ಅಜಿತ್ ಪವಾರ್ ಬಂಡಾಯ ನಂತರ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಜುಲೈ 5ರಂದು ಎನ್‌ಸಿಪಿ ಸಭೆ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್, ಬುಧವಾರ ಮಧ್ಯಾಹ್ನ 1 ಗಂಟೆಗೆ ದಕ್ಷಿಣ ಮುಂಬೈನ ವೈ ಬಿ ಚವಾಣ್ ಸೆಂಟರ್​​ನಲ್ಲಿ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.

ಅಜಿತ್ ಪವಾರ್ ಬಂಡಾಯ ನಂತರ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಜುಲೈ 5ರಂದು ಎನ್‌ಸಿಪಿ ಸಭೆ
ಶರದ್ ಪವಾರ್
Follow us
|

Updated on:Jul 03, 2023 | 6:30 PM

ಅಜಿತ್ ಪವಾರ್ (Ajit Pawar) ಸೇರಿದಂತೆ ಒಂಬತ್ತು ಎನ್‌ಸಿಪಿ (NCP) ನಾಯಕರು ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ, ಪಕ್ಷದ ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು ಜುಲೈ 5 ರಂದು ಮುಂಬೈನಲ್ಲಿ ಸಭೆ ಕರೆದಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆಗಳು ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾರೆ ಎಂದು ಅದರ ರಾಜ್ಯ ಘಟಕದ ಮುಖ್ಯಸ್ಥ ಜಯಂತ್ ಪಾಟೀಲ್ ಹೇಳಿದ್ದಾರೆ. ಪಕ್ಷದಲ್ಲಿ ಬಂಡಾಯವೆದ್ದ ಅಜಿತ್ ಪವಾರ್ ಭಾನುವಾರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಇತರ ಎಂಟು ಎನ್‌ಸಿಪಿ ನಾಯಕರು ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಭೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್, ಬುಧವಾರ ಮಧ್ಯಾಹ್ನ 1 ಗಂಟೆಗೆ ದಕ್ಷಿಣ ಮುಂಬೈನ ವೈ ಬಿ ಚವಾಣ್ ಸೆಂಟರ್​​ನಲ್ಲಿ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.

ಏಕನಾಥ್ ಶಿಂಧೆ-ಬಿಜೆಪಿ ಸರ್ಕಾರಕ್ಕೆ ಎನ್‌ಸಿಪಿ ಬೆಂಬಲ ನೀಡುವುದಿಲ್ಲ, ಸರ್ಕಾರಕ್ಕೆ ಬೆಂಬಲ ನೀಡುವ ಪತ್ರಕ್ಕೆ ಸಹಿ ಮಾಡಿರುವ ಹಲವು ಶಾಸಕರು ನನಗೆ ಕರೆ ಮಾಡಿದ್ದು ಅವರು ಗೊಂದಲಕ್ಕೀಡಾಗಿದ್ದಾರೆ. ಅವರೆಲ್ಲರೂ ಶರದ್ ಪವಾರ್‌ಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ಪಾಟೀಲ್ ಹೇಳಿದ್ದಾರೆ.

ನಮ್ಮ ಪಕ್ಷ ಬಿಜೆಪಿಗೆ ಬೆಂಬಲ ನೀಡಬೇಕು ಎಂದು ಪಕ್ಷದ ಕೆಲವು ನಾಯಕರು ಆಗಾಗ್ಗೆ ಒತ್ತಾಯಿಸುತ್ತಾರೆ, ಆದರೆ ಪಕ್ಷದ ಉನ್ನತ ನಾಯಕತ್ವ ಅದನ್ನು ಎಂದಿಗೂ ಅನುಮೋದಿಸಲಿಲ್ಲ . ಒಂಬತ್ತು ಎನ್‌ಸಿಪಿ ನಾಯಕರು ಪಕ್ಷದ ಆದರ್ಶಗಳಿಗೆ ವಿರುದ್ಧವಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಅವರು ಹೇಳಿದರು.

ಸದ್ಯಕ್ಕೆ ನಮ್ಮ ಪಕ್ಷದ ಒಂಬತ್ತು ಶಾಸಕರು ಸಚಿವರಾಗಿದ್ದಾರೆ. ಇತರರು ಪ್ರಮಾಣ ವಚನವನ್ನು ವೀಕ್ಷಿಸಲು ಹೋಗಿದ್ದರು ಎಂದು ಪಾಟೀಲ್ ಹೇಳಿದರು.

ಇದನ್ನೂ ಓದಿ: Maharashtra Politics: ಪ್ರಫುಲ್ ಪಟೇಲ್​​ನ್ನು ಎನ್‌ಸಿಪಿ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಪಕ್ಷದಿಂದ ಉಚ್ಚಾಟಿಸಿದ ಶರದ್ ಪವಾರ್

ಅಜಿತ್ ಪವಾರ್ ಅವರಿಗೆ 40 ಕ್ಕೂ ಹೆಚ್ಚು ಶಾಸಕರು ಮತ್ತು ಅವರ ಪಕ್ಷದ ಆರು ಎಂಎಲ್‌ಸಿಗಳ ಬೆಂಬಲವಿದೆ ಎಂದು ರಾಜಭವನಕ್ಕೆ ಸಲ್ಲಿಸಿದ ಪತ್ರವನ್ನು ಉಲ್ಲೇಖಿಸಿ ಮೂಲಗಳು ಹೇಳಿವೆ. ಪಕ್ಷವು 53 ಶಾಸಕರು ಮತ್ತು ಒಂಬತ್ತು ಎಂಎಲ್‌ಸಿಗಳನ್ನು ಹೊಂದಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Mon, 3 July 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್