ಕೇಸರೀಕರಣ Vs ಕಾಂಗ್ರೆಸ್ಸೀಕರಣ; ರಾಜಕೀಯ ಹಗ್ಗಜಗ್ಗಾಟಕ್ಕೆ ಗುರಿಯಾದ ಪೊಲೀಸ್ ಇಲಾಖೆ

|

Updated on: May 24, 2023 | 6:53 PM

ಪೊಲೀಸ್ ಇಲಾಖೆಯ ಕೇಸರಿಕರಣ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉನ್ನತ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವುದು ಹಾಗೂ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ಸೀಕರಣ ಮಾಡಲು ಹೊರಟಿದೆ ಎಂದು ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಟೀಕಿಸಿರುವುದು ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.

ಕೇಸರೀಕರಣ Vs ಕಾಂಗ್ರೆಸ್ಸೀಕರಣ; ರಾಜಕೀಯ ಹಗ್ಗಜಗ್ಗಾಟಕ್ಕೆ ಗುರಿಯಾದ ಪೊಲೀಸ್ ಇಲಾಖೆ
ಪೊಲೀಸ್ ಅಧಿಕಾರಿಗಳೊಂದಿಗೆ ಡಿಕೆ ಶಿವಕುಮಾರ್ ಸಭೆ
Follow us on

ಬೆಂಗಳೂರು: ಪೊಲೀಸ್ ಇಲಾಖೆಯ ಕೇಸರಿಕರಣ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಉನ್ನತ ಪೊಲೀಸ್ ಅಧಿಕಾರಿಗಳನ್ನು (Police Officials) ತರಾಟೆಗೆ ತೆಗೆದುಕೊಂಡಿರುವುದು ಹಾಗೂ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ಸೀಕರಣ ಮಾಡಲು ಹೊರಟಿದೆ ಎಂದು ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಟೀಕಿಸಿರುವುದು ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಪರಿಣಾಮವಾಗಿ ಪೊಲೀಸ್ ಇಲಾಖೆ ರಾಜಕೀಯ ಹಗ್ಗಜಗ್ಗಾಟಕ್ಕೆ ಗುರಿಯಾಗಿದೆ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕುತ್ತೀರಿ ಅಂದರೆ ಹೇಗೆ? ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡೇ ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ ಎಂದು ಡಿಕೆ ಶಿವಕುಮಾರ್ ಮಂಗಳವಾರ ಎಚ್ಚರಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಆರಗ ಜ್ಞಾನೇಂದ್ರ, ಪೊಲೀಸರನ್ನು ಕಾಂಗ್ರೆಸ್ಸೀಕರಣ ಮಾಡುವ ಪ್ರಯತ್ನವನ್ನು ಬುಧವಾರದ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾಡಿದ್ದಾರೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ತುಂಬಾ ಚೆನ್ನಾಗಿದೆ. ಧರ್ಮ, ಜಾತಿ ಆಧಾರದ ಮೇಲೆ ಯಾರೂ ಏನೂ ಮಾಡುವುದಿಲ್ಲ. ನಿನ್ನೆ ಹೀಗೆಯೇ ಇರಬೇಕು, ನಾವು ಹೇಳಿದಂತೆ ಮಾಡಬೇಕು ಅಂತಾ ಪೊಲೀಸರಿಗೆ ಒಂದು ತರಹ ಧಮ್ಕಿ ಹಾಕಿದ್ದಾರೆ. ಇವರು ಕಾನೂನು ಮೀರಿ ಹೇಳಿದವರ ಮೇಲೆ ಕೇಸ್ ಹಾಕಬೇಕು, ಇವರ ಹೇಳಿದವರನ್ನು ಬಿಡಬೇಕು. ಈ ಹಿಂದೆಯೂ ಕೂಡ ಇವರು ಈ ರೀತಿ ಮಾಡಿದ್ದರು. ಪಿಎಫ್ಐ ಸಂಘಟನೆಯನ್ನು ಸಾಕಿ ಬೃಹದಾಕಾರವಾಗಿ ಬೆಳೆಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಡಿಕೆ ಶಿವಕುಮಾರ್

ಈ ಮಧ್ಯೆ, ಕೇಸರೀಕರಣ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿವೆ. ಇವತ್ತು ಇದನ್ನು ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಾ ಇದೆ. ಕಾಂಗ್ರೆಸ್​​ನ ಹೀನ ರಾಜಕಾರಣ ಮತ್ತು ಸಿದ್ದರಾಮಯ್ಯ ಮಾನಸೀಕತೆ ಬಯಲಾಗಿದೆ. ಒಬ್ಬ ಮುಖ್ಯಮಂತ್ರಿ ಸಾಂವಿಧಾನಿಕವಾಗಿ ಆತನ ಧಾರ್ಮಿಕ ಆಚರಣೆಗೆ ಅಡ್ಡಿ ಬರೋದು ಸರಿಯಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ಸೀಕರಣ ಅಂದರೆ ಬಸವ ತತ್ವ, ಗುರು ನಾರಾಯಣ ತತ್ವ ಎಂದ ಪ್ರಿಯಾಂಕ್ ಖರ್ಗೆ

ಬಿಜೆಪಿ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಇಡೀ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದು ಬಿಜೆಪಿ. ಹೀಗಾಗಿ ನಿನ್ನೆ ಡಿಕೆ ಶಿವಕುಮಾರ್ ತಾಕೀತು ಮಾಡಿದ್ದಾರೆ. ನಿಮ್ಮ (ಪೊಲೀಸ್) ವೈಯಕ್ತಿಕ ರಾಜಕೀಯ ಏನೇ ಇರಲಿ. ಅದನ್ನು ಮತದಾನದ ಮೂಲಕ ನೀವು ತೋರಿಸಿಕೊಳ್ಳಿ. ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ಸೀಕರಣ ಅಂದ್ರೆ ಬಸವ ತತ್ವ, ಕಾಂಗ್ರೆಸ್ಸೀಕರಣ ಅಂದ್ರೆ ಗುರು ನಾರಾಯಣ ತತ್ವ. ಸಂವಿಧಾನವನ್ನು ಅನುಷ್ಠಾನಗೊಳಿಸುವುದು ಕಾಂಗ್ರೆಸ್ಸೀಕರಣ. ನಾವು ಕಾನೂನು ಚೌಕಟ್ಟಿನಿಂದಲೇ ಕೆಲಸ ಮಾಡೋದು. ನಾಗಪುರದಿಂದ ಆದೇಶ ಮಾಡಿಸಿಕೊಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ