AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ₹ 252 ಕೋಟಿ ವ್ಯಯಿಸಿದ ಬಿಜೆಪಿ: ಬಂಗಾಳದಲ್ಲಿ ಅತಿಹೆಚ್ಚು

ಈ ಮೊತ್ತದಲ್ಲಿ ಶೇ 60ರಷ್ಟು ಅಂದರೆ, ₹ 151 ಕೋಟಿ ಮೊತ್ತವನ್ನು ಪಶ್ಚಿಮ ಬಂಗಾಳ ಒಂದರಲ್ಲೇ ಖರ್ಚು ಮಾಡಿದೆ.

5 ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ₹ 252 ಕೋಟಿ ವ್ಯಯಿಸಿದ ಬಿಜೆಪಿ: ಬಂಗಾಳದಲ್ಲಿ ಅತಿಹೆಚ್ಚು
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 12, 2021 | 7:25 AM

Share

ದೆಹಲಿ: ಭಾರತೀಯ ಜನತಾ ಪಕ್ಷವು (BJP) ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಒಟ್ಟು ₹ 252 ಕೋಟಿ ಖರ್ಚು ಮಾಡಿದೆ. ಈ ಮೊತ್ತದಲ್ಲಿ ಶೇ 60ರಷ್ಟು ಅಂದರೆ, ₹ 151 ಕೋಟಿ ಮೊತ್ತವನ್ನು ಪಶ್ಚಿಮ ಬಂಗಾಳ ಒಂದರಲ್ಲೇ ಖರ್ಚು ಮಾಡಿದೆ. ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಅಧಿಕಾರದಿಂದ ಕೆಳಗಿಳಿಸಿ, ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ನಾಯಕರ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿರಲಿಲ್ಲ.

ವೆಚ್ಚದ ವಿವರಗಳನ್ನು ಬಿಜೆಪಿಯು ಚುನಾವಣಾ ಆಯೋಗಕ್ಕೆ ನೀಡಿದೆ. ₹ 252,02,71,753 ಮೊತ್ತವನ್ನು ಬಿಜೆಪಿ ಚುನಾವಣೆಗಾಗಿ ಖರ್ಚು ಮಾಡಿದೆ. ಈ ಪೈಕಿ ₹ 43.81 ಕೋಟಿಯನ್ನು ಅಸ್ಸಾಂ ಮತ್ತು ₹ 4.79 ಕೋಟಿಯನ್ನು ಪುದುಚೇರಿ ವಿಧಾನಸಭಾ ಚುನಾವಣೆಗಾಗಿ ಖರ್ಚು ಮಾಡಿದೆ.

ತಮಿಳುನಾಡಿನಲ್ಲಿ ಅಧಿಕಾರದಲ್ಲಿದ್ದ ಎಐಎಡಿಎಂಕೆಯನ್ನು ಡಿಎಂಕೆ ಅಧಿಕಾರದಿಂದ ಕೆಳಗಿಳಿಸಿತು. ತಮಿಳುನಾಡಿನಲ್ಲಿ ಶೇ 2.6ರಷ್ಟು ಮತ ಪಡೆದಿದ್ದ ಬಿಜೆಪಿ ಅಲ್ಲಿ ₹ 22.97 ಕೋಟಿ ವ್ಯಯಿಸಿತ್ತು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದ ಬಿಜೆಪಿಯು ₹ 151 ಕೋಟಿ ವ್ಯಯಿಸಿತ್ತು. ಆದರೆ ಬಿಜೆಪಿಯ ಪ್ರಯತ್ನ ಫಲ ನೀಡಿರಲಿಲ್ಲ.

ಕೇರಳದಲ್ಲಿ ಈ ಬಾರಿ ಒಂದಿಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿ ಎಲ್​ಡಿಎಫ್ ವಿರುದ್ಧದ ಹೋರಾಟದಲ್ಲಿ ಅಂಥ ಯಶಸ್ಸು ಸಿಕ್ಕಿರಲಿಲ್ಲ. ಕೇರಳ ಚುನಾವಣೆಗಾಗಿ ಬಿಜೆಪಿ ₹ 29.24 ಕೋಟಿ ಖರ್ಚು ಮಾಡಿತ್ತು.

ಇದನ್ನೂ ಓದಿ: ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ; ಐವರು ಹಾಲಿ ಎಂಎಲ್​ಸಿಗಳಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧಾರ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್