Maharashtra Politics: ಪ್ರಫುಲ್ ಪಟೇಲ್​​ನ್ನು ಎನ್‌ಸಿಪಿ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಪಕ್ಷದಿಂದ ಉಚ್ಚಾಟಿಸಿದ ಶರದ್ ಪವಾರ್

|

Updated on: Jul 03, 2023 | 5:43 PM

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿ ನಾನು ಈ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಎನ್‌ಸಿಪಿ ಪಕ್ಷದ ಸದಸ್ಯರ ನೋಂದಣಿಯಿಂದ ಸುನೀಲ್ ತಟ್ಕರೆ ಮತ್ತು  ಪ್ರಫುಲ್ ಪಟೇಲ್ ಅವರ ಹೆಸರನ್ನು ತೆಗೆದುಹಾಕಲು ಆದೇಶಿಸುತ್ತೇನೆ ಎಂದು ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ. 

Maharashtra Politics: ಪ್ರಫುಲ್ ಪಟೇಲ್​​ನ್ನು ಎನ್‌ಸಿಪಿ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಪಕ್ಷದಿಂದ ಉಚ್ಚಾಟಿಸಿದ ಶರದ್ ಪವಾರ್
ಶರದ್ ಪವಾರ್- ಪ್ರಫುಲ್ ಪಟೇಲ್
Follow us on

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಸೋಮವಾರ ಪ್ರಫುಲ್ ಪಟೇಲ್ (Praful Patel) ಮತ್ತು ಸುನೀಲ್ ತಟ್ಕರೆ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದಾರೆ. ಪಟೇಲ್ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿದ್ದು, ತಟ್ಕರೆ ಎನ್‌ಸಿಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿ ನಾನು ಈ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಎನ್‌ಸಿಪಿ ಪಕ್ಷದ ಸದಸ್ಯರ ನೋಂದಣಿಯಿಂದ ಸುನೀಲ್ ತಟ್ಕರೆ ಮತ್ತು  ಪ್ರಫುಲ್ ಪಟೇಲ್ ಅವರ ಹೆಸರನ್ನು ತೆಗೆದುಹಾಕಲು ಆದೇಶಿಸುತ್ತೇನೆ ಎಂದು ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.  ಎನ್‌ಸಿಪಿಯಿಂದ ವಜಾಗೊಂಡಿರುವ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಮುಖ್ಯಸ್ಥರನ್ನಾಗಿ ಪ್ರಫುಲ್ ಪಟೇಲ್ ನೇಮಿಸಿದ ಬೆನ್ನಲ್ಲೇ ಶರದ್ ಪವಾರ್ ಈ ಕ್ರಮ ಕೈಗೊಂಡಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಎನ್‌ಸಿಪಿ ಮೂರು ಪಕ್ಷದ ಮುಖಂಡರಾದ  ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು  ವಜಾಗೊಳಿಸಲಾಗಿದೆ.

ಅಜಿತ್ ಪವಾರ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು ಪಕ್ಷದ ಶಿಸ್ತು ಮತ್ತು ಪಕ್ಷದ ನೀತಿಗೆ ವಿರುದ್ಧವಾಗಿದೆ ಎಂದು ಎನ್​​ಸಿಪಿ  ಹೇಳಿದೆ.

ಇದನ್ನೂ ಓದಿ: ಬಂಡಾಯ ನಂತರ 3 ನಾಯಕರನ್ನು ಉಚ್ಚಾಟಿಸಿದ ಎನ್‌ಸಿಪಿ; ಸಂಸದ ಸ್ಥಾನದಿಂದ ಪ್ರಫುಲ್ ಪಟೇಲ್​​ನ್ನು ಅನರ್ಹಗೊಳಿಸಲು ಒತ್ತಾಯ

ಭಾನುವಾರ ಮಧ್ಯಾಹ್ನ ಏಕನಾಥ್ ಶಿಂಧೆ ಸರ್ಕಾರದಲ್ಲಿ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎನ್‌ಸಿಪಿಯ ಇತರ ಎಂಟು ಶಾಸಕರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ