ನಾಳೆ ಎನ್‌ಡಿಎ ಸಂಸದರ ಸಭೆ; ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ

ನರೇಂದ್ರ ಮೋದಿಯವರು 3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ. ಭಾನುವಾರ ಮೋದಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇದೆಲ್ಲದರ ಪೂರ್ವಭಾವಿಯಾಗಿ ನಾಳೆ (ಶುಕ್ರವಾರ) ಎನ್​ಡಿಎ ಸದಸ್ಯರು ಸಭೆ ನಡೆಸಲಿದ್ದಾರೆ.

ನಾಳೆ ಎನ್‌ಡಿಎ ಸಂಸದರ ಸಭೆ; ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ
ಎನ್‌ಡಿಎ ಸದಸ್ಯರು
Follow us
ಸುಷ್ಮಾ ಚಕ್ರೆ
|

Updated on: Jun 06, 2024 | 10:17 PM

ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಶುಕ್ರವಾರ (ಜೂನ್ 7) ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಹೊಸದಾಗಿ ಚುನಾಯಿತ ಸಂಸದರ ಸಭೆಯನ್ನು ನಡೆಸಲು ಸಜ್ಜಾಗಿದೆ. ಮಾಹಿತಿಯ ಪ್ರಕಾರ, ಹೊಸದಾಗಿ ಆಯ್ಕೆಯಾದ ಸಂಸದರು ನರೇಂದ್ರ ಮೋದಿ (Narendra Modi) ಅವರನ್ನು ಆಯ್ಕೆ ಮಾಡುತ್ತಾರೆ. ಮೋದಿ ಅವರ ನಾಯಕರಾಗಿ, ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭವು ಭಾನುವಾರ (ಜೂನ್ 9) ನಡೆಯುವ ಸಾಧ್ಯತೆಯಿದೆ. ಆದರೆ ಅಂತಿಮ ದಿನಾಂಕದ ಬಗ್ಗೆ ಅಧಿಕೃತ ದೃಢೀಕರಣ ಇನ್ನೂ ಬರಬೇಕಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರ ಮಿತ್ರಪಕ್ಷಗಳೊಂದಿಗೆ ಸೇರಿ ಒಟ್ಟು 293 ಸ್ಥಾನಗಳನ್ನು ಪಡೆದಿದೆ. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ತಮ್ಮ ರಾಜ್ಯಗಳಲ್ಲಿ ಕ್ರಮವಾಗಿ 16 ಮತ್ತು 12 ಸ್ಥಾನಗಳನ್ನು ಗೆದ್ದಿದ್ದು, ಎನ್‌ಡಿಎಗೆ ಬೆಂಬಲ ನೀಡಿವೆ.

ಇದನ್ನೂ ಓದಿ: PM Modi Oath Ceremony: ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಿಶ್ವ ನಾಯಕರಿಗೆ ಆಹ್ವಾನ, ಈ ಇಬ್ಬರು ಬರುವುದು ಪಕ್ಕಾ

ಎನ್‌ಡಿಎ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾದ ನಂತರ, ಸಂಸದರು, ಟಿಡಿಪಿಯ ಎನ್. ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಸೇರಿದಂತೆ ಒಕ್ಕೂಟದ ಪ್ರಮುಖ ವ್ಯಕ್ತಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಪ್ರಧಾನಿ ಜೊತೆಯಲ್ಲಿ ಬರುವ ಸಾಧ್ಯತೆಯಿದೆ. ಈ ಸಭೆಯಲ್ಲಿ, ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಬೆಂಬಲಿಸುವ ಸಂಸದರ ಪಟ್ಟಿಯನ್ನು ಅವರಿಗೆ ಪ್ರಸ್ತುತಪಡಿಸಲಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಪಿತೂರಿ; ಕಾಂಗ್ರೆಸ್​ನ ಷೇರು ಮಾರ್ಕೆಟ್ ಆರೋಪಕ್ಕೆ ಬಿಜೆಪಿ ತಿರುಗೇಟು

ಈಗಾಗಲೇ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ವ್ಯಾಪಕ ಚರ್ಚೆಯಲ್ಲಿ ತೊಡಗಿದ್ದು, ಬಿಜೆಪಿ ಹೊಸ ಸರ್ಕಾರವನ್ನು ರಚಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದೆ. ಕೇಂದ್ರ ಸಚಿವ ಸಂಪುಟದಲ್ಲಿ ತಮ್ಮ ಪಕ್ಷಕ್ಕೆ ಪ್ರಾತಿನಿಧ್ಯದ ಪಾಲನ್ನು ನೀಡುವಂತೆ ಹಿರಿಯ ಜೆಡಿಯು ನಾಯಕರೊಬ್ಬರ ಕರೆಯ ನಡುವೆ ಈ ಚರ್ಚೆಗಳು ಬಂದಿವೆ. “ಕ್ಯಾಬಿನೆಟ್ ಸ್ಥಾನಗಳ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ನಿರ್ಧರಿಸುತ್ತಾರೆ. ಆದರೆ, ಅದು ಗೌರವಯುತವಾಗಿರಬೇಕು” ಎಂದು ಜೆಡಿಯು ನಾಯಕ ಮತ್ತು ಬಿಹಾರದ ಗ್ರಾಮೀಣಾಭಿವೃದ್ಧಿ ಸಚಿವ ಶ್ರವಣ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ