ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ: ಸರ್ಕಾರ ಆದೇಶ

ಸಿಎಂ ಸಿದ್ಧರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ: ಸರ್ಕಾರ ಆದೇಶ
ಸಿಎಂ ಸಿದ್ಧರಾಮಯ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 01, 2023 | 8:55 PM

ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ಸಿಎಂ ಸಿದ್ಧರಾಮಯ್ಯ (siddaramaiah) ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡುವ ಮೂಲಕ ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ನೇಮಕ ಮಾಡಲಾಗಿದೆ. ಚುನಾವಣಾ ನೀತಿ ತಂತ್ರಜ್ಞ ಸುನೀಲ್​​ ಕನುಗೋಳು ಅವರು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನ‌ದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.

ವಿಧಾನಪರಿಷತ್ ಸದಸ್ಯ ಕೆ.‌ ಗೋವಿಂದರಾಜ್​ ಏಷ್ಯಾ ಬಾಸ್ಕೆಟ್‌ಬಾಲ್‌ನ ನೂತನ ಅಧ್ಯಕ್ಷರಾಗಿ ಮೇ ತಿಂಗಳಿನಲ್ಲೇ ನೇಮಕವಾಗಿದ್ದರು. ಈ ಹುದ್ದೆಗೇರಿದ ಭಾರತದ ಮೊದಲ ವ್ಯಕ್ತಿ ಎನ್ನುವ ಹಿರಿಮೆಗೂ ಗೋವಿಂದರಾಜು ಪಾತ್ರರಾಗಿದ್ದರು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ ಯೋಜನೆಗಳಿಗೆ ಅನುದಾನ ಕಡಿತಗೊಳಿಸದಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ

ಪಕ್ಷದ ಗೆಲುವಿಗೆ ತೆರೆಮರೆಯಲ್ಲಿ ತಂತ್ರಗಾರಿಕೆಯನ್ನು ಹೆಣೆದಿದ್ದ ಚುನಾವಣಾ ನೀತಿ ತಂತ್ರಜ್ಞ ಸುನೀಲ್​​ ಕನುಗೋಳು ಈಗ ಆಡಳಿತದಲ್ಲೂ ಸಿಎಂಗೆ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ. ಚುನಾವಣಾ ವೇಳೆ ಪೇಸಿಎಂ, ಸೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಮಾಸ್ಟರ್​ ಮೈಂಡ್​ ಇವರೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:24 pm, Thu, 1 June 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್