AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navjot Singh Sidhu: ಕಾಂಗ್ರೆಸ್​​ ತೊರೆದು ಬಿಜೆಪಿ ಸೇರಲಿದ್ದಾರೆ ನವಜೋತ್ ಸಿಂಗ್ ಸಿಧು: ವರದಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ  ಕಾಂಗ್ರೆಸ್ ನಾಯಕರು  ಬೇರೆ ಪಕ್ಷಗಳಿಗೆ ಸೇರುತ್ತಿದ್ದಾರೆ.  ಇತ್ತೀಚಿಗೆ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಸೇರಿದ್ದರು. ಆದಾದನಂತರ ಅಶೋಕ್ ಚವಾಣ್  ಬಿಜೆಪಿ ಸೇರಿದ್ದರು. ಇದೀಗ  ಕಾಂಗ್ರೆಸ್ ನಾಯ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂಬ ವದಂತಿ ಹರಿದಾಡಿದ್ದು  ಅಧಿಕೃತ ಹೇಳಿಕೆಗಳು ಇನ್ನೂ ಬಂದಿಲ್ಲ.

Navjot Singh Sidhu: ಕಾಂಗ್ರೆಸ್​​ ತೊರೆದು ಬಿಜೆಪಿ ಸೇರಲಿದ್ದಾರೆ ನವಜೋತ್ ಸಿಂಗ್ ಸಿಧು: ವರದಿ
ನವಜೋತ್ ಸಿಂಗ್ ಸಿಧು
Follow us
ರಶ್ಮಿ ಕಲ್ಲಕಟ್ಟ
|

Updated on:Feb 17, 2024 | 8:00 PM

ದೆಹಲಿ ಫೆಬ್ರುವರಿ 17:  ನವಜೋತ್ ಸಿಂಗ್ ಸಿಧು (Navjot Singh Sidhu) ಅವರು ಕಾಂಗ್ರೆಸ್ (Congress) ತೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಿಪಬ್ಲಿಕ್ ಟಿವಿ ವರದಿ ಪ್ರಕಾರ  ಫೆಬ್ರವರಿ 22 ರ ನಂತರ ಸಿಧು ಜೊತೆಗೆ 3 ಕಾಂಗ್ರೆಸ್ ಶಾಸಕರು ಬಿಜೆಪಿ (BJP) ಸೇರಬಹುದು. ಸಿಧು ಅವರಿಗೆ ಯಾವುದೇ ಮಹತ್ವದ ಜವಾಬ್ದಾರಿಗಳನ್ನು ವಹಿಸದ ಕಾರಣ ಪಕ್ಷದ ಹೈಕಮಾಂಡ್‌ ಬಗ್ಗೆ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಮರುಪ್ರವೇಶಕ್ಕಾಗಿ ನಾಯಕರನ್ನು ಸಮಾಧಾನಪಡಿಸಲು ಅವರು ಬಿಜೆಪಿಯ ಹಿರಿಯ ನಾಯಕತ್ವದಿಂದ ಸಮಯ ಕೇಳಿದ್ದಾರೆ ಎಂದು ಹೇಳಲಾಗಿದೆ. ಸಿಧು ಅವರು ಪಕ್ಷಕ್ಕೆ ಪ್ರವೇಶಿಸಿದಾಗಿನಿಂದಲೂ ಸ್ಥಳೀಯ ಕಾಂಗ್ರೆಸ್ ಘಟಕದೊಂದಿಗೆ ಗೊಂದಲದ ಸಂಬಂಧವನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭವಿಷ್ಯವೂ ಅತಂತ್ರವಾಗಿದೆ.

ಇತ್ತ ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್  ಮತ್ತು ಅವರ ಮಗ ನಕುಲ್ ನಾಥ್ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಕೇಳಿ ಬಂದಿದೆ. ಈ ಬಗ್ಗೆ ಕಮಲ್ ನಾಥ್ ಅವರಲ್ಲಿ ಕೇಳಿದಾಗ ಅಂಥದ್ದೇನಾದರೂ ಇದ್ದರೆ ಮೊದಲು ನಿಮಗೇ ತಿಳಿಸುತ್ತೇನೆ ಎಂದು ಮಾಧ್ಯಮದವರಿಗೆ ಹೇಳಿದ್ದಾರೆ.

2017 ರ ಪಂಜಾಬ್ ಅಸೆಂಬ್ಲಿ ಚುನಾವಣೆಗೆ ಮೊದಲು ನವಜೋತ್ ಸಿಂಗ್ ಸಿಧು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಆಗ ಅವರು ಮೂಲಕ್ಕೆ ಮರಳಿದ ‘ಹುಟ್ಟು ಕಾಂಗ್ರೆಸ್ಸಿಗ’ ಎಂದು ಹೇಳಿದ್ದರು. ಕ್ರಿಕೆಟಿಗ ಕಮ್ ರಾಜಕಾರಣಿ ಸಿಧು ಅವರು ಹೈಕಮಾಂಡ್‌ನಿಂದ ಯಾರನ್ನು ನೇಮಿಸಿದರೂ ಕೆಲಸ ಮಾಡಲು ಸಿದ್ಧ. ಪಕ್ಷವು ಎಲ್ಲಿ ಬೇಕಾದರೂ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದರು.

ಮಾನ್ ವಿರುದ್ಧ ಸಿಧು ಆಕ್ರೋಶ

ಗುರುವಾರ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ರೈತರ ಪ್ರತಿಭಟನೆ ವೇಳೆ  ಅಶ್ರುವಾಯು ಶೆಲ್ ದಾಳಿ ಬಗ್ಗೆ ಖಂಡಿಸಿದ ಸಿಧು, ಹೇಡಿತನ ಇದು ಇದು ನಮ್ಮ ಪ್ರಾದೇಶಿಕ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ರಿಮೋಟ್ ಕಂಟ್ರೋಲ್ ಸಿಎಂ ಭಗವಂತ್ ಮಾನ್ /ಗೃಹಸಚಿವರು  ಮೂಕ ಪ್ರೇಕ್ಷಕರಾಗಿದ್ದಾರೆ ಅದು ನಾಚಿಕೆಗೇಡು ಎಂದು  ಆಕ್ರೋಶ ವ್ಯಕ್ತ ಪಡಿಸಿದ್ದರು.

ಇದನ್ನೂ ಓದಿ:ಬಿಜೆಪಿಗೆ ಸೇರುತ್ತೀರಾ ಎಂದು ಕೇಳಿದಾಗ ಕಾಂಗ್ರೆಸ್ ನಾಯಕ ಕಮಲ್ ನಾಥ್ ಹೇಳಿದ್ದೇನು?

ಯುವರಾಜ್ ಸಿಂಗ್ ಬಿಜೆಪಿಗೆ?

ಏತನ್ಮಧ್ಯೆ. ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮುಂಬರುವ 2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಸೇರುವ ಸಾಧ್ಯತೆ ಇದೆ. ಬಾಲಿವುಡ್ ನಟ ಸನ್ನಿ ಡಿಯೋಲ್ ಬದಲಿಗೆ ಪಂಜಾಬ್‌ನ ಗುರುದಾಸ್‌ಪುರ ಕ್ಷೇತ್ರದಿಂದ ಯುವರಾಜ್ ಸಿಂಗ್ ಅವರನ್ನು ಬಿಜೆಪಿ ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳು ಹರಡಿವೆ. ದೆಹಲಿಯಿಂದ ಗೌತಮ್ ಗಂಭೀರ್ ಪುನರಾವರ್ತನೆಯಾಗುವ ಸಾಧ್ಯತೆ ಕಡಿಮೆ. ಯುವರಾಜ್ ಸಿಂಗ್ ಅವರು ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ತಾಯಿಯನ್ನು ಭೇಟಿಯಾದ ನಂತರ ರಾಜಕೀಯ ಪ್ರವೇಶಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Sat, 17 February 24

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ