯೇ ಇದೆ ಎಂದು ಹೇಳಿದರು.

ಏನಿದು ನ್ಯಾಷನಲ್ ಹೆರಾಲ್ಡ್​ ಹಗರಣ?

ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಈ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿತ್ತು. ಇದು 1937ರಲ್ಲಿ 5,000 ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಅದರ ಷೇರುದಾರರಾಗಿ ಸ್ಥಾಪಿಸಿತು. ಈ ಕಂಪನಿಯು ಯಾವುದೇ ಒಬ್ಬ ವ್ಯಕ್ತಿಗೆ ಸೇರಿದ್ದಲ್ಲ.

ಇದನ್ನೂ ಓದಿ: ‘ಕೈ’ಗನ್ನಡಿ! ಕೈ ಪಾಳಯದಲ್ಲಿ ಕುಟುಂಬ ರಾಜಕಾರಣ -ಪುತ್ರ ವ್ಯಾಮೋಹಿಗಳಿಗೆ ಮಣೆ ಹಾಕತ್ತಾ ಪ್ರಜಾಪ್ರಭುತ್ವವಾದಿ ಕಾಂಗ್ರೆಸ್?

2010ರಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ 1,057 ಷೇರುದಾರರನ್ನು ಹೊಂದಿತ್ತು. ಇದು ತೀವ್ರ ನಷ್ಟವನ್ನು ಅನುಭವಿಸಿತು. ಹೀಗಾಗಿ, ಅದರ ಹಿಡುವಳಿಗಳನ್ನು 2011ರಲ್ಲಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (YIL)ಗೆ ವರ್ಗಾಯಿಸಲಾಯಿತು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅದರ ನಿರ್ದೇಶಕರ ಮಂಡಳಿಯಲ್ಲಿದ್ದರು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ವಾಧೀನಪಡಿಸಿಕೊಂಡಾಗ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರು ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.

2012ರಲ್ಲಿ ಬಿಜೆಪಿ ನಾಯಕ ಮತ್ತು ವಕೀಲ ಸುಬ್ರಮಣಿಯನ್ ಸ್ವಾಮಿ ಅವರು ವಿಚಾರಣಾ ನ್ಯಾಯಾಲಯದ ಮುಂದೆ ದೂರು ಸಲ್ಲಿಸಿದ್ದರು. ನ್ಯಾಷನಲ್ ಹೆರಾಲ್ಡ್​ ಪತ್ರಿಕೆಯನ್ನು ಸ್ವಾಧೀನಪಡಿಸಿಕೊಳ್ಳುವ ಸಲುವಾಗಿ ಗಾಂಧಿ ಕುಟುಂಬದವರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು. ಪತ್ರಿಕೆಯ ಹಿಂದಿನ ಪ್ರಕಾಶಕರಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯನ್ (ವೈಐ) ಎಂಬ ಸಂಸ್ಥೆಯ ಮೂಲಕ ಖರೀದಿಸುವ ಮೂಲಕ ನ್ಯಾಷನಲ್ ಹೆರಾಲ್ಡ್ ಒಡೆತನದ ಆಸ್ತಿಯನ್ನು ಗಾಂಧಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Sat, 26 November 22