ನನಗೆ ಬೇಕಾದ ಖಾತೆ ಸಿಕ್ಕಿಲ್ಲ, 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ: ನೂತನ ಸಚಿವ ಎಂಟಿಬಿ ನಾಗರಾಜ್

New Minister MTB Nagaraj : ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.

ನನಗೆ ಬೇಕಾದ ಖಾತೆ ಸಿಕ್ಕಿಲ್ಲ, 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ: ನೂತನ ಸಚಿವ ಎಂಟಿಬಿ ನಾಗರಾಜ್
ಎಂಟಿಬಿ ನಾಗರಾಜ್
Follow us
TV9 Web
| Updated By: guruganesh bhat

Updated on:Aug 07, 2021 | 4:01 PM

ಬೆಂಗಳೂರು: ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹOಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ನೂತನ ಸಚಿವ ಎಂಟಿಬಿ ನಾಗರಾಜ್ ಅಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಖಾತೆಯನ್ನು ನೀಡಿದ್ದರು. ಆದರೆ ಈ ಖಾತೆಯ ನೀಡಿರುವುದು ತಮಗೆ ಸಮಾಧಾನ ತಂದಿಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಸಹ  ಅಸಮಾಧಾನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸಚಿವರಿಗೆ ಖಾತೆ ಹಂಚಿದ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಕೇಳಿದ ಖಾತೆ ನೀಡದಿರುವುದು ನನಗೆ ಅಸಮಾಧಾನ ಉಂಟುಮಾಡಿದೆ. ಕೇಳಿದ ಖಾತೆ ಏಕೆ ನೀಡಲಿಲ್ಲ ಅನ್ನೋದು ನನಗೆ ತಿಳಿಸಬೇಕು. ಸಿಎಂ ಬೊಮ್ಮಾಯಿರನ್ನು ಭೇಟಿಯಾಗಿ ಮನವಿ ಮಾಡುವೆ. ನನಗೆ ಅರ್ಹತೆ ಇಲ್ವಾ?, ನಾನು ಭ್ರಷ್ಟಾಚಾರ ಮಾಡಿದ್ದೀನಾ? ನನಗೆ ಸಾಮರ್ಥ್ಯ ಇಲ್ವಾ? ನಾನೇನು ಅನ್‌ ಫಿಟ್ ಇದೀನಾ? ಎಂದು ಕೇಳುವೆ. ಅವರು ನೀನು ನಾಲಾಯಕ್ ಅಂತ ಅನ್ನೋದನ್ನಾದ್ರೂ ಹೇಳಲಿ. ಸರ್ಕಾರ ಬರಲಿಕ್ಕೆ ಕಾರಣವಾದವರಲ್ಲಿ ನಾನೂ ಮೊದಲಿಗ. ಮೊದಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ನಾನೇ. ನಾನು ರಾಜೀನಾಮೆ ನೀಡಿದಾಗ ಯಾರೂ ಕೊಟ್ಟಿರಲಿಲ್ಲ. ನಾನು ಕೇಳಿದ ಖಾತೆ ನನಗೆ ಮತ್ತು ಸಿಎಂಗೆ ಮಾತ್ರ ಗೊತ್ತು. ಕೇಳಿದ ಖಾತೆ ಸಿಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಅವರು ಬಳ್ಳಾರಿ ನಗರದಲ್ಲಿ ಎಚ್ಚರಿಕೆ ನೀಡಿದರು.

ಸಚಿವ ಆನಂದ್ ಸಿಂಗ್ ಅಸಮಧಾನದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ‘ಎಲ್ಲರಿಗೂ ಕೇಳಿದ ಖಾತೆ ನೀಡಲು ಆಗಲ್ಲ. ನಾಳೆ ಸಚಿವ ಆನಂದ್ ಸಿಂಗ್ ಜತೆ ಚರ್ಚೆ ಮಾಡುತ್ತೇನೆ. ಸಂಪುಟ ರಚನೆಯಾದಾಗ ಅಸಮಾಧಾನ ಸಹಜ’ ಎಂದು ತಿಳಿಸಿದರು.

ಇದನ್ನೂ ಓದಿ: 

29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ತನ್ನಲ್ಲಿಯೇ ಉಳಿಸಿಕೊಂಡ ಸಿಎಂ ಬೊಮ್ಮಾಯಿ

School Opening: 9, 10, 12ನೇ ತರಗತಿಗಳಿಗೆ ಶಾಲಾ ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ: ಬಸವರಾಜ ಬೊಮ್ಮಾಯಿ

(New Minister MTB Nagaraj says I dont get the ministry I want will make a decision in 2 to 3 days)

Published On - 3:56 pm, Sat, 7 August 21

ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ